ಚುನಾವಣೆ ಒಳಒಪ್ಪಂದ ತನಿಖೆ ಮಾಡಿಸಿ; ಎಚ್ ಡಿ ಕುಮಾರಸ್ವಾಮಿ

Date:

ಕಳೆದ ವಿಧಾನಸಭೆ ಚುನಾವಣೆಯಲ್ಲಿ ʻಅಡ್ಜಸ್ಟ್ ಮೆಂಟ್ ರಾಜಕೀಯʼದ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರೇ ಮಾತನಾಡಿದ್ದು, ಈ ಕುರಿತು ನೂತನ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜಡಿಎಸ್‌ ಕಚೇರಿಯಲ್ಲಿ ಸುದ್ದಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ, “ಹಿಂದಿನ ಸರ್ಕಾರದ ಎಲ್ಲ ನಿರ್ಧಾರಗಳನ್ನು ಈಗಿನ ಸರಕಾರ ತನಿಖೆ ನಡೆಸುವುದಾಗಿ ಹೇಳುತ್ತಿದೆ. ಹಾಗಾದರೆ, ಚುನಾವಣಾ ಒಳಒಪ್ಪಂದದ ಬಗ್ಗೆಯೂ ತನಿಖೆ ಮಾಡಿಸಬೇಕಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಸಿ ಟಿ ರವಿ ಒಂದು ಹೇಳಿಕೆ ಗಮನಿಸಿದ್ದೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ ಯಾವ ಜತೆ ಒಪ್ಪಂದ ಮಾಡಿಕೊಂಡಿದ್ದಿರಿ, ನಮ್ಮನ್ನು ಬಿಜೆಪಿ ಬೀ ಟೀಮ್ ಎಂದು ಹೇಳುತ್ತಿದ್ದವರು ನೀವು. ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಅದು ಸತ್ಯವಾಗಿದೆ. ಈಗ ಹೇಳಿ ನೀವು ಯಾವ ಟೀಮ್? ನೀವು ಇದನ್ನು ತನಿಖೆ ಮಾಡಿಸುತ್ತೀರಾ?” ಎಂದು ಕುಮಾರಸ್ವಾಮಿ ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಯಾವ ಪಕ್ಷದ ಜತೆಯೂ ಒಪ್ಪಂದ ಮಾಡಿಕೊಳ್ಳದೆ 20 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರವಾಗಿ ಹೇಳಿದರು.

ಬೆಂಗಳೂರು ಘಟಕದ ಸಭೆ:

ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಂಗಳೂರು ಮಹಾನಗರದ ಮುಖಂಡರ ಸಭೆ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ನಡೆಯಿತು.

ʻಸಂಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯುವಕರಿಗೆ ಶಕ್ತಿ ತುಂಬು ಕೆಲಸ ಮಾಡುತ್ತಿದ್ದೇನೆ. ಪಕ್ಷ ಸಂಘಟನೆಯಲ್ಲಿ ಭಾಗಿಯಾಗದವರನ್ನು ಪಕ್ಷದಿಂದ ತೆಗೆಯುತ್ತೇವೆ. ಅರ್ಹತೆ ಆಧಾರ ಮತ್ತು ಸಮುದಾಯದ ಆಧಾರದ ಮೇಲೆ ನಾನು ಅಧಿಕಾರ ಹೊಣೆಗಾರಿಕೆ ಕೊಡುತ್ತೇವೆʼ ಎಂದು ಎಚ್‌ಡಿಕೆ ಹೇಳಿದ್ದಾರೆ.

ಮುಂದಿನ ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಜ್ಜು ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ಮುಖಂಡರ ಜತೆ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್ ಎಂ ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಯಶವಂತಪುರದ ಅಭ್ಯರ್ಥಿ ಜವರಾಯಿ ಗೌಡ ಸೇರಿದಂತೆ ಬೆಂಗಳೂರು ನಗರದ ಅನೇಕ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...