ಚಿಕ್ಕಬಳ್ಳಾಪುರ | ಅಧಿಕಾರ ಬೇಕಿಲ್ಲ, ಸ್ವಜಾತಿ ಹಿತವೇ ಮುಖ್ಯ; ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ರಮೇಶ್‌

Date:

ನನ್ನನ್ನ ಸರಕಾರ ಕೂಡಲೇ ಅಧಿಕಾರದಿಂದ ಕೆಳಗಿಳಿಸಿದರೂ ಚಿಂತೆಯಿಲ್ಲ. ನನಗೆ ಸ್ವಜಾತಿ ಹಿತ ಮುಖ್ಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ರಮೇಶ್‌ ಕಿಡಿಕಾರಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ವೈಯಕ್ತಿಕ ವರ್ಚಸ್ಸಿನಿಂದಷ್ಟೇ ಸರಕಾರ ನನಗೆ ಅಧ್ಯಕ್ಷ ಸ್ಥಾನ ಕೊಟ್ಟಿರುವುದು. ನಾವು ಮಾಡಿರುವ ಉತ್ತಮ ಕಾರ್ಯಕ್ರಮಗಳಿಂದ ಸರಕಾರ ನನಗೆ ಅಧಿಕಾರ ಕೊಟ್ಟಿದೆ. ಇದೀಗ ಅಧಿಕಾರ ಹೋದರೂ ಅಡ್ಡಿಯಿಲ್ಲ ಎಂದು ಹೇಳಿದರು.

ಸರಕಾರ ನಡೆಸಿರುವ ಜಾತಿ ಗಣತಿ ಸಂಪೂರ್ಣ ಅಪೂರ್ಣವಾಗಿದೆ. ಇಡೀ ರಾಜ್ಯಾದ್ಯಂತ ಸುಮಾರು 1 ಕೋಟಿ ಒಕ್ಕಲಿಗ ಜನಸಂಖ್ಯೆಯಿದೆ. ಸರಕಾರದ ಜಾತಿಗಣತಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಬಾರೀ ಅನ್ಯಾಯ ಆಗಿದೆ. ಕಾಂತರಾಜ್‌ ವರದಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿರುವುದು ಬೆಳಕಿಗೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮೂರು ಜಿಲ್ಲೆಗಳು ಸೇರಿ ಶೇ.90ರಷ್ಟು ಮರುಸ್‌ ಒಕ್ಕಲಿಗ ಸಮುದಾಯ ಇದೆ. ಒಕ್ಕಲಿಗ ಸಂಘ ನಡೆಸಿರುವ ಆಂತರಿಕ ವರದಿಯ ಪ್ರಕಾರ ಇದುವರೆಗೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 70 ಸಾವಿರ ಜನ 18ವರ್ಷಕ್ಕೆ ಮೇಲ್ಪಟ್ಟವರು ಸದಸ್ಯತ್ವ ಪಡೆದುಕೊಂಡಿದ್ದಾರೆ. ಹೀಗಿರುವಾಗ ಸರಕಾರದ ವರದಿಯಲ್ಲಿ ಅತೀ ಕಡಿಮೆ ಜನಸಂಖ್ಯೆಯನ್ನು ತೋರಿಸಲಾಗಿದೆ ಎಂದು ದೂರಿದರು.

2011ರಲ್ಲಿ ಜಾತಿಗಣತಿ ನಡೆದಿತ್ತು. ಬಳಿಕ 2021ರಲ್ಲಿ ಜಾತಿಗಣತಿ ನಡೆಯಬೇಕಿತ್ತು. ಆದರೆ ನಡೆದಿಲ್ಲ. ಕಾಂತರಾಜ್‌ ವರದಿಯನ್ನು ನಮ್ಮ ಸಮುದಾಯ ಸಂಪೂರ್ಣ ಬಹಿಷ್ಕರಿಸುತ್ತದೆ. ಆಧಾರ್‌ ಕಾರ್ಡ್‌ ಬಳಸಿ ಜಿಯೋ ಟ್ಯಾಗ್‌ ಬಳಸಿ ಸರಕಾರ ಮತ್ತೊಮ್ಮೆ ಮರು ಜಾತಿಸಮೀಕ್ಷೆ ನಡೆಸಲಿ. ಎಸಿ ಕಚೇರಿಯಲ್ಲಿ ಕುಳಿತು ಸಮೀಕ್ಷೆ ನಡೆಸಿದರೆ ಅದು ಸರಿಯಾದ ಕ್ರಮವಲ್ಲ. ಅದನ್ನು ನಾವು ಒಪ್ಪುವುದಿಲ್ಲ. ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಿ. ಈ ಮೂಲಕ ಸಾಮಾಜಿಕ ನ್ಯಾಯ ಒದಗಿಸಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಜಾತಿಗಣತಿ ವರದಿ ವಿರೋಧಿಸುತ್ತಿರುವ ಜಾತಿವಾದಿ ಲಿಂಗಾಯತರು

ಮೇ 2ರಂದು ಮತ್ತೊಂದು ವಿಶೇಷ ಸಂಪುಟ ಸಭೆ ನಡೆಯಲಿದೆ ಎಂದು ವರದಿಯಾಗಿದೆ. ಅಂದು ಸರಕಾರ ಸರಿಯಾದ ತೀರ್ಮಾನ ಕೈಗೊಳ್ಳದಿದ್ದರೆ. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಒಗ್ಗೂಡಿ ಉಗ್ರ ಹೋರಾಟ ನಡೆಸಲಿದ್ದೇವೆ. ಸರಕಾರ ಇನ್ನೂ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಂಜುನಾಥ್‌, ಕೃಷ್ಣಪ್ಪ, ಗಂಗಾಧರ್‌, ಜನಾರ್ಧನ್‌ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...