ಕೋಲಾರ | ವಿಶ್ವದ ಅತೀ ದೊಡ್ಡ ವ್ಯಾಪಾರ ಮಾದಕ ವಸ್ತು : ನ್ಯಾ.ಸುನಿಲ್‌ ಹೊಸಮನಿ

Date:

ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತು ವಿಶ್ವದ ದೊಡ್ಡ ವ್ಯಾಪಾರವಾಗಿದೆ ಎಂದು ಕೋಲಾರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಹಿರಿಯ ಸಿವಿಲ್‌ ನ್ಯಾ.ಸುನಿಲ್‌ ಹೊಸಮನಿ ಹೇಳಿದರು.

ಕೋಲಾರ ನಗರದ ಆಲ್‌ ಅಮೀನ್‌ ವಿದ್ಯಾ ಸಂಸ್ಥೆಯಲ್ಲಿ ಈ ನೆಲ ಈ ಜಲ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಸಂವಾದ ಸಂಸ್ಥೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಮಾದಕ ವ್ಯಸನ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಕುರಿತ ಅರಿವು ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಟ್ಟ ಚಟಗಳು ಸ್ನೇಹಿತರಿಂದ, ಜೀವನ ಸಮಸ್ಯೆಗಳು ಸೇರಿದಂತೆ ಇತರೆ ಕಾರಣಗಳಿಗೆ ದುಶ್ವಟಗಳ ದಾಸರಾಗುತ್ತಿದ್ದಾರೆ. ಇದರಿಂದ ಯುವಜನತೆ ಹೊರಬರಬೇಕಿದೆ. ಮಾದಕ ವಸ್ತುವಿನ ನಿಯಂತ್ರಣ ಮಾಡುವವರು ಯಾರು?. ಇದರ ಮೂಲ ಯಾವುದು?. ಇದನ್ನು ಮಾರುವವರು ಯಾರು? ಮುಂತಾದ ವಿಷಯದ ಆಳಕ್ಕೆ ಇಳಿದರೆ ಸಮಸ್ಯೆಯ ಆಳವೂ ಅರಿವಿಗೆ ಬರುತ್ತದೆ. ಇದನ್ನು ನಿಲ್ಲಿಸುವುದು ಹೇಗೆ ಎಂಬುದೇ ದೊಡ್ಡ ಪ್ರಶ್ನೆಯಾಗಿ ಎಲ್ಲ ದೇಶಗಳನ್ನು ಕಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂವರಲ್ಲಿ ಒಬ್ಬ ಧೂಮಪಾನ ವ್ಯಸನಿ :

ಪ್ರಪಂಚದಲ್ಲಿ ಶೇ.19ರಷ್ಟು ಗುಟ್ಕಾ ವ್ಯಸನದವರಿದ್ದಾರೆ. ಶೇ.26ರಷ್ಟು ಸಿಗರೇಟ್‌, ಶೇ.25ರಷ್ಟು ಮದ್ಯ ಸೇವನೆ ವ್ಯಸನದವರಿದ್ದಾರೆ. ಪ್ರತಿ ಮೂವರಲ್ಲಿ ಒಬ್ಬ ಧೂಮಪಾನ ಮಾಡುತ್ತಾನೆ. ಇದನ್ನು ಸೇವಿಸುವವನಿಗಿಂತ ಇತರೆಯವರಿಗೆ ಹೆಚ್ಚು ವೈದ್ಯಕೀಯ ಸಮಸ್ಯೆ ಕಾಡುತ್ತಿದೆ ಎಂದರು.

ಕೋಲಾರ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಅಧಿಕಾರಿ ಮಹಮ್ಮದ್ ಮಾತನಾಡಿ, ದುಶ್ಚಟದಿಂದ ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮಗಳಾಗುತ್ತಿದ್ದರೂ, ದುಶ್ಚಟಗಳ ದಾಸರಾಗುತ್ತಿದ್ದಾರೆ. ಆದರೆ, ಯೋಗ, ಪ್ರಾಣಯಾಮ ಮತ್ತು ಧ್ಯಾನದಿಂದ ಮಾದಕ ವಸ್ತು ಸೇವನೆಯಿಂದ ಹೊರಬರಬಹುದು. ಮನಸ್ಸಿಗಿಂತ ದೊಡ್ಡದಿಲ್ಲ, ದೃಢ ಮನಸ್ಸಿನಿಂದ ವ್ಯಸನಮುಕ್ತರಾಗುವತ್ತ ಯುವಜನತೆ ಮುಂದಾಗಬೇಕು ಎಂದರು.

ಎರಡನೇ ಸ್ಥಾನದಲ್ಲಿ ಭಾರತ :

ತಂಬಾಕು ಉತ್ಪನ್ನಗಳ ಬಳಕೆಯಲ್ಲಿ ಇಡೀ ಪ್ರಪಂಚದಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ತಂಬಾಕು ಸೇವನೆಯಿಂದ ಜಾಗತಿಕವಾಗಿ ಪ್ರತಿವರ್ಷ ಸಾಯುವವರ ಸಂಖ್ಯೆ 70 ಲಕ್ಷಕ್ಕಿಂತ ಅಧಿಕ. ಭಾರತದಲ್ಲಿ 10 ಲಕ್ಷ ಜನರು ಬೀಡಿ, ಸಿಗರೇಟ್‌, ತಂಬಾಕಿನ ನೇರ ಸೇವನೆಯಿಂದ ಉಂಟಾಗುವ ಕ್ಯಾನ್ಸರ್‌ ಹಾಗೂ ಇತರೆ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಈ ಪ್ರಮಾಣ 8 ಸಾವಿರ. ಈಶಾನ್ಯ ರಾಜ್ಯಗಳಲ್ಲಿ ಶೇ.70 ರಷ್ಟು ಮಂದಿ ಧೂಮಪಾನಕ್ಕೆ ದಾಸರಾಗಿದ್ದಾರೆ. ಇದು ರಾಷ್ಟ್ರೀಯ ಸರಾಸರಿಗಿಂತ ಶೇ.15ರಷ್ಟು ಹೆಚ್ಚು. ತಂಬಾಕು ಸೇವೆನೆಯಿಂದ ಕೇವಲ ಗಂಟಲು, ಶ್ವಾಸಕೋಶ ಮಾತ್ರವಲ್ಲದೆ ಅಡಿಯಿಂದ ಮುಡಿವರೆಗೆ ನಮ್ಮ ದೇಹದ ಪ್ರತಿಯೊಂದು ಜೀವ ಕೋಶದ ಮೇಲೆ ಅದು ಮಾರಕ ಪರಿಣಾಮವನ್ನುಂಟು ಮಾಡುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಕ್ಯಾನ್ಸರ್‌ ನೋಂದಣಿ(ನ್ಯಾಷನಲ್‌ ಕ್ಯಾನ್ಸರ್‌ ರಿಜಿಸ್ಟ್ರಿ) ಪ್ರಕಾರ ದೇಶದಲ್ಲಿ ಶೇ.60ರಷ್ಟು ಮಂದಿಯ ಕ್ಯಾನ್ಸರ್‌ ಸುಲಭವಾಗಿ ತಡೆಯಬಹುದು. ಚಟಕ್ಕೆ ಜೋತು ಬಿದ್ದು ಬಹುಬೇಗ ಸಾವು ತಂದುಕೊಳ್ಳುವವರು ತಮ್ಮ ಕುಟುಂಬಗಳನ್ನು ಅನಾಥರನ್ನಾಗಿಸಿರುತ್ತಾರೆ. ಚಿಕಿತ್ಸೆಗೆ ಸಾವಿರಾರು ರೂ. ವ್ಯಯ ಮಾಡುವುದರ ಮೂಲಕ ತಮ್ಮ ಕುಟುಂಬಗಳನ್ನು ಚೇತರಿಸಿಕೊಳ್ಳಲಾರದ ಆರ್ಥಿಕ ಸಂಕಷ್ಟಕ್ಕೆ ದೂಡುತ್ತಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಸರಕಾರದ ಬೊಕ್ಕಸಕ್ಕೂ ದೊಡ್ಡ ನಷ್ಟ. ಕೇಂದ್ರ ಸರಕಾರ ತಂಬಾಕು ಸೇವನೆಯಿಂದ ಬರುವ ವಿವಿಧ ರೋಗಳ ಚಿಕಿತ್ಸೆಗೆ ವಾರ್ಷಿಕವಾಗಿ 1,04,500 ಕೋಟಿ ರೂ. ಖರ್ಚು ಮಾಡುತ್ತಿದೆ. ರಾಜ್ಯ ಸರಕಾರ ಇದಕ್ಕಾಗಿ 903 ಕೋಟಿ ವಿನಿಯೋಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ಈ ನೆಲ ಈ ಜಲ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ವೆಂಕಟಾಚಲಪತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೊಸ ತಲೆಮಾರಿನ ಯುವಕ ಯುವತಿಯರಲ್ಲಿ ನೆಲ ಜಲ ಸಾಂಸ್ಕೃತಿಕ ವೈಚಾರಿಕತೆಯ ಬಗ್ಗೆ ಅರಿವಿಲ್ಲದಾಗಿದೆ. ಈ ಬಗ್ಗೆ ಹೆಚ್ಚಿನ ಅರಿವು ಅಗತ್ಯವಿದೆ. ವಿದ್ಯಾರ್ಥಿಗಳು ಗುಣಮಟ್ಟದ ವಿದ್ಯಾಬ್ಯಾಸಕ್ಕೆ ಮುಂದಾಗಬೇಕು ಹೇಳಿದರು.

ಕಾರ್ಯಕ್ರಮದಲ್ಲಿ ಆಲ್ ಅಮೀನ್ ಸಂಸ್ಥೆಯ ಪ್ರಾಂಶುಪಾಲರಾದ ಸಮೀನ್ ಸಲ್ಮಾ ಮೋಸಿನ ಬೇಗಮ್, ಗಮನ ಸಮೂಹದ ಲಕ್ಷ್ಮಿ, ರಾಜಕುಮಾರ್ ಹಾಗೂ ಮಂಜುನಾಥ್ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...