ಕಲಬುರಗಿ | ವಚನ ಮತ್ತು ಸಂವಿಧಾನದ ಆಶಯ ಒಂದೇ ಆಗಿದೆ : ಡಾ.ಅರುಣ ಜೋಳದಕೂಡ್ಲಿಗಿ

Date:

ಸಮತೆಯ ಆಶಯದ ಹಿನ್ನೆಲೆಯಲ್ಲಿ ಬುದ್ಧ,ಬಸವ,ಅಂಬೇಡ್ಕರ್ ಅವರನ್ನು ಒಟ್ಟಾಗಿಯೇ ನೋಡಬೇಕು.ಈ ಮೂವರ ಜತೆ ಕಾರ್ಲ್ ಮಾರ್ಕ್ಸ್ ಅವರನ್ನೂ ಸೇರಿಸಿಕೊಳ್ಳಬೇಕು. ಅಸಮಾನತೆಯ ವಿರುದ್ಧದ ಬಸವಣ್ಣನ ಹೋರಾಟವನ್ನು ನೋಡಿದರೆ ನಾವು ಕಾಮ್ರೇಡ್ ಬಸವಣ್ಣ ಎಂದು ಕರೆಯಬೇಕು ಎಂದು ಸಾಹಿತಿ, ಸಂಶೋಧಕ ಡಾ.ಅರುಣ ಜೋಳದಕೂಡ್ಲಿಗಿ ಹೇಳಿದರು.

ಕಲಬುರಗಿ ನಗರದ ರಾಮಜಿ ನಗರದಲ್ಲಿ‌ ಬಸವ ಪ್ರಜ್ಞೆ ವಿಚಾರ ವೇದಿಕೆ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ʼಇವನಾರವ ಇವನಾರವ ಎಂದೆನಿಸದಿರಯ್ಯಾ, ಇವನಮ್ಮವ ಇವನಮ್ಮವ ಎಂದೆನಿಸಯ್ಯ’ ಎನ್ನುವ ಬಸವಣ್ಣನವರ ವಚನದ ಆಶಯ ಭಾರತ ಸಂವಿಧಾನದ ಪ್ರಸ್ತಾವನೆಯ ‘ಭಾರತದ ಜನತೆಯಾದ ನಾವುಗಳು..ʼ ಎನ್ನುವಲ್ಲಿ ಹೋಲಿಕೆಯಾಗುತ್ತದೆ. ಎಲ್ಲರನ್ನೂ ಭೇದಭಾವ ಇಲ್ಲದೆ ನಮ್ಮವರೆಂದು ಭಾವಿಸಬೇಕು ಎನ್ನುವುದು ವಚನ ಮತ್ತು ಸಂವಿಧಾನದ ಆಶಯ ಒಂದೇ ಆಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದ ಸಂದರ್ಭದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಎನ್ನುವ ತತ್ವದಡಿ ಈ ಮೂವರನ್ನು ಏಕೀಭವಿಸಲಾಗಿದೆ. ಬಸವಣ್ಣ 70 ವಚನಗಳಲ್ಲಿ ವೈದಿಕಶಾಹಿಯನ್ನು ವಿರೋಧಿಸಿದ್ದಾರೆ. 100 ಶರಣರು 1,700 ರಷ್ಟು ವಚನಗಳಲ್ಲಿ ವೈದಿಕಶಾಹಿ, ಸನಾತನ ಧರ್ಮದ ಮೌಢ್ಯಗಳನ್ನು ಕಟುವಾಗಿ ವಿರೋಧಿಸಿದ್ದಾರೆ. ಹೀಗಾಗಿ ಇಂದು ಯಾರು ವೈದಿಕಶಾಹಿಯನ್ನು ಬೆಂಬಲಿಸಿ‌ ಸನಾತನ ಧರ್ಮವನ್ನು ಆಚರಿಸುತ್ತಾರೋ ಅವರು ಬಸವದ್ರೋಹಿಗಳಾಗುತ್ತಾರೆ. ಇಂದು ಉಳ್ಳವರು ಬಸವಣ್ಣನನ್ನು ಕೇವಲ ಆರಾಧನೆಗೆ ಸೀಮಿತರಾಗಿಸಿದ್ದಾರೆ. ಬಸವಣ್ಣನವರ ಫೋಟೋ ಮನೆಯಲ್ಲಿ ಹಾಕಿಕೊಂಡೂ ಜಾತೀಯತೆ ಮಾಡುತ್ತಾರೆ” ಎಂದು ಕಳವಳ ವ್ಯಕ್ತಪಡಿಸಿದರು.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಮಾತನಾಡಿ, “ಬಸವ ಚಿಂತನೆ ಮತ್ತು ಚಳುವಳಿಗೆ ಬಹುದೊಡ್ಡ ಪರಂಪರೆಯಿದೆ. ಆದರೆ, ಬಸವಣ್ಣ ಹಾಗೂ ಸಮಕಾಲೀನ ಶರಣರನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು ಮತ್ತು ವಚನ ಚಿಂತನೆಗಳನ್ನು ತಿರುಚುವ ಹುನ್ನಾರ ಹುರಿಗೊಳ್ಳುತ್ತಿದೆ. ವೈದಿಕಶಾಹಿಯಲ್ಲಿ ನಂಬಿಕೆಯುಳ್ಳವರು ಎಂದಿಗೂ ಬುದ್ದ, ಬಸವ, ಅಂಬೇಡ್ಕರ್ ಅವರ ಚಿಂತನೆಗಳನ್ನು ಒಪ್ಪಲಾರರು” ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಚಂದಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಡಿಡಿಪಿಯು ಶಿವಶರಣ ಮುಳೆಗಾಂವ, ಸಿಯುಕೆ ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಡಾ.ಶಿವಗಂಗಾ ರುಮ್ಮಾ ಬಸವಾದಿ ಶರಣರ ಪ್ರಸ್ತುತತೆ ಕುರಿತು ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಯುವ ಸಂಘಟನೆಯ ಸಾಂಸ್ಕೃತಿಕ ವಿಭಾಗದಿಂದ ಲವಿತ್ರ, ಸುಜಾತಾ, ಬೃಂದಾ, ಪ್ರಿಯಾಂಕ, ಸವ್ಯ ಇದ್ದರು. ವಕೀಲ ಶಾಂತೇಶ ಕೋಡ್ಲೆ ಸ್ವಾಗತಿಸಿ, ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...