ದಾವಣಗೆರೆ | ನರಹಂತಕ ಕಾಡಾನೆ ಸೆರೆ; ಕಾರ್ಯಾಚರಣೆ ವೇಳೆ ವೈದ್ಯಾಧಿಕಾರಿ ಮೇಲೆ ದಾಳಿ

Date:

  • ಹಾಸನ ಜಿಲ್ಲೆಯ ಆಲೂರು ಭಾಗದಿಂದ ವಲಸೆ ಬಂದಿರುವ ಕಾಡಾನೆ
  • ಸೋಮಲಾಪುರ ಗ್ರಾಮದಲ್ಲಿ ಯುವತಿಯನ್ನು ಕೊಂದಿದ್ದ ಕಾಡಾನೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೋಮಲಾಪುರದಲ್ಲಿ ಯುವತಿಯನ್ನು ತುಳಿದು ಸಾಯಿಸಿದ್ದ ಕಾಡಾನೆಯನ್ನು ಮಂಗಳವಾರ ಹೊನ್ನಾಳಿ ತಾಲೂಕಿನ ಜೀನಹಳ್ಳಿ ಬಳಿ ಸೆರೆ ಹಿಡಿಯಲಾಗಿದೆ.

ಹಾಸನ ಜಿಲ್ಲೆಯ ಆಲೂರು ಭಾಗದಿಂದ ವಲಸೆ ಬಂದಿದ್ದ ಕಾಡಾನೆ ಶನಿವಾರ ಚನ್ನಗಿರಿ ತಾಲೂಕಿನ ಹಲವು ಗ್ರಾಮಗಳಲ್ಲಿ ದಾಂಧಲೆ ನಡೆಸಿತ್ತು. ಸೋಮಲಾಪುರ ಗ್ರಾಮದಲ್ಲಿ ಮನೆ ಮುಂದೆ ಕೆಲಸ ಮಾಡುತ್ತಿದ್ದ ಕವನಾ ಎಂಬ ಯುವತಿಯನ್ನು ತುಳಿದು ಸಾಯಿಸಿತ್ತು. ಒಂಟಿ ಸಲಗದ ದಾಳಿಯಿಂದ ಇತರೆ ಮೂವರು ಗಾಯಗೊಂಡಿದ್ದರು.

ಸೋಮಲಾಪುರದಲ್ಲಿ ದಾಳಿ ನಂತರ ಕಾಡಾನೆಯು ಸೂಳೆಕೆರೆ ಇತರೆ ಭಾಗಕ್ಕೂ ನುಗ್ಗಿತ್ತು. ಶನಿವಾರ ಸಂಜೆ ವೇಳೆಗೆ ಬಸವಾಪಟ್ಟಣ ಸಮೀಪದ ಶೃಂಗಾರ್‌ಬಾಗ್ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು. ವಿಶೇಷವಾಗಿ ಶಿವಮೊಗ್ಗದ ಸಕ್ರೆಬೈಲ್‌ ಆನೆ ಶಿಬಿರದಿಂದ ಸಾಗರ, ಬಲಭೀಮ ಹಾಗೂ ಬಹದ್ಧೂರ್‌ ಎಂಬ ಮೂರು ಸಾಕಾನೆಗಳನ್ನು ಕರೆ ತರಲಾಗಿತ್ತು. ಡ್ರೋನ್‌ ಕ್ಯಾಮೆರಾ ಬಳಸಿ ಸತತ ಕಾರ್ಯಾಚರಣೆ ನಂತರ ಜೀನಹಳ್ಳಿ ಬಳಿ ಪುಂಡಾನೆಯನ್ನು ಸೆರೆಹಿಡಿಯಲಾಗಿದೆ.

ಕಾಡಾನೆ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯ ಸಿಬ್ಬಂದಿ ಮತ್ತು ಡಾರ್ಟ್ ತಜ್ಞರು ಜೀನಹಳ್ಳಿ ಬಳಿ ಆನೆ ಇರುವುದನ್ನ ಪತ್ತೆ ಹಚ್ಚಿದ್ದರು. ಡ್ರೋನ್ ಮೂಲಕ ಆನೆ ಇರುವಂತಹ ಜಾಗವನ್ನು ಸರಿಯಾಗಿ ಪತ್ತೆ ಮಾಡಲಾಗಿತ್ತು. ಸಕ್ರೆಬೈಲ್‌ನಿಂದ ಕಾರ್ಯಾಚರಣೆಗೆ ಆಗಮಿಸಿದ್ದ ಆನೆಗಳೊಂದಿಗೆ ಸ್ಥಳಕ್ಕೆ ತೆರಳಿದ್ದ ಸಿಬ್ಬಂದಿ ಆನೆಗೆ ಅರಿವಳಿಕೆ ಚುಚ್ಚು ಮದ್ದು ನೀಡಿ, ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನರಹಂತಕ ಕಾಡಾನೆ ಸೆರೆಗೆ ಕೂಂಬಿಂಗ್‌ ಕಾರ್ಯಾಚರಣೆ ಆರಂಭ

ವೈದ್ಯಾಧಿಕಾರಿ ಮೇಲೆ ದಾಳಿ

ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಕ್ರೆಬೈಲು ಆನೆ ಶಿಬಿರದ ವೈದ್ಯಾಧಿಕಾರಿ ಡಾ. ವಿನಯ್ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ.

ಆನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಆನೆ ನೆಲಕ್ಕೆ ಉರಿಳಿತ್ತು. ಪರಿಶೀಲನೆಗಾಗಿ ವಿನಯ್ ಇತರರು ಸ್ಥಳಕ್ಕೆ ತೆರಳಿದಾಗ ಏಕಾಏಕಿ ಎದ್ದ ಆನೆ ನಿಂತಿದ್ದರಿಂದ ಗಾಬರಿಗೊಂಡ ಓಡುವಾಗ ಎಡವಿ ಬಿದ್ದ ಡಾ. ವಿನಯ್ ಮೇಲೆ ದಾಳಿ ನಡೆಸಿದ ಆನೆ ಸೊಂಟದ ಮೇಲೆ ಕಾಲಿಟ್ಟು ತುಳಿಯಲು ಯತ್ನಿಸಿತು.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಏರ್‌ಗನ್‌ನಿಂದ ಫೈರ್ ಮಾಡಿದ್ದಾರೆ. ಗಾಬರಿಗೊಂಡ ಆನೆ ಓಡಿ ಹೋಗಿದೆ. ಅದೃಷ್ಟವಶಾತ್ ಡಾ. ವಿನಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...