ಬಾಂಗ್ಲಾದೇಶದವರೆಂದು ಶಂಕಿಸಿ ಅಸ್ಸಾಂ ಕಾರ್ಮಿಕರ ಮೇಲೆ ದೌರ್ಜನ್ಯ; ಹಿಂದೂ ಕಾರ್ಯಕರ್ತರ ವಿರುದ್ಧ FIR

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಸ್ಟೇಟ್ ಗಳಲ್ಲಿರುವ ಮೂಲತಃ ಭಾರತ ದೇಶದ ಅಸ್ಸಾಂ ರಾಜ್ಯದ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವ ಆರೋಪದಡಿ ಬಜರಂಗದಳದ ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ.

ಮೂಡಿಗೆರೆ ತಾಲೂಕಿನಲ್ಲಿ ಶುಕ್ರವಾರ ನಡೆಯುತ್ತಿದ್ದ ವಾರದ ಸಂತೆ ಮೇಲೆ ಏಕಾಏಕಿಯಾಗಿ ದಾಳಿ ನಡೆಸಿ ಬಡ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಪಟ್ಟಣದ ಹೆಸಗಲ್‌ ರಸ್ತೆಯ ಸಂತೆ ನಡೆಯುವ ಸ್ಥಳದಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಸಾರ್ವಜನಿಕ ಶಾಂತಿಗೆ ಭಂಗ ಉಂಟಾದ ಘಟನೆ ನಡೆದಿದೆ. ಶುಕ್ರವಾರವಾಗಿದ್ದರಿಂದ ಹಾಗೂ ಮೂಡಿಗೆರೆಯಲ್ಲಿ ಸಂತೆ ದಿನವಾಗಿದ್ದ ಕಾರಣ ಸಂತೆ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು. ಈ ವೇಳೆ ಸಂತೆ ಮಧ್ಯಭಾಗದಲ್ಲಿ ಜೋರಾಗಿ ಕೂಗಾಟ ಹಾಗೂ ಗಲಾಟೆಯ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ, ಸಂತೆ ಕರ್ತವ್ಯದಲ್ಲಿದ್ದ ಪಿಸಿ 219 ಸಚಿನ್, ಪಿಸಿ 668 ರಾಜೇಂದ್ರ ಹಾಗೂ ಪಿಸಿ 154 ಮಹೇಂದ್ರ ಅವರೊಂದಿಗೆ ಪೊಲೀಸರು ಸ್ಥಳಕ್ಕೆ ತೆರಳಿದರು. ಸಂತೆ ಮೈದಾನದಿಂದ ಡಿ.ಎಸ್.ಬಿ.ಜಿ. ಕಾಲೇಜಿಗೆ ಹೋಗುವ ರಸ್ತೆ ಮಧ್ಯಭಾಗದಲ್ಲಿ ಸುಮಾರು 8–10 ಜನರ ಗುಂಪೊಂದು, ಅಲ್ಲಿದ್ದ ಇಬ್ಬರನ್ನು ಉದ್ದೇಶಿಸಿ ʼನೀವು ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನೆಲೆಸಿದ್ದೀರಿ, ನಿಮ್ಮ ಗುರುತಿನ ಪುರಾವೆ ಹಾಗೂ ಇತರ ದಾಖಲೆಗಳನ್ನು ತೋರಿಸಿʼ ಎಂದು ಜೋರಾಗಿ ಕೂಗಾಡುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 85 2

ಗುಂಪಿನಲ್ಲಿದ್ದ ಕೆಲವರು ಪರಸ್ಪರ ಕೈ ಮಿಲಾಯಿಸಿಕೊಂಡು ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಾ ಸಾರ್ವಜನಿಕವಾಗಿ ಗಲಾಟೆ ನಡೆಸಿ, ಜೋರಾಗಿ ಕೂಗಾಡುವುದರಿಂದ ಸಾರ್ವಜನಿಕರ ಶಾಂತಿಗೆ ಭಂಗ ಉಂಟಾಗಿತ್ತು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗಲಾಟೆ ನಡೆಸುತ್ತಿದ್ದವರನ್ನು ತಕ್ಷಣ ತಡೆದು, ಚದುರಿಸಿ ಕಳುಹಿಸಿದರು. ಪೊಲೀಸರ ಸಮಯೋಚಿತ ಕ್ರಮದಿಂದ ದೊಡ್ಡ ಅವಘಡ ತಪ್ಪಿ

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಳ್ಳಾರಿ ಬ್ಯಾನರ್ ಘಟನೆ: ಬ್ಯಾನರ್‌ ನೆಪವಷ್ಟೇ, ಹಿಂದೆ ಬೇರೆ ಉದ್ದೇಶವಿರಬಹುದು: CT ರವಿ

ಗಲಾಟೆ ಮಾಡುತ್ತಿದ್ದವರಲ್ಲಿ ಸುದೇವ್ (ಗುತ್ತಿ ಗ್ರಾಮ), ಸಂತೋಷ್ (ಗೋಣಿಬೀಡು), ಪ್ರಶಾಂತ್ (ಹಂಡುಗುಳಿ), ನಿತಿನ್ (ಕಡೇಮಡ್ಕಲ್ ಗ್ರಾಮ), ಅನಿಲ್ ಪೂಜಾರಿ ಅಲಿಯಾಸ್ ಹನೀಫ್ (ಮೂಡಿಗೆರೆ), ಶಶಿ (ಹಳೇಕೋಟೆ ಗ್ರಾಮ), ಪುಣಿತ್ (ಮೂಡಿಗೆರೆ), ಚೇತನ್ (ಹಳೇ ಮೂಡಿಗೆರೆ), ಅಭಿಷೇಕ್ (ಉಗ್ರೇಹಳ್ಳಿ) ಸೇರಿದಂತೆ ಇನ್ನಿತರರು ಇದ್ದರು ಎಂದು ತಿಳಿದು ಬಂದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ಸಂತೆ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೌಂಡ್ ನಡೆಸಿ ನಂತರ ಠಾಣೆಗೆ ವಾಪಸ್ ಆಗಿದ್ದಾರೆ. ಶುಕ್ರವಾರ ಸಂಜೆ 6 ಗಂಟೆ ವೇಳೆಗೆ ಘಟನೆಯ ಕುರಿತು ಸಂಗ್ರಹಿಸಿದ ಮಾಹಿತಿಯನ್ನು ಇಲಾಖಾ ಮೇಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸರ್ಕಾರದ ಪರವಾಗಿ ಸ್ವಯಂ ಪಿರ್ಯಾದು ತಯಾರಿಸಲಾಗಿದೆ ಹಾಗೂ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...