ಮಳವಳ್ಳಿ | ಕಾಲುವೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ

Date:

ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು ಶಿವನಸಮುದ್ರ ಬಳಿಯ ಪಯನಿಯರ್ ಜೆನ್ಕೋ ಲಿಮಿಟೆಡ್ ವಿದ್ಯುತ್ ಉತ್ಪಾದನಾ ಕೇಂದ್ರದ 60 ಅಡಿ ಆಳದ ಕಾಲುವೆಗೆ ಶನಿವಾರ ರಾತ್ರಿ ಬಿದ್ದಿದ್ದ ಕಾಡಾನೆಯನ್ನು ಮಂಗಳವಾರ ಸತತ ನಾಲ್ಕು ಗಂಟೆಗಳ ಕಾರ್ಯಚಾರಣೆಯಿಂದ ರಕ್ಷಣೆ ಮಾಡಲಾಗಿದೆ.

ವಿದ್ಯುತ್ ಘಟಕದ ಸುತ್ತಮುತ್ತ ಸುತ್ತಾಡುತಿದ್ದ 12 ವರ್ಷದ ಗಂಡು ಕಾಡಾನೆ ನೀರು ಕುಡಿಯಲು ಗೇಟ್ ಮೂಲಕ ನಾಲೆಗೆ ಇಳಿದಿತ್ತು. ನೀರಿನ ರಭಸಕ್ಕೆ ಮೇಲೆ ಬರಲಾರದೆ ನಾಲೆಯಲ್ಲಿ ಸಿಲುಕಿ ಓಡಾಡಿಕೊಂಡಿಟ್ಟು. ಸೋಮವಾರ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿರಲಿಲ್ಲ. ಮಂಗಳವಾರ ಮದ್ಯಾನ್ಹ ವೇಳೆಯಲ್ಲಿ ಪಟಾಕಿ ಸಿಡಿಸಿ ನಾಲೆ ಮಧ್ಯ ಭಾಗಕ್ಕೆ ಬರುವಂತೆ ಮಾಡಿ ಅರವಳಿಕೆ ನೀಡಿ ಪ್ರಜ್ಞೆ ತಪ್ಪುವಂತೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಕೆ ಆರ್ ಪೇಟೆ | ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಲಿ: ಹೆಚ್ ಟಿ ಮಂಜು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೃಹತ್ ಕ್ರೇನ್ ಹಾಗೂ ಸ್ಥಳೀಯ ಕ್ರೇನ್ ಬಳಸಿ ಕಂಟೆನರ್ ಸ್ಟ್ರೆಚರ್ ಮೇಲೆ ಆನೆಯನ್ನು ಮಲಗಿಸಿ ಮೇಲಕ್ಕೆ ತಂದರು. ಸ್ಥಳದಲ್ಲಿದ್ದು ವೈದ್ಯರು ಪ್ರಥಮ ಚಿಕಿತ್ಸೆ ನೀಡಿ, ಆರೋಗ್ಯದ ಸ್ಥಿತಿಯನ್ನು ಖಾತ್ರಿಪಡಿಸಿದರು. ಬಳಿಕ ಕಾವೇರಿ ವನ್ಯಜೀವಿ ಅರಣ್ಯಕ್ಕೆ ಸುರಕ್ಷಿತವಾಗಿ ಕಾಡಾನೆಯನ್ನು ಬಿಡಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಸ್ಥಳದಲ್ಲಿ ಮೈಸೂರು ವನ್ಯಜೀವಿ ವಲಯದ ಡಿಸಿಎಫ್ ಪ್ರಭುಗೌಡ ಬಿರಾದಾರ್, ಮಂಡ್ಯ ಡಿಸಿಎಫ್ ಡಿ. ರಘು, ನಾಗರಹೊಳೆಯ ಡಾ. ರಮೇಶ್, ಡಾ. ಆದರ್ಶ, ಮೃಗಾಲಯ ನಿರ್ದೇಶಕಿ ಅನುಷಾ, ತಹಶೀಲ್ದಾರ್, ಎಸ್. ವಿ. ಲೋಕೇಶ್, ಡಿಎಫ್ಓ ಮಹಾದೇವಸ್ವಾಮಿ, ಹಲಗೂರು ಸಿಪಿಐ ಬಿ. ಎಸ್. ಶ್ರೀಧರ್, ವಲಯ ಅರಣ್ಯಧಿಕಾರಿ ಗವಿಯಪ್ಪ, ಅರವಳಿಕೆ ತಜ್ಞ ರಂಜನ್ ಸೇರಿದಂತೆ ಹಲವರು ಕಾರ್ಯಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...