ಬಿಜೆಪಿಯವರಿಗೆ ಏನೇನು ಸಮಸ್ಯೆ ಇದೆಯೋ, ಏನೇನು ನೋವಿದ್ಯೋ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

Date:

ಕಾಂಗ್ರೆಸ್‌ನಿಂದ ಬಂದವರಿಂದ ಬಿಜೆಪಿಯೊಳಗಿನ ಶಿಸ್ತು ಹೋಗಿದೆ ಎನ್ನುವುದನ್ನು ಅಲ್ಲಿಗೆ ಕರೆದುಕೊಂಡು ಹೋದ ನಾಯಕರೇ ಹೇಳಬೇಕು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್‌ನಿಂದ ಶಾಸಕರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದರು. ಆದರೆ, ಒಳ್ಳೆಯ ಆಡಳಿತ ಕೊಡುವಲ್ಲಿ ವಿಫಲವಾಗಿದ್ದರಿಂದ ಜನರು ಈಗ ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ಕೊಟ್ಟು ಸ್ಥಿರ ಸರ್ಕಾರ ರಚನೆಗೆ ಅವಕಾಶ ಕೊಟ್ಟರು” ಎಂದರು.

“ಬಿಜೆಪಿಯಲ್ಲಿನ ಬಾಂಬೆ ಟೀಂ ಮೇಲೆ ಈಶ್ವರಪ್ಪ ಕಿಡಿ ಕಾರಿರುವುದನ್ನು ನೋಡಿದೆ. ಅವರ ಪಕ್ಷದಲ್ಲಿ ಆಂತರಿಕ ಜಗಳ ಆಡಬೇಡಿ ಎಂದು ಹೇಳೋಕೆ ನಾವ್ಯಾರು? ಅದು ಆಗುತ್ತಾ? ಅವರಿಗೆ ಏನೇನು ಸಮಸ್ಯೆ ಇದ್ಯೋ? ಏನೇನೂ ನೋವಿದ್ಯೋ? ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ: ಕಾಂಗ್ರೆಸ್‌ ಪ್ರಶ್ನೆ

“ಕಾಂಗ್ರೆಸ್‌ನ ಗ್ಯಾರಂಟಿಗಳಿಂದಾಗಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಜನರಿಗೆ ಕಾಂಗ್ರೆಸ್ ಒಳ್ಳೆಯ ಕಾರ್ಯಕ್ರಮಗಳನ್ನು ಕೊಡುವುದು ಬಿಜೆಪಿಗೆ ಇಷ್ಟವಿಲ್ಲ. ಇದರಿಂದಾಗಿಯೇ ಹಣ ಕೊಟ್ಟರೂ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ” ಕೇಂದ್ರದ ವಿರುದ್ಧ ಅಸಮಾಧಾನದ ವ್ಯಕ್ತಪಡಿಸಿದರು.

ಲೋಕಸಭೆಗೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ನವರು ಮೈತ್ರಿ ಮಾಡಿಕೊಳ್ಳುತ್ತಾರೋ? ಪರೋಕ್ಷವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೋ ಅಥವಾ ಪೂರ್ಣ ವಿಲೀನ ಮಾಡಿಕೊಳ್ಳುತ್ತಾರೋ? ಅದು ಆ ಪಕ್ಷಗಳಿಗೆ ಬಿಟ್ಟಿದ್ದು. ಈಗ ಜನರು ನಮಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅದರಂತೆ ಕೆಲಸ ಮಾಡುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...