ಧರ್ಮಸ್ಥಳ | ಅತ್ಯಾಚಾರ, ಕೊಲೆ ಜತೆಗೆ ಅನುಮಾನಾಸ್ಪದ ಸಾವುಗಳ ತನಿಖೆ ಕೋರಿ ಎಸ್‌ಐಟಿ ಮುಖ್ಯಸ್ಥರಿಗೆ ಮಹಿಳಾ ಆಯೋಗ ಪತ್ರ

Date:

ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು ನಡೆಸಬೇಕೆಂದು ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.

ಧರ್ಮಸ್ಥಳದಲ್ಲಿ ಕಳೆದ 20ಕ್ಕೂ, ಹೆಚ್ಚು ವರ್ಷಗಳಿಂದ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಈ ಹಿಂದೆ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿತ್ತು. ಅದಾದ ಬಳಿಕ ಎಸ್‌ಐಟಿ ರಚನೆಯಾಗಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಕೊಂದವರು ಯಾರು? ಆಂದೋಲನ: ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಐಟಿ ರಚನೆಯಾಗಬೇಕೆಂಬ ಕೋರಿಕೆಯ ಆಶಯವೂ ಮತ್ತು ಸರ್ಕಾರದ ಆದೇಶವೂ ಕೇವಲ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211 (ಎ), ಬಿಎನ್‌ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ’ ತನಿಖೆಯನ್ನು ಎಸ್‌ಐಟಿ ಮಾಡಬೇಕೆಂಬುದನ್ನು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್‌ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ” ಎಂದು ಪತ್ರದಲ್ಲಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉಲ್ಲೇಖಿಸಿದ್ದಾರೆ.

“ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‌ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಪನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಪನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡಿ” ಎಂದು ಮನವಿ ಮಾಡಿದ್ದಾರೆ.

ಇನ್ನು ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹತ್ತಾರು ವರ್ಷಗಳಿಂದ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ‘ಕೊಂದವರು’ ಯಾರು? ಎಂಬ ಸತ್ಯವನ್ನು ಸರ್ಕಾರ ಪತ್ತೆಹಚ್ಚಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಕನ್ನಡ ರಾಜ್ಯೋತ್ಸವ ದಿನದಂದು ನ್ಯಾಯಕ್ಕಾಗಿ ಆಗ್ರಹಿಸಿ ಮಹಿಳಾ ಸಂಘಟನೆಗಳು, ಮಹಿಳಾ ಸಮಾನತೆಯನ್ನು ಬೆಂಬಲಿಸುವ ಸಹೃದಯರು ಒಟ್ಟುಗೂಡಿ ಶನಿವಾರ ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಹಿಳೆಯರ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

“ಎಸ್‌ಐಟಿ ರಚನೆಗಾಗಿ ಆಗ್ರಹಿಸಿದ ಮಹಿಳಾ ಆಯೋಗದ ಪತ್ರ ಮತ್ತು ಅದನ್ನು ಆಧರಿಸಿ ಎಸ್‌ಐಟಿ ರಚಿಸಿದ ಸರ್ಕಾರದ ಆದೇಶ, ಎರಡರಲ್ಲೂ ಸ್ಪಷ್ಟವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನೂ ಒಳಗೊಂಡ ಸಮಗ್ರ ತನಿಖೆ ನಡೆಯಬೇಕು ಎಂಬ ಆಶಯವಿದೆ. ಹಾಗಿದ್ದ ಮೇಲೆ, ಅಂತಹ ಎಲ್ಲ ಪ್ರಕರಣಗಳ ತನಿಖೆಯನ್ನೂ ಸಂಪೂರ್ಣಗೊಳಿಸುವ ತನಕ ಸರ್ಕಾರ ಎಸ್‌ಐಟಿ ತನಿಖೆ ನಿಲ್ಲಿಸಬಾರದು” ಎಂದು ಫ್ರೀಡಂ ಪಾರ್ಕ್‌ನಲ್ಲಿ ಸೇರಿದ್ದ ಚಿಂತಕಿಯರು, ಬರಹಗಾರ್ತಿಯರು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಒತ್ತಾಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...