ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

Date:

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾಮಗಾರಿ ಮಾಡುವವರಂತಹ ಅಸಂಘಟಿತ ವಲಯದ ಕುಟುಂಬಗಳಿಗೆ ಮದುವೆಯ ಖರ್ಚು ದೊಡ್ಡ ಹೊರೆ ಆಗುತ್ತದೆ ಇದನ್ನು ಮನಗಂಡು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ.ಸಹಾಯಧನ ನೀಡಲು ಸರ್ಕಾರ ಯೋಜನೆ ಜಾರಿ ಮಾಡಿದ್ದು ಅಧಿಕಾರಿಗಳ ನಿರ್ಲಕ್ಷದಿಂದ ನಿಜವಾದ ಕಾರ್ಮಿಕರಿಗೆ ಆ ಯೋಜನೆಯ ಸೌಲಭ್ಯ ದೊರೆಯುತ್ತಿಲ್ಲ ಎಂಬುದು ಇಲ್ಲಿನ ಕಟ್ಟಡ ಕಾರ್ಮಿಕರ ಆರೋಪವಾಗಿದೆ.

ಇಂದು ಕಟ್ಟಡ ಕಾರ್ಮಿಕರು ಚಿಂತಾಮಣಿ ನಗರದ ನಾರಪ್ಪಕುಂಟೆಯ ಬಳಿ ಇರುವ ಕಟ್ಟಡ ಕಾರ್ಮಿಕರ ನಿರೀಕ್ಷಕರ ಕಚೇರಿಗೆ ಫೇರಾವ್ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ ಕಾರ್ಮಿಕ ನಿರೀಕ್ಷಕರಾದ ಕಲಾವಣಿ ವಿರುದ್ಧ ದಿಕ್ಕಾರಗಳನ್ನು ಕೂಗುತ್ತಾ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಸರಿಯಾದ ರೀತಿಯಲ್ಲಿ ಮಾಹಿತಿ ತಿಳಿಸದೆ ಹಾಗೂ ನೀಡದೆ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಕಟ್ಟಡ ಕಾರ್ಮಿಕನಾದ ಗಂಗರಾಜು ಹಾಗೂ ನರಸಿಂಹಪ್ಪ ಏನ್ ಎಂ ರವರು ಮಾತನಾಡಿ 08 ಆಗಸ್ಟ್ 2025 ರಂದು ಶಿಡ್ಲಘಟ್ಟ ತಾಲೂಕಿನ ತಲಕಾಯಲ ಬೆಟ್ಟ ಗ್ರಾಮದ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಅನಿತಾ ಎನ್ ಎನ್ ರವರ ಮದುವೆ ಕಾರ್ಯ ನಡೆದಿದ್ದು,ಮದುವೆ ಸಹಾಯದನ ಪಡೆಯಲು ಕಾರ್ಮಿಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲಾಗಿದೆ ಆದರೆ ಕಾರ್ಮಿಕ ಇಲಾಖೆಯ ನಿರೀಕ್ಷಕರು ಉದ್ದೇಶ ಪೂರಕವಾಗಿ ಅರ್ಜಿಯನ್ನು ರದ್ದು ಮಾಡಿದ್ದು ಅಷ್ಟೇ ಅಲ್ಲದೆ ಕಟ್ಟಡ ಕಾರ್ಮಿಕರ ಕಾರ್ಡನ್ನು ರದ್ದುಪಡಿಸಿದ್ದಾರೆ ಎಂದು ಹೇಳಿದ ಅವರು ಇಷ್ಟೆಲ್ಲಾ ಪ್ರಕ್ರಿಯೆಗಳು ಅಧಿಕಾರಿಗೆ ಲಂಚ ಕೊಡದೆ ಇರುವ ಕಾರಣಕ್ಕೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು ವರ್ಷಗಳಿಂದ ಕಾರ್ಮಿಕ ನಿರೀಕ್ಷಕರು ಸರ್ಕಾರಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವುದೇ ಇಲ್ಲ ಸಾರ್ವಜನಿಕರು ಇದರ ಬಗ್ಗೆ ಪ್ರಶ್ನೆ ಮಾಡಿದರೆ ಉಡಾಫೆ ಉತ್ತರ ಕೊಡುತ್ತಾರೆ ಕೂಡಲೇ ಇವರನ್ನು ಕೆಲಸದಿಂದ ಅಮಾನತ್ತು ಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಕಟ್ಟಡ ಕಾರ್ಮಿಕರು ಸಚಿವ ಸಂತೋಷ್ ಲಾಡ್ ರವರಿಗೆ ಫೇರಾವ್ ಹಾಕಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..? ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಇನ್ನೂ ಇದನ್ನು ಕುರಿತು ಮಾಧ್ಯಮದವರು ದೂರವಾಣಿ ಮುಖಾಂತರ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಸಂಪರ್ಕಿಸಿದಾಗ ಅವರು ಇದರ ಬಗ್ಗೆ ಪ್ರತಿಕ್ರಿಯಿಸಿ ಮದುವೆ ಸಹಾಯಧನಕ್ಕಾಗಿ ಚಿಂತಾಮಣಿ ತಾಲ್ಲೂಕಿನ ಯಗವ ಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರಾಮಾಕಲಹಳ್ಳಿ ಗ್ರಾಮದ ನರಸಿಂಹಪ್ಪ ಏನ್ ಎಂ ಎಂಬುವರ ಮಗಳ ಮದುವೆಗೆ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲನೆ ಮಾಡಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸ್ಥಳ ಮಹಾಜರು ಮಾಡಲು ಕಳುಹಿಸಿ ಕೊಟ್ಟು ನಿಜವಾದ ಫಲಾನುಭಾವಿ ಅವರಾಗಿದ್ದರೆ ಸೌಲಭ್ಯ ದೊರಕಿಸಿ ಕೊಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇನ್ನೂ ಪ್ರತಿಭಟನೆ ಮಾಡುತ್ತಿರುವ ವಿಷಯ ತಿಳಿದ ತಕ್ಷಣ ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಸಹ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...