ಹಾಸನ | ಅಪ್ರಾಪ್ತೆ ಅಪಹರಣ ಪ್ರಕರಣದಲ್ಲಿ ಸಾಕ್ಷಿ ಹೇಳಿದ್ದ ವ್ಯಕ್ತಿ ಬರ್ಬರ ಹತ್ಯೆ

Date:

ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದಲ್ಲಿ ಕೋರ್ಟ್‌ನಲ್ಲಿ ಸಾಕ್ಷಿ ಹೇಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೈದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತೂಬಿನಕೆರೆಯ ಬೋವಿ ಕಾಲೋನಿ ನಿವಾಸಿ ಜಯಪ್ಪ ಎಂಬವರನ್ನು ಕೊಲೆ ಮಾಡಲಾಗಿದೆ. ಜರಪ್ಪ ಅವರನ್ನು ಕಾಳೇನಹಳ್ಳಿ ಹಟ್ಟಿಯ ಅಣ್ಣಯ್ಯ ಎಂಬಾತ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆತನನ್ನು ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

2021ರಲ್ಲಿ ಅಪ್ರಾಪ್ರೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಆರೋಪಿ ಅಣ್ಣಯ್ಯನನ್ನು ಬಂಧಿಸಲಾಗಿತ್ತು. ಅಪರಹಣ ಪ್ರಕರಣದಲ್ಲಿ ಜಯಪ್ಪ ಸಾಕ್ಷಿಯಾಗಿದ್ದರು. ಆರೋಪಿ ಅಣ್ಣಯ್ಯ 2022ರ ಜುಲೈನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ. ಕೋರ್ಟ್‌ನಲ್ಲಿ ಸಾಕ್ಷಿ ಹೇಳದಂತೆ ಜಯಪ್ಪ ಅವರಿಗೆ ಅಣ್ಣಯ್ಯ ದುಂಬಾಲು ಬಿದ್ದದ್ದ. ಆದರೂ, ಜನವರಿ 31ರಂದು ಜಯಪ್ಪ ನ್ಯಾಯಾಲಯಕ್ಕೆ ಹಾಜರಾಗಿ, ಸಾಕ್ಷಿ ಹೇಳಿದ್ದರು. ನ್ಯಾಯಾಲಯದಿಂದ ತನ್ನೂರಿಗೆ ಮರಳಿ ಹೋಗುವಾಗ ಆತನ ಮೇಲೆ ಕಲ್ಲು ಎತ್ತಿಹಾಕಿ ಅಣ್ಣಯ್ಯ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯಪ್ಪ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತನ ತಾಯಿ ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ, ಫೆಬ್ರವರಿ 2ರಂದು ಹಾಸನದ ಹೊರವಲಯದ ರೈಲ್ವೇ ಟ್ರ್ಯಾಕ್‌ ಬಳಿ ಆತನ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿ ಅಣ್ಣಯ್ಯನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...