ಚಾಮರಾಜನಗರ | ಸುವರ್ಣಾವತಿ ಜಲಾಶಯದಲ್ಲಿ ಜಲಸಾಹಸ ಕ್ರೀಡೋತ್ಸವಕ್ಕೆ ಚಾಲನೆ

Date:

ಚಾಮರಾಜನಗರ ತಾಲ್ಲೂಕಿನ, ಅಟ್ಟುಗೂಳಿಪುರ ಗ್ರಾಮದಲ್ಲಿರುವ ಸುವರ್ಣಾವತಿ ಜಲಾಶಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ 2 ದಿನಗಳ ಜಲ ಸಾಹಸ ಕ್ರೀಡೋತ್ಸವಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ಜಾನಪದ ಕಲೆಗಳ ತವರೂರು ಚಾಮರಾಜನಗರ ಜಿಲ್ಲೆ ಪ್ರವಾಸಿ ತಾಣವಾಗಿಯೂ ಹೆಸರುವಾಸಿಯಾಗಿದೆ. ವಿಶೇಷ ಅನುದಾನ ಬಳಸಿ ಸುವರ್ಣಾವತಿ ಜಲಾಶಯವನ್ನು ಅಭಿವೃದ್ಧಿಪಡಿಸಲು 2008ರಿಂದಲೂ ಬೇಡಿಕೆ ಇಡುತ್ತಿದ್ದೇನೆ. ಜಲಾಶಯವನ್ನು ಉತ್ತಮ ಪ್ರವಾಸಿ ತಾಣವಾಗಿ ಮಾರ್ಪಡಿಸಲು ₹43 ಕೋಟಿ ರೂಪಾಯಿಗಳ ಅಂದಾಜು ಪಟ್ಟಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದರು.

ಜಲ ಸಾಹಸ ಕ್ರೀಡೆಗೆ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದೆ. ಸುವರ್ಣಾವತಿ ಜಲಾಶಯ ಸೇರಿದಂತೆ ಸುತ್ತಮುತ್ತಲಿನ ಕೆರೆಗಳು ತುಂಬಿದರೆ ಜಲ ಸಾಹಸ ಕ್ರೀಡೆಗೆ ಅನುಕೂಲವಾಗಲಿದೆ. ಕ್ರೀಡೋತ್ಸವದಲ್ಲಿ ಸಾರ್ವಜನಿಕರು, ಯುವಜನರು ಹೆಚ್ಚಾಗಿ ಪಾಲ್ಗೊಂಡು ಮುಂದಿನ ದಿನಗಳಲ್ಲಿ ಜಲಸಾಹಸ ಕ್ರೀಡೆ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈಜುಕೊಳ (ಸ್ವಿಮ್ಮಿಂಗ್ ಫೂಲ್) ನಿರ್ಮಾಣಕ್ಕಾಗಿ ₹15 ಕೋಟಿ ರೂಪಾಯಿ ಅಂದಾಜುಪಟ್ಟಿ ತಯಾರಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಕ್ರೀಡಾಪಟುಗಳಿದ್ದು, ಕ್ರೀಡೆಗೆ ಪ್ರೇರೇಪಿಸಲು ಜಲಸಾಹಸ ಕ್ರೀಡೆ ಸಹಕಾರಿಯಾಗಿದೆ. ರಾಜ್ಯಮಟ್ಟದಲ್ಲಿ ಜಲಸಾಹಸ ಕ್ರೀಡೆ ಪ್ರಚಲಿತವಾಗಬೇಕು. ಜಲ ಸಾಹಸ ಕ್ರೀಡೆಯನ್ನು ಜಿಲ್ಲೆಯಲ್ಲಿ ಹೆಚ್ಚಾಗಿ ಆಯೋಜಿಸಬೇಕು. ಜಿಲ್ಲೆಯ ಯುವಕರು ಹಾಗೂ ಸಾರ್ವಜನಿಕರು ಜಲಸಾಹಸ ಕ್ರೀಡೆಯ ಸದುಪಯೋಗ ಪಡೆಯುವಂತೆ ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಎರಡು ದಿನಗಳ ಕಾಲ ಆಯೋಜನೆಯಾಗಿರುವ ಜಲಸಾಹಸ ಕ್ರೀಡೋತ್ಸವದಲ್ಲಿ ಮೊದಲ ದಿನ ಯುವಕರು, ವಿವಿಧ ಕಾಲೇಜು ವಿದ್ಯಾರ್ಥಿಗಳು ಮತ್ತು ಎರಡನೇ ದಿನ ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ. ಜಲಸಾಹಸ ಕ್ರೀಡೆ ಆಯೋಜನೆ ಕ್ರೀಡಾಪಟುಗಳು ಹೊರಹೊಮ್ಮಲು ಉತ್ತಮ ವೇದಿಕೆಯಾಗಲಿದೆ. ಕ್ರೀಡೆಯಲ್ಲಿ ಭಾಗವಹಿಸಲು ತರಬೇತಿಯೂ ಅಗತ್ಯವಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನಂಜನಗೂಡಿನಲ್ಲಿ ರಾಜ್ಯ ಮಟ್ಟದ ಹೊನಲು-ಬೆಳಕಿನ ಕುಸ್ತಿ ಪಂದ್ಯಾವಳಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿಯ ಪ್ರಶಿಕ್ಷಕ ಶಬ್ಬೀರ್, ದಿನೇಶ್ ಎಸ್. ಸುವರ್ಣಾ, ಅಟ್ಟುಗೂಳಿಪುರ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮರಾಜ್, ಇತರರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...