ವಿಪಕ್ಷ ನಾಯಕ ಆಯ್ಕೆ ವಿಚಾರದಲ್ಲಿ ಸಾಕಷ್ಟು ಮುಜುಗರ ಅನುಭವಿಸಿದ್ದೇವೆ: ಎನ್ ರವಿಕುಮಾರ್‌

Date:

ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರದಲ್ಲಿ ಉಂಟಾದ ವಿಳಂಬ ಧೋರಣೆಯಿಂದ ಈಗಾಗಲೇ ಸಾಕಷ್ಟು ಮುಜುಗರವಾಗಿದೆ. ಎರಡು ದಿನದಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್‌ ತಿಳಿಸಿದರು.

ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವಲ್ಲಿ ಹಿಂದೆ ಸರಿಯಲ್ಲ. ಎರಡು ದಿನಗಳಲ್ಲಿ ವಿಪಕ್ಷ ನಾಯಕರ ಆಯ್ಕೆಯಾಗುತ್ತದೆ. ನೇಮಕ ವಿಳಂಬದಿಂದ ಮುಜುಗರ ಆಗುತ್ತಿದೆ. ಚುನಾವಣಾ ಸೋಲಿನಿಂದಲೂ ಮುಜುಗರ ಅನುಭವಿಸಿದ್ದೇವೆ” ಎಂದರು.

“ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವಲ್ಲಿ ನಮ್ಮ ಪಕ್ಷ ಹಿಂದೆ ಸರಿದಿಲ್ಲ. ರಾಜ್ಯದ ಜನರ ಪರ‌ವಾಗಿ ಬಿಜೆಪಿ ನಿಲ್ಲಲಿದೆ. ಬಿಜೆಪಿ ಸರ್ಕಾರದ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಕೈ ಬಿಟ್ಟು, ದ್ವೇಷದ ರಾಜಕಾರಣವನ್ನು ಸಿದ್ದರಾಮಯ್ಯ ಮಾಡಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಇತಿಹಾಸದಲ್ಲಿಯೇ ವಿರೋಧ ಪಕ್ಷದ ನಾಯಕ ಇಲ್ಲದೆ ಇದೇ ಮೊದಲ ಬಾರಿ ಬಜೆಟ್‌ ಕೂಡಾ ಮಂಡನೆಯಾಗಿದೆ. ಈ ಅಂಶವೂ ಕೂಡಾ ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ದೊಡ್ಡ ಮುಜುಗರ ತಂದಿದೆ.

ಸದ್ಯ ವಿಪಕ್ಷ ನಾಯಕ ಆಯ್ಕೆಯಲ್ಲಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್, ಆರ್ ಅಶೋಕ್ ಹೆಸರು ಮುಂಚೂಣಿಯಲ್ಲಿದೆ. ಆದರೆ ಹೈಕಮಾಂಡ್ ಯಾರನ್ನು ಆಯ್ಕೆ ಮಾಡಲಿದೆ ಎಂಬುವುದು ಕುತೂಹಲ ಹಾಗೇ ಉಳಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...