ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ ವಿಭಾಗಿಸಿ 6:6:5 ಅನುಪಾತದಲ್ಲಿ ಮೀಸಲಾತಿ ಹಂಚಿರುವುದು ಅಸಮರ್ಪಕವಾಗಿದೆ ಸಿ ವರ್ಗಕ್ಕೆ ಸೇರಿದ ಭೋವಿ ಬಂಜಾರ, ಕೊರಮ, ಕೋರಚ ಸೇರಿ 59 ಅಲೆಮಾರಿ ಸಮುದಾಯಗಳಿಗೆ ಕೇವಲ 5% ಮೀಸಲಾತಿ ನೀಡಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು
ಮಾಜಿ ಜಿಲ್ಲಾ ಪಂಚಾಯತಿ ಅದ್ಯಕ್ಷ ಎಂ.ವಿ.ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು
ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಕಾಂಗ್ರೆಸ್ ಸರಕಾರ ಬಂಜಾರ ಭೋವಿ ಕೊರಮ ಕೊರಚ ಸೇರಿ 63 ಜಾತಿಗಳಿಗೆ ಅನ್ಯಾಯ ಮಾಡಿದೆ ಈ ಹಿಂದೆ ಕೇವಲ ನಾಲ್ಕು ಜಾತಿಗಳಿಗೆ ಬೊಮ್ಮಾಯಿ ಸರಕಾರ 4.5% ಮೀಸಲಾತಿ ನೀಡಿತ್ತು ಈಗ ಕಾಂಗ್ರೆಸ್ ಸರಕಾರ ರದ್ದು ಪಡಿಸಿ 63 ಜಾತಿಗಳಿಗೆ ಕೇವಲ 5% ಮೀಸಲಾತಿ ನೀಡಿದೆ. ಇದರ ವಿರುದ್ಧ ಪಕ್ಷಪಾತವಾಗಿ ಒಟ್ಟಾಗಿ ಹೋರಾಟ ಮಾಡಬೇಕು ಎಂದರು.
ಒಳಮೀಸಲಾತಿಯಿಂದ ಭೋವಿ, ಬಂಜಾರ (ಲಂಬಾಣಿ), ಕೊರಮ, ಕೊರಚ, ಸಮಗಾರ, ಚರ್ಮಕಾರ ಮತ್ತು ಅಲೆಮಾರಿ ಸಮುದಾಯಗಳಿಗೆ ಆಗಲಿರುವ ಅನ್ಯಾಯವನ್ನು ಸರಿಪಡಿಸದೇ ಇದ್ದರೆ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗವುದು ಎಂದು ಅವರು ಎಚ್ಚರಿಕೆ ನೀಡಿದರು.
ಒಳಮೀಸಲಾತಿಯಿಂದ ಈ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಈ ಬಗ್ಗೆ ಅಧ್ಯಯನ ನಡೆಸಲು ಒಂದು ಸಮಿತಿ ರಚಿಸಿ, ವರದಿಯನ್ನು ಸಿದ್ಧಪಡಿಸಬೇಕು. ಅದರ ಆಧಾರದಲ್ಲಿ ವಾಸ್ತವ ಸ್ಥಿತಿಯನ್ನು ರಾಜ್ಯ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು. ಈ ಕ್ರಿಯೆಯಲ್ಲಿ ಎಲ್ಲ ಸಮುದಾಯಗಳೂ ಒಟ್ಟಾಗಬೇಕು ಎಂದು ಕರೆ ನೀಡಿದರು.
ಪರಿಶಿಷ್ಟ ಜಾತಿಗಳಿಗೆ ಶೇ 17ರಷ್ಟು ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ 7 ರಷ್ಟು ಮೀಸಲಾತಿ ಘೋಷಣೆಯನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಮನವಿ ಮಾಡಬೇಕು ಎಂದು ಒತ್ತಾಯಿಸಬೇಕು ಎಂದು ಹೇಳಿದರು.
ಬಾಗೇಪಲ್ಲಿ ತಾಲ್ಲೂಕು ಭೋವಿ ಸಂಘದ ಜಿಲ್ಲಾದ್ಯಕ್ಷ ಪಿ.ಡಿ.ವೆಂಕಟರವಣ ಮಾತನಾಡಿಒಳಮೀಸಲಾತಿ ಹಂಚಿಕೆ ಸಂಬಂಧಿಸಿದಂತೆ ಗೊಂದಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವವರೆಗೆ ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆ ಆಗುವವರೆಗೆ ಒಳ ಮೀಸಲಾತಿರಹಿತವಾಗಿ ಹಳೆ ಮೀಸಲಾತಿಯನ್ನು (ಶೇ 15) ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರ ಮನವಿ ಮಾಡಿದರು
ಹೊಸ ಜಾತಿ ಪ್ರಮಾಣಪತ್ರದ ಜೊತೆ ಹಳೆಯ ಜಾತಿ ಪ್ರಮಾಣಪತ್ರವನ್ನು ಪರಿಗಣಿಸುವಂತೆ ಆದೇಶ ಹೊರಡಿಸಬೇಕು ವಿವಿಧ ಇಲಾಖೆಗಳು ನೇಮಕಾತಿಗೆ ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ ಮರು ಅಧಿಸೂಚನೆ ಹೊರಡಿಸಲು ಸೂಕ್ತ ಆದೇಶ ಹೊರಡಿಸಬೇಕು ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳು ಬಲಗೈ ಗುಂಪಿನಲ್ಲಿ ಉದ್ಯೋಗ ಶಿಕ್ಷಣ ಮತ್ತು ಇತರ ಸೌಲಭ್ಯ ಪಡೆಯಲು ಆದೇಶ ಹೊರಡಿಸಬೇಕು. ಪರಿಶಿಷ್ಟ ಜಾತಿಯ ಸಮೀಕ್ಷೆ ನಡೆಸಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗ ಸಲ್ಲಿಸಿರುವ ವರದಿಯು ಅವೈಜ್ಞಾನಿಕ ಹಾಗೂ ಪಕ್ಷಪಾತದಿಂದ ಕೂಡಿರುವುದರಿಂದ ಅದನ್ನು ತಿರಸ್ಕರಿಸಬೇಕು’ ಎಂದೂ ಆಗ್ರಹಿಸಿದ್ದಾರೆ.
ಇದನ್ನು ಓದಿದ್ದೀರಾ..? ಕಾರು ಅಪಘಾತ ಪ್ರಾಂತ ರೈತ ಸಂಘದ ಟಿ.ಎಂ ವೆಂಕಟೇಶ್ ದುರ್ಮರಣ
ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು, ಅಶ್ವತ್ಥಪ್ಪ ಶ್ರೀರಾಮ ನಾಯಕ್, ಶ್ರೀನಿವಾಸ್, ರಮೇಶ್, ನರೇಂದ್ರ, ಚಲಪತಿ, ತಿಪ್ಪಣ್ಣ, ಚನ್ನರಾಯಣಪಲ್ಲಿ ಅಚ್ಚಪ್ಪ, ವೇಣು, ಈರಪ್ಪ ಸೇರಿದಂತೆ ಹಲವಾರು ಭೋವಿ ಸಂಘದ ಮುಖಂಡರು ಹಾಜರಿದ್ದರು.





