ಚಿಕ್ಕಬಳ್ಳಾಪುರ | ಮಹಿಳೆ ಕಿಡ್ನ್ಯಾಪ್‌ ಮಾಡಿ ಕೊಲೆಗೆ ಯತ್ನ; ಆರೋಪಿಗಳ ಬಂಧನ

Date:

ಮಹಿಳೆಯೋರ್ವಳನ್ನು ಕಿಡ್ನ್ಯಾಪ್‌ ಮಾಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರು ಮೂಲದ ಯೋಗ ಶಿಕ್ಷಕಿ ಅರ್ಚನಾ ಕಿಡ್ನ್ಯಾಪ್‌ಗೆ ಒಳಗಾದ ಮಹಿಳೆ. 13 ವರ್ಷಗಳ ಹಿಂದೆ ವಿಶ್ವನಾಥ್‌ ಎಂಬುವರೊಂದಿ ಗೆ ವಿವಾಹವಾಗಿದ್ದ ಅರ್ಚನಾ ಕೌಟುಂಬಿಕ ಕಲಹದ ಹಿನ್ನೆಲೆ ಗಂಡನಿಂದ ದೂರವಾಗಿದ್ದಳು. ನಂತರ ಗಂಡನ ಸ್ನೇಹಿತ ಸಂತೋಷ ಎಂಬುವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು.

ಇದನ್ನು ತಿಳಿದ ಸಂತೋಷ್‌ ಹೆಂಡತಿ ಬಿಂದುಶ್ರೀ,‌ ಖಾಸಗಿ ಡಿಟೆಕ್ಟಿವ್‌ ಏಜೆಂಟ್ ಸತೀಶ್‌ ರೆಡ್ಡಿ ಎಂಬುವನಿಗೆ ಅರ್ಚನಾ ಕೊಲೆ ಮಾಡುವಂತೆ ಸುಪಾರಿ ನೀಡಿದ್ದಳು ಎನ್ನಲಾಗಿದೆ. ಇದಕ್ಕಾಗಿ ಅರ್ಚನಾ ನಡೆಸುವ ಯೋಗ ತರಭೇತಿ ಕ್ಲಾಸ್‌ಗೆ ಸೇರಿಕೊಂಡಿದ್ದ ಸತೀಶ್‌ ರೆಡ್ಡಿ ಅರ್ಚನಾಳೊಂದಿಗೆ ಸಲುಗೆ ಬೆಳೆಸಿ, ಗನ್‌ ಶೂಟಿಂಗ್‌ ತರಬೇತಿ ನೆಪದಲ್ಲಿ ತನ್ನ ಸ್ನೇಹಿತರ ಸಹಾಯದಿಂದ ಅರ್ಚನಾಳನ್ನು ಕಿಡ್ನ್ಯಾಪ್‌ ಮಾಡಿದ್ದ. ಕಿಡ್ನ್ಯಾಪ್‌ ಮಾಡಿ ಕಾರಿನಲ್ಲಿ ಕರೆದೊಯ್ಯುವ ವೇಳೆ ಸತೀಶ್‌ ರೆಡ್ಡಿ ಹಾಗೂ ಆತನ ಸ್ನೇಹಿತರು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದರು. ಇದನ್ನು ವಿರೋಧಿಸಿದ ಅರ್ಚನಾ ಮೇಲೆ ದೈಹಿಕ ಹಲ್ಲೆ ಕೂಡ ನಡೆಸಿದ್ದರು. ಈ ವೇಳೆ ಅರ್ಚನಾ ಪ್ರಜ್ಞೆ ತಪ್ಪಿದ್ದು, ಸಾವನ್ನಪ್ಪಿದ್ದಾಳೆ ಎಂದು ಭಾವಿಸಿದ ಆರೋಪಿಗಳು ಶಿಡ್ಲಘಟ್ಟ ಬಳಿಯ ಅರಣ್ಯ ಪ್ರದೇಶದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಸಣ್ಣ ಗುಂಡಿ ತೋಡಿ ಮಣ್ಣು ಮತ್ತು ಮರದ ಕೊಂಬೆಗಳಿಂದ ಮುಚ್ಚಿ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

ರಾತ್ರಿ ಎಚ್ಚರಗೊಂಡ ಅರ್ಚನಾ ಅಲ್ಲಿಂದ ಹತ್ತಿರದ ಗ್ರಾಮಕ್ಕೆ ತೆರಳಿದ್ದು, ಸ್ಥಳೀಯರ ಸಹಾಯದಿಂದ ದಿಬ್ಬೂರಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಮಹಿಳೆ ದೂರಿನ ಆಧಾರದಲ್ಲಿ ಸತೀಶ್‌ ರೆಡ್ಡಿ, ಬಿಂದುಶ್ರೀ, ರಮಣ, ನಾಗೇಂದ್ರ, ರಚಿಚಂದ್ರ ಎಂಬ ಐವರನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...