ಗದಗ | ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ; ಸದುಪಯೋಗ ಪಡೆಯಲು ತೋಟಗಾರಿಕೆ ನಿರ್ದೇಶಕರ ಕರೆ

Date:

ರಾಜ್ಯ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿರಹಟ್ಟಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸುರೇಶ ಕುಂಬಾರ ತಿಳಿಸಿದ್ದಾರೆ.

ಬೆಳೆ ವಿಮೆ ಕುರಿತು ಪ್ರಕಟಣೆ ಹೊರಡಿಸಿರುವ ಅವರು, “ವಿವಿಧ ತೋಟಗಾರಿಕೆ ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಮಾಡಿಸಲು ಸರ್ಕಾರ ಮಂಜೂರಾತಿ ನೀಡಿದೆ. ಈ ಯೋಜನೆಯಡಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಮಾವು, ಪಪ್ಪಾಯ ಹಾಗೂ ದಾಳಿಂಬೆ ಅಧಿಸೂಚಿತ ತೋಟಗಾರಿಕೆ ಬೆಳೆಗಳಾಗಿವೆ” ಎಂದು ಹೇಳಿದ್ದಾರೆ.

“ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ, ಕೊಗನೂರ, ಮಾಚೇನಹಳ್ಳಿ, ಶಿರಹಟ್ಟಿ (ಯುಎಲ್‌ಬಿ)ಗಳಿಗೆ ಮಾವು; ಕಡಕೋಳ, ಮಜ್ಜೂರ ಗ್ರಾಮಗಳಿಗೆ ಮಾವು ಮತ್ತು ದಾಳಿಂಬೆ; ಮಾಗಡಿ ಗ್ರಾಮಕ್ಕೆ ಮಾವು ಪ್ಪಾಯ, ವಡವಿ ಗ್ರಾಮಕ್ಕೆ ಪಪ್ಪಾಯ ಮತ್ತು ದಾಳಿಂಬೆ ಬೆಳೆಗಳು ಅಧಿಸೂಚಿತ ತೋಟಗಾರಿಕೆ ಬೆಳೆಗಳಾಗಿವೆ” ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ, ಬಾಲೆಹೊಸೂರ, ಗೊಜನೂರ, ರಾಮಗೇರಿ, ಸೂರಣಗಿ, ಹುಲ್ಲೂರ, ಲಕ್ಷ್ಮೇಶ್ವರ (ಯುಎಲ್‌ಬಿ)ಗಳಿಗೆ ಮಾವು; ಅಡ್ರಕಟ್ಟಿ ಗ್ರಾಮಕ್ಕೆ ಮಾವು ಮತ್ತು ದಾಳಿಂಬೆ; ದೊಡ್ಡೂರ, ಶಿಗ್ಲಿ, ಗೋವನಾಳಗ್ರಾಮಗಳಿಗೆ ಮಾವು ಮತ್ತು ಪಪ್ಪಾಯ ಬೆಳೆಗಳು ಅಧಿಸೂಚಿತ ಬೆಳೆಗಳಾಗಿವೆ” ಎಂದು ತಿಳಿಸಿದ್ದಾರೆ.

“ವಿಮಾ ಮೊತ್ತವು ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ. ರೈತರು ವಿಮಾ ಕಂತು ಪಾವತಿಗೆ ಪಾಲ್ಗೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಜಿಲ್ಲೆಗೆ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಸಂಸ್ಥೆಯು ವಿಮೆ ಮಾಡಿಕೊಡುತ್ತದೆ. ವಿಮೆ ಕುರಿತ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ, ಕಂದಾಯ ಇಲಾಖೆ, ರೈತ ಸಂಪರ್ಕ ಕೇಂದ್ರ ಹಾಗೂ ಹತ್ತಿರದ ಬ್ಯಾಂಕ್ ಶಾಖೆಗಳನ್ನು ರೈತರು ಸಂಪರ್ಕಿಸಬಹುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...