ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ: ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

Date:

  • ಸಿಂಗಾಪುರದಲ್ಲಿ ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ: ಆರೋಪ
  • ಆರೋಗ್ಯ ತಪಾಸಣೆಗೆ ಕುಮಾರಸ್ವಾಮಿ ಸಿಂಗಾಪುರಗೆ ತೆರಳಿದ್ದಾರೆ ಎನ್ನಲಾಗಿದೆ

ಸಿಂಗಾಪುರದಲ್ಲಿ ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಎಂದು ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿ‌ದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿದೇಶದಲ್ಲಿ ಕುಳಿತು ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಪ್ರಯತ್ನಗಳು ನಡೆದಿವೆ. ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ” ಎಂದು ಹೆಸರು ಹೇಳಲು ಇಚ್ಚಿಸದೇ ಪರೋಕ್ಷವಾಗಿ ಎಚ್‌ ಡಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ಎಳೆ ಹಿಡಿದು ಮಾತನಾಡಿದ್ದಾರೆ.

ಆರೋಗ್ಯ ತಪಾಸಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿಂಗಾಪುರಗೆ ತೆರಳಿದ್ದಾರೆ ಎನ್ನಲಾಗಿದೆ. ಈ ಹಿಂದೆಯೂ ಹಲವು ಬಾರಿ ಸಿಂಗಾಪುರಕ್ಕೆ ಕುಮಾರಸ್ವಾಮಿ ಹೋಗಿದ್ದರು. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ಕುಮಾರಸ್ವಾಮಿ ಸಿಂಗಾಪುರದಲ್ಲಿ ಇದ್ದಾಗಲೇ ರಾಜ್ಯದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಮೈತ್ರಿ ಸರ್ಕಾರ ಅಲುಗಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...