ಕಲಬುರಗಿ| ವಾಡಿ ಪಟ್ಟಣ ಬಂದ್‌ : ಅಮಿತ್ ಶಾ ಶವಯಾತ್ರೆ ಮಾಡಿ ಆಕ್ರೋಶ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ಖಂ ನೀಡಿರುವುದನ್ನು ಖಂಡಿಸಿ, ಶನಿವಾರ ಬೌದ್ಧ ಸಮಾಜದ ನೇತ್ರತ್ವದಲ್ಲಿ ಹಮ್ಮಿಕೊಂಡಿದ್ದ ವಾಡಿ ಪಟ್ಟಣ ಬಂದ್‌ಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಸಾಥ್‌ ನೀಡಿದವು.

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಸಂಪೂರ್ಣ ಬಂದ್‌ ವಿವಿಧ ಅಂಗಡಿ ಮುಗ್ಗಟ್ಟು, ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಹೋರಾಟಕ್ಕೆ ಬೆಂಬಲಿಸಿದರು. ಪಟ್ಟಣದ ಕುಂದನೂರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಅಮಿತ್ ಶಾ ಅವರ ಶವಯಾತ್ರೆ ಮೆರವಣಿಗೆ ಮಾಡಿ ಅಂಬೇಡ್ಕರ್ ವೃತ್ತದ ಬಳಿ ಅವರ ಪ್ರತಿಕೃತಿ ದಹಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸಲ್ಲಿಸಿದರು.

“ಡಿ.18ರಂದು ರಾಜ್ಯಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎನ್ನುವುದು ಫ್ಯಾಷನ್ ಆಗಿದೆ. ಅದರ ಬದಲು ದೇವರ ಹೆಸರು ಹೇಳಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಸಿಗುತ್ತಿತ್ತುʼ ಎಂಬ ಆಕ್ಷೇಪಾರ್ಹವಾಗಿ ಆಡಿದ ಮಾತುಗಳು ಡಾ.ಅಂಬೇಡ್ಕರ್ ಅವರನ್ನು ಅಪಮಾನಿಸಿದ್ದಾರೆ. ಇದರಿಂದ ಕೋಟ್ಯಾಂತರ ಅಂಬೇಡ್ಕರ್‌ ಅನುಯಾಯಿಗಳ ಭಾವನೆಗೆ ದಕ್ಕೆ ತಂದಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 12 22 at 8.37.19 AM

ʼಶತಮಾನಗಳಿಂದ ಇದ್ದ ಜಾತಿ ವರ್ಣ ವ್ಯವಸ್ಥೆ ದಾಸ್ಯದ ಸಂಕೋಲೆಯಿಂದ ಬಿಡುಗಡೆಗೊಳಿಸಿದ ಬಾಬಾ ಸಾಹೇಬ್ ಅಂಬೇಡ್ಕರ್, ಇಂದು ದೇಶ ಸ್ವಾಭಿಮಾನದಿಂದ ತಲೆಯೆತ್ತಿ ನಡೆಯುತ್ತಿದ್ದರೆ ಅದಕ್ಕೆ ಬಾಬಾ ಸಾಹೇಬರ ಹೋರಾಟವೇ ಕಾರಣ. ಶೋಷಿತ, ತಳಸಮುದಾಯದಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟ ಅಂಬೇಡ್ಕರ್‌ ಅವರಿಗೆ ಅಮಿತ್‌ ಶಾ ಅವಮಾನಿಸಿದ್ದು ತೀವ್ರವಾಗಿ ಖಂಡಿಸುತ್ತೇವೆʼ ಎಂದರು.

ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ತೀವ್ರ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಂಪುಟದಿಂದ ಗೃಹ ಸಚಿವ ಅಮಿತ್‌ ಶಾ ವಜಾಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಬೌದ್ಧ ಸಮಾಜ ಅಧ್ಯಕ್ಷ ಟೋಪಣ್ಣ ಕೋಮಟೆ, ಖಜಾಂಚಿ ಚಂದ್ರಶೇಖರ ಮೆನುಗಾರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯದ್‌ ಮೆಹಮೂದ್‌ ಸಾಹೇಬ್‌ ಹಾಗೂ ಬಲರಾಮ ಮಟ್ಟ, ಮಲ್ಲೇಶ ಚುಕ್ಕೇರ, ಮಲ್ಲಿಕಾರ್ಜುನ್ ತುನ್ನೂರ, ಸತೀಶ ಬಟ್ಟರ್ಕಿ, ಶರಣಬಸು ಸಿರೂರಕರ್, ರದ್ದೇವಾಡಿ, ಮಲ್ಲಿಕಾರ್ಜುನ ಕಟ್ಟಿ, ಮಲ್ಲೇಶ ನಾಟೇಕರ್‌, ಗೊಲ್ಲಾಳಪ್ಪ ಬಡಿಗೇರ,‌ ಸೀತಾ ಬಡಿಗೇರ್ ರವಿ, ಕಾಶಿನಾಥ ಶೇಳ್ಳಗಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಸಾರ್ವಜನಿಕರು, ಅಂಗಡಿ, ಮುಗ್ಗಟ್ಟು ಮಾಲಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...