ವಿಮೆನ್ ಇಂಡಿಯಾ ಮೂವ್ಮೆಂಟ್ ಹೂಡೆ ಘಟಕದ ವತಿಯಿಂದ ಹೂಡೆ ಗುಡ್ಡೇರಿಕಂಬಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಹಾಗೂ ಹಳೆ ವಿದ್ಯಾರ್ಥಿ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲೆ ಅಧ್ಯಕ್ಷೆ ನಾಝಿಯ ನಸ್ರುಲ್ಲಾ, ಜಿಲ್ಲಾ ಕಾರ್ಯದರ್ಶಿ ರಹಮ್ತುನ್ನಿಸಾ, ಜಿಲ್ಲಾ ಸಮಿತಿ ಸದಸ್ಯೆ ನಸೀಮ್ ಫಾತಿಮಾ, ಉಡುಪಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾದಿಯ ಅನ್ಸಾರ್, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಫೌಝಿಯಾ ನಯಾಜ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯೆ ಫೌಝಿಯಾ ಸಾದಿಕ್, ಅಂಗನವಾಡಿ ಶಿಕ್ಷಕಿ ಅರ್ಚನಾ, ನಿವೃತ್ತ ಶಿಕ್ಷಕಿ ಶಕುಂತಲಾ ಕುಂದರ್ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯ ಉಸ್ತಾದ್ ಹೈದರ್ ಆಲಿ ಅವರು ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು.
ಆಚರಣೆಯು ಮಕ್ಕಳಲ್ಲಿ ಹರ್ಷೋಲ್ಲಾಸ ಮೂಡಿಸಿ, ಪಾಲಕರಿಂದ ಮೆಚ್ಚುಗೆ ಗಳಿಸಿತು.





