ಕಲಬುರಗಿ | ವಕ್ಫ್‌ ಅದಾಲತ್ ಕಾಟಾಚಾರಕ್ಕಲ್ಲ, ಗಂಭೀರವಾಗಿ ಪರಿಗಣಿಸಿ : ಸಚಿವ ಜಮೀರ್

Date:

ವಕ್ಫ್‌ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಉಡಾಫೆ ಧೋರಣೆ ತೋರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವಕ್ಫ್‌ ಅದಾಲತ್ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಪ್ರತಿ ಜಿಲ್ಲೆಯಲ್ಲಿ ವಕ್ಫ್‌ ಅದಾಲತ್ ನಡೆಸಲಾಗುತ್ತಿದೆ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಉಡಾಫೆ ಧೋರಣೆ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಖಾತೆ, ಒತ್ತುವರಿ ತೆರವು, ಖಬರಸ್ಥಾನ ವಿಚಾರಗಳಿಗೆ ಸಂಬಂಧಿಸಿದ ಮನವಿಗಳ ಬಗ್ಗೆ ಇನ್ನೊಂದು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗಡುವು ನೀಡಿದ ಸಚಿವರು, ಜಿಲ್ಲಾ ವಕ್ಫ್‌ ಅಧಿಕಾರಿಗಳು ಆಸ್ತಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ವಿಷಯದಲ್ಲಿ ಅಸಡ್ಡೆ ತೋರುತ್ತಿದ್ದು, ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವಕ್ಫ್‌ ಅದಾಲತ್ 1

ಜಿಲ್ಲಾ ವಕ್ಫ್‌ ಅಧಿಕಾರಿಗಳು ನಿರಂತರವಾಗಿ ಜಿಲ್ಲಾಡಳಿತ ಜತೆ ಸಂಪರ್ಕದಲ್ಲಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ವಕ್ಫ್‌ ಆಸ್ತಿ ದೇವರ ಆಸ್ತಿ. ಇದನ್ನು ರಕ್ಷಣೆ ಮಾಡುವುದು ಪುಣ್ಯದ ಕೆಲಸ. ವಕ್ಫ್‌ ಅದಾಲತ್‌ನಿಂದ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಾಕಷ್ಟು ಸಮಸ್ಯೆಗಳು ಬಗೆಹರಿದಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಕ್ಫ್‌ ಅದಾಲತ್‌ನಲ್ಲಿ ಸಲ್ಲಿಕೆಯಾದ ಮನವಿಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿ, ತ್ವರಿತ ಕ್ರಮ ಕೈಗೊಳ್ಳಲು ಸಚಿವರು ಸೂಚನೆ ನೀಡಿದ ಸಚಿವ ಜಮೀರ್, ಒತ್ತುವರಿ ತೆರವು ಸಂಬಂಧ ಕೆಲವು ಪ್ರಕರಣಗಳಲ್ಲಿ ವಕ್ಫ್‌ ಬೋರ್ಡ್ ಪರ ನ್ಯಾಯಾಲಯದ ಆದೇಶ ಬಂದಿದೆ. ಪೊಲೀಸ್ ರಕ್ಷಣೆಯಲ್ಲಿ ತೆರವು ಮಾಡಿಕೊಡಲು ನಿರ್ದೇಶನ ನೀಡಿದರು. ವಕ್ಫ್‌ ಅಧಿಕಾರಿಗಳು ನಮ್ಮ ಆಸ್ತಿಗೆ ಕಾಂಪೌಂಡ್ ನಿರ್ಮಿಸಿ ಸಂರಕ್ಷಣೆ ಮಾಡಲು ಸೂಚಿಸಿದರು.

ಇದನ್ನು ಓದಿದ್ದೀರಾ? ನಾಗಮಂಗಲ ಗಲಭೆ | ಸುಳ್ಳು ಸುದ್ದಿ ಹರಡಿದ್ದ ಬಿಜೆಪಿಯ ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್‌ಐಆರ್

ವಕ್ಫ್‌ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಸಿಇಒ ಜೀಲಾನಿ ಮೊಕಾಶಿ, ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಎಸ್ ಪಿ ಶ್ರೀನಿವಾಸುಲು, ಯಾದಗಿರಿ ಜಿಲ್ಲಾಧಿಕಾರಿ ಸುಶೀಲ ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...