ಕೊಡಗಿನ ಬುಡಕಟ್ಟು ಜನಾಂಗದೊಂದಿಗೆ ನಾವಿರುತ್ತೇವೆ; ಶಿವಕುಮಾರ್ ಹೂಟಗಳ್ಳಿ

Date:

ಕೊಡಗಿನ ಬುಡಕಟ್ಟು, ಆದಿವಾಸಿ ಜನಾಂಗದ ನಿವಾಸಿಗಳ ಜೊತೆ ನಾವಿರುತ್ತೇವೆ ಎಂದು ಮಾನವೀಯತೆ ಚಾರಿಟಬಲ್ ಟ್ರಸ್ಟ್‌ನ ಶಿವಕುಮಾರ್ ಹೂಟಗಳ್ಳಿ ಹೇಳಿದರು.

ಟ್ರಸ್ಟ್‌ನ ಕಾನೂನು ಘಟಕದ ಮುಖ್ಯಸ್ಥೆ ಮೊನಾಲಿಸಾ ಪಟ್ಟಡ ಅವರ ತಂಡದೊಂದಿಗೆ ರಂಗ ಸಮುದ್ರದ ನಂಜರಾಯಪಟ್ಟಣ ಕುಶಾಲನಗರದ ಕಟ್ಟೆಹಾಡಿ ಆದಿವಾಸಿ ಸಮುದಾಯಗಳ ಸಮಸ್ಯೆಗಳ ಹಾಗೂ ಕುಂದು ಕೊರತೆಗಳ ಬಗ್ಗೆ ಆದಿವಾಸಿ ಮುಖಂಡ, ಅರಣ್ಯ ಸಮಿತಿಯ ಅಧ್ಯಕ್ಷ ಮತ್ತು ಆದಿವಾಸಿ ಬುಡಕಟ್ಟು ಜನಾಂಗದ ನಿವಾಸಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಕಟ್ಟೆಹಾಡಿ ಮಾತ್ರವಲ್ಲ ಕೊಡಗಿನ ಬುಡಕಟ್ಟು ಜನಾಂಗದ ಜನರೊಂದಿಗೆ ನಾವು ಇರುತ್ತೇವೆ. ಕರ್ನಾಟಕದ ಯಾವುದೇ ಮೂಲೆಯಲ್ಲಿದ್ದರೂ ಸಹಾಯ ಮಾಡುತ್ತೇವೆ. ನೊಂದವರ ಪರ ನಿಂತು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ನಾವು ಯಾವುದೇ ರಾಜಕೀಯ ಪಾರ್ಟಿಗೆ ಸೇರಿದವರಲ್ಲ. ಶಾಸಕ ಮಂತರಗೌಡ ಅವರೊಂದಿಗೆ ಮಾತನಾಡುತ್ತೇನೆ. ಶಾಸಕರೊಂದಿಗೆ ಕಳೆದ ಬಾರಿ ಕಟ್ಟೆಹಾಡಿಗೆ ಭೇಟಿ ನೀಡಿದಾಗ ಉತ್ತಮವಾಗಿ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೆಲವು ಹಾಡಿಗಳಿಗೂ ಭೇಟಿ ನೀಡಿದ್ದರು. ಐಟಿಡಿಪಿ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಶಾಸಕರು ಎಲ್ಲಾ ಹಾಡಿಗಳಿಗೂ ಭೇಟಿ ನೀಡಬೇಕು ಶಾಸಕರ ಮಾತು ಕೇಳದ ಅಧಿಕಾರಿಗಳಿಗೆ ನಾವು ಕಾನೂನು ಪಾಠ ಕಲಿಸೋಣ” ಎಂದು ಹೂಟಗಳ್ಳಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಡಿ ಜನರು ಮಾತನಾಡಿ, “ಇಲ್ಲಿ ನಮಗೆ ಯಾವುದೇ ರೀತಿಯ ರಕ್ಷಣೆ ಇಲ್ಲ ಹಾಗೂ ಹೆಣ್ಣು ಮಕ್ಕಳಿಗೆ ತೊಂದರೆಯಾದಾಗ ನಾವು ಪೊಲೀಸ್ ಸ್ಟೇಷನ್‌ಗೆ ತೆರಳಿ ದೂರು ನೀಡಿದರೂ ನಮ್ಮ ದೂರನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ. ಕಳೆದ 10 ವರ್ಷಗಳಿಂದ ಅರಣ್ಯ ಅಧಿಕಾರಿಗಳೂ ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಕೂಡ ಈ ಬುಡಕಟ್ಟಿನ ಕಡೆ ಮುಖ ಹಾಕಿಲ್ಲ. ಆನೆ ದಾಳಿಯ ಭೀತಿಯಿಂದ ಜೀವನ ನಡೆಸುವಂತಾಗಿದೆ. ಕಾಡು ಪ್ರಾಣಿಗಳಿಂದ ರಕ್ಷಣೆ ನೀಡಬೇಕಿರುವ ಆಡಳಿತ ವ್ಯವಸ್ಥೆ ತಮಗೂ ಅದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ. ಕಡೆಪಕ್ಷ ಇಲ್ಲಿ ಹೆಣ್ಣುಮಕ್ಕಳಿಗೆ ಶೌಚಾಲಯ ಕೂಡ ಇಲ್ಲ” ಎಂದು ಅಳಲು ತೋಡಿಕೊಂಡರು.

ಕಾನೂನು ಘಟಕದ ಮುಖ್ಯಸ್ಥೆ ಲಾಯರ್ ಮೊನಾಲಿಸಾ ಪಟ್ಟಡ ಮಾತನಾಡಿ, “ಕೊಡಗಿನ ಪೊಲೀಸ್ ಇಲಾಖೆ ಇನ್ನಾದರೂ ನಿದ್ದೆಯಿಂದ ಎದ್ದೇಳಬೇಕಾಗಿದೆ. ಕಟ್ಟೆಹಾಡಿ ಜನರಿಗೆ ರಕ್ಷಣೆ ನೀಡಬೇಕು ಹಾಗೂ ತಮಗೆ ಆದ ಅನ್ಯಾಯದ ವಿರುದ್ಧ ದೂರು ಕೊಟ್ಟರೂ ತೆಗೆದು ಕೊಳ್ಳದೆ ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಜಿಲ್ಲೆಯ ಎಸ್.ಪಿ ಈ ಕೂಡಲೇ ಕಡು ಬಡತನದಲ್ಲಿ ಜೀವನ ನಡೆಸುತ್ತಿರುವ ಕಟ್ಟೆಹಾಡಿ ನಿವಾಸಿಗಳೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಹಾಗೂ ಕಟ್ಟೆ ಹಾಡಿಗೆ ಭೇಟಿ ನೀಡಬೇಕು ಮತ್ತು ಮಾದಕವಸ್ತುಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಕೊಡಗು | ಬಜೆಟ್ ಟೀಕಿಸಿದ ಮಾಜಿ ಶಾಸಕರು ; ಬಹಿರಂಗ ಚರ್ಚೆಗೆ ಬರುವಂತೆ ಸವಾಲ್

ಈ ವೇಳೆ ಕೊಡಗು ಉಸ್ತುವಾರಿ ಹಾಗೂ ಖಜಾಂಚಿ ಏಳನೇ ಹೋಸಕೋಟೆಯ ಸೌಮ್ಯಶ್ರೀ, ಮುಖಂಡ ಆರ್.ಕೆ ಚಂದ್ರು, ಕಟ್ಟೆಹಾಡಿ ಅರಣ್ಯ ಸಮಿತಿಯ ಅಧ್ಯಕ್ಷ ಅಪ್ಪು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...