ಉಡುಪಿ | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಜನಜಾಗೃತಿ ಜಾಥಾಗೆ ಚಾಲನೆ

Date:

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಕ್ಷಮ ಪ್ರಾಧಿಕಾರ ಪಿ.ಸಿ-ಪಿ.ಎನ್.ಡಿ.ಟಿ ಉಡುಪಿ ಜಿಲ್ಲೆ ಹಾಗೂ ನ್ಯೂಸಿಟಿ ನರ್ಸಿಂಗ್ ವಿದ್ಯಾಲಯಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸಲು, ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಹಾಗೂ ಲಿಂಗತಾರತಮ್ಯವನ್ನು ಹೋಗಲಾಡಿಸುವ ಕುರಿತು ಜಾಗೃತಿ ಮೂಡಿಸಲು ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹೆಣ್ಣು ಮಕ್ಕಳ ಹಕ್ಕು ಮತ್ತು ಸಬಲೀಕರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಹೆಣ್ಣು ಮಕ್ಕಳು ಸಶಕ್ತರಾಗಲು ಸಮಾಜ ಅವಕಾಶ ಮಾಡಿಕೊಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ್ ರಾವ್, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕಾರ್ಯಕ್ರಮದ ಉದ್ದೇಶಗಳು, ಮಹತ್ವ, ಭ್ರೂಣಲಿಂಗ ಪತ್ತೆ ಮತ್ತು ತಡೆಗಟ್ಟುವ ಕಾನೂನುಗಳ ಕುರಿತಾಗಿ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಸಮಾಲೋಚಕರು-ಕ್ವಾಲಿಟಿ ಆಶುರೆನ್ಸ್, ಮಣಿಪಾಲ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಆರೋಗ್ಯ ಇಲಾಖಾ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ವಂದಿಸಿದರು. ಜಾಥಾ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಛೇರಿಯಿಂದ ಹೊರಟು ಮುಖ್ಯ ರಸ್ತೆಯಲ್ಲಿ ಹಾದು ಮಣಿಪಾಲದಿಂದ ಕ್ವಾಯಿನ್ ಸರ್ಕಲ್ ವೃತ್ತಾಕಾರವಾಗಿ ಡಿಸಿ ಕಚೇರಿಯಲ್ಲಿ ಸಮಾಪನಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...