ದುಡಿಯುವ ಸಾಮರ್ಥ್ಯವಿರುವ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

Date:


ದುಡಿಯುವ ಸಾಮರ್ಥ್ಯ ಹೊಂದಿರುವ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿದೆ. ಅಲ್ಲದೆ, ಪ್ರಕರಣವೊಂದರಲ್ಲಿ ಜೀವನಾಂಶ ಮೌಲ್ಯವನ್ನು ಕಡಿಮೆ ಮಾಡಿ ಆದೇಶ ಹೊರಡಿಸಿದೆ.

ವಿಚ್ಛೇದನ ಪ್ರಕರಣವೊಂದರಲ್ಲಿ ವಿಚ್ಛೇದನ ಪಡೆದ ಮಹಿಳೆಯರು ಬೆಂಗಳೂರಿನ ಸೆಷನ್ಸ್‌ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ರಾಜೇಂದ್ರ ಬಾದಮಿಕರ್‌, ಮಾಸಿಕ ಜೀವನಾಂಶವನ್ನು 10,000 ರೂ.ನಿಂದ 5,000 ರೂ.ಗೆ ಕಡಿತಗೊಳಿಸಿ ಸೆಷನ್ಸ್‌ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದ್ದಾರೆ.

“ವಿವಾಹಕ್ಕೂ ಮುನ್ನ ಉದ್ಯೋಗದಲ್ಲಿದ್ದ ಮಹಿಳೆ, ವಿವಾಹವಾದ ಬಳಿಕ ಉದ್ಯೋಗ ತೊರೆದು ಮನೆಯಲ್ಲಿದ್ದಾರೆ. ಇದಕ್ಕೆ ಸಕಾರಣವಿಲ್ಲ. ಅವರಿಗೆ ದುಡಿಯುವ ಸಾಮರ್ಥ್ಯವಿದೆ. ಹೀಗಾಗಿ, ಅವರು ಹೆಚ್ಚಿನ ಜೀವನಾಂಶ ಕೋರುವಂತಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ಪತಿಯಿಂದ ದೂರವಿದ್ದ ಮಹಿಳೆ ವಿಚ್ಚೇದನ ಪಡೆದು ತನ್ನ ತಾಯಿಯೊಂದಿಗೆ ಪ್ರತ್ಯೇಕವಾಗಿ ವಾಸವಾಗಿದ್ದರು. ತಮಗೆ ಜೀವನಾಂಶ ಕೊಡಿಸುವಂತೆ ಕೋರಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​​ನಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಪತ್ನಿಗೆ ಮಾಸಿಕ 10,000 ರೂ. ಹಾಗೂ 3 ಲಕ್ಷ ರೂ. ಪರಿಹಾರ ನೀಡುವಂತೆ ಪತಿಗೆ ಆದೇಶ ನೀಡಿತ್ತು.

ಈ ಸುದ್ದಿ ಓದಿದ್ದೀರಾ?: ಜಮ್ಮು ಕಾಶ್ಮೀರ| ಜುಲೈ 11ರಂದು ವಿಶೇಷ ಸ್ಥಾನಮಾನ ರದ್ದು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ

ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿದ್ದ ಪತಿ ಸೆಷನ್ಸ್‌ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸೆಷನ್ಸ್‌ ಕೋರ್ಟ್‌, ಜೀವನಾಂಶವನ್ನು 10,000 ರೂ.ನಿಂದ 5,000 ರೂ.ಗೆ ಕಡಿತಗೊಳಿಸಿ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಹಿಳೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿರುವ ಕೋರ್ಟ್‌, ಸೆಷನ್ಸ್‌ ಕೋರ್ಟ್‌ನ ಆದೇಶವನ್ನು ಎತ್ತಿ ಹಿಡಿದಿದೆ.

ಪತಿ ಆಸ್ತಿಯಲ್ಲಿ ಪತ್ನಿಗೂ ಸಮಪಾಲು ಎಂದಿರುವ ಮದ್ರಾಸ್ ಹೈಕೋರ್ಟ್‌

ಕುಟುಂಬದ ನಿರ್ವಹಣೆಯಲ್ಲಿ ಹಲವು ಪಾತ್ರಗಳನ್ನು ಪತ್ನಿಯು ಸಮರ್ಥವಾಗಿ ನಿಭಾಯಿಸುತ್ತಾರೆ. ಆಕೆಯ ಸಾಮರ್ಥ್ಯವನ್ನು ಪತಿಯ ಎಂಟು ಗಂಟೆಯ ದುಡಿಮೆಯೊಂದಿಗೆ ಹೋಲಿಕೆ ಮಾಡಲಾಗದು. ಗೃಹಿಣಿಯು ನೇರವಾಗಿ ಆರ್ಥಿಕ ಕೊಡುಗೆ ನೀಡಬೇಕಾಗಿಲ್ಲ. ಆದರೆ, ಪ್ರತಿದಿನವೂ ಮಕ್ಕಳ ಪಾಲನೆ, ಅಡುಗೆ, ಮನೆ ಕೆಲಸ ಸೇರಿದಂತೆ ದಿನದ 24 ಗಂಟೆಯೂ ದುಡಿಯುತ್ತಾಳೆ. ಆಕೆಗೆ ಪತಿಯ ಸ್ವಯಾರ್ಜಿತ ಆಸ್ತಿಯಲ್ಲಿ ಸಮಪಾಲು ಪಡೆಯುವ ಹಕ್ಕು ಇದೆ ಎಂದು ಮದ್ರಾಸ್‌ ಹೈಕೋರ್ಟ್‌ ಜೂನ್‌ 26ರ ತನ್ನ ತೀರ್ಪಿನಲ್ಲಿ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...