ಎತ್ತಿನಹೊಳೆ | 100 ದಿನದಲ್ಲಿ 42 ಕಿ.ಮೀ ವರೆಗೆ ನೀರು ಹರಿಯಲಿದೆ: ಡಿಕೆ ಶಿವಕುಮಾರ್

Date:

  • ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ನೀರು ಹರಿಸಲಾಗುವುದು
  • ‘ಯೋಜನೆಯ ಸಂಬಂಧ ಈಗಾಗಲೇ 114 ಸಾವಿರ ಕೋಟಿ ವೆಚ್ಚವಾಗಿದೆ’

100 ದಿನದಲ್ಲಿ 42 ಕಿ.ಮೀ ವರೆಗಿನ ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ನೀರು ಹರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊದಲ ಹಂತದ ಯೋಜನೆ ಸಾಗುವ ಜಾಗದಲ್ಲಿ 10 ಸಾವಿರ ಅಡಿ ಭೂಮಿ ಸಂಬಂಧ ವ್ಯಾಜ್ಯ ನಡೆಯುತ್ತಿದ್ದು ಇದಕ್ಕಾಗಿ ಮೂರು ವರ್ಷದಿಂದ ಕಾಮಗಾರಿ ಕುಂಟುತ್ತಾ ಸಾಗಿದೆ. ಈ ಬಗ್ಗೆಯೂ ಗಮನ ಹರಿಸುವಂತೆ ಹಾಗೂ ಕೂಡಲೇ ಪರಿಹಾರ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

“ಎತ್ತಿನಹೊಳೆ ಯೋಜನೆಯ ಸಂಬಂಧ ಈಗಾಗಲೇ 114 ಸಾವಿರ ಕೋಟಿ ವೆಚ್ಚವಾಗಿದೆ. ಮೊದಲ ಹಂತದ ನೀರು ಹರಿಸಲು ಅರಣ್ಯ ಇಲಾಖೆ, ಕಂದಾಯ ಮತ್ತು ವಿದ್ಯುತ್ ಸರಬರಾಜು ಇಲಾಖೆ ಸಮನ್ವಯದಿಂದ ಕೆಲಸ ಮಾಡುವ ಮೂಲಕ ಯೋಜನೆ ಸಾಕಾರಗೊಳಿಸಲು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆಯಾದಲ್ಲಿ, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಚಿಂತನೆ ನಡೆದಿದ್ದು, ಮುಂದಿನ ಹಂತದಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರನ್ನು ಎತ್ತುವಳಿ ಮಾಡುವುದು ಪ್ರಥಮ ಆದ್ಯತೆಯಾಗಿದ್ದು, ನಂತರ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಅವರೇ ಪಾದಯಾತ್ರೆ ಮಾಡಿ, ಅವರೇ ನೀರು ಬಿಟ್ಟಿದ್ದಾರೆ, ಡಿಕೆ ಶಿವಕುಮಾರ್‌ದು ನವರಂಗಿ ಆಟ: ಸಿಟಿ ರವಿ ಕಿಡಿ

ಮಂಡ್ಯ ಪ್ರತಿಭಟನೆ ರಾಜಕೀಯ ಪ್ರೇರಿತ

”ತಮಿಳುನಾಡಿಗೆ 32 ಟಿಎಂಸಿ ನೀರು ಬಿಡಬೇಕು. ಈಗಾಗಲೇ 24 ಟಿಎಂಸಿ ನೀರು ಬಿಡಲಾಗಿದೆ. ಆದರೆ, ತಮಿಳುನಾಡಿಗೆ ನೀರು ಹರಿಸುವ ಸಂಬಂಧ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ” ಎಂದು ದೂರಿದರು.

“ಉಳಿದ ಎಂಟು ಟಿಎಂಸಿ ನೀರು ಬಿಡಲು ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ. ಈ ಬಗ್ಗೆ ಪ್ರತಿಪಕ್ಷಗಳ ಸಭೆಯನ್ನು ಕರೆಯಲಾಗಿದ್ದು, ರೈತರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...