ಕೊಪ್ಪಳ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಸಿಗುತ್ತದೆ ಎಂದರೆ ಅದು ನನಗೂ ಸಂತೋಷದ ವಿಷಯ. ಇದರಿಂದ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ಹೇಳಿದರು.
ಗಂಗಾವತಿ ನಗರಸಭೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಸಚಿವ ಸಂಪುಟ ಪುನಾರಚನೆಗಾಗಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ್ ಅವರ ನೇತೃತ್ವದಲ್ಲಿ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಾವ ಜಿಲ್ಲೆಯಿಂದ ಯಾರನ್ನು ಸಚಿವರನ್ನಾಗಿ ಮಾಡಬೇಕೆಂಬ ನಿರ್ಧಾರ ಮಾಡುತ್ತಾರೆ. ಕೊಪ್ಪಳ ಜಿಲ್ಲೆಗೆ ಇನ್ನೊಬ್ಬರು ಸಚಿವರಾದರೆ ನನಗೆ ಖುಷಿ ಮತ್ತು ಸ್ವಾಗತಿಸುತ್ತೇನೆ” ಎಂದರು.
ಇದನ್ನೂ ಓದಿ: ಕೊಪ್ಪಳ | ಪಟ್ಟಣಕ್ಕೆ ಹೊಂದಿಕೊಂಡ ಹಳ್ಳದ ಸ್ವಚ್ಛತೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ
“ಜಿಲ್ಲೆಗೆ ಈ ಹಿಂದೆಯೂ ಮೂವರು ಸಚಿವರಾಗಿರುವ ಉದಾಹರಣೆಗಳಿವೆ. ಅದರಂತೆ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕರೆ ಜಿಲ್ಲೆಯ ಅಭೀವೃದ್ಧಿಗೂ ಅನುಕೂಲವಾಗುತ್ತದೆ” ಎಂದರು.





