ಶಿಡ್ಲಘಟ್ಟ | ಪರಿಸರ ಸಂರಕ್ಷಣೆ ಘೋಷಣೆಗೆ ಸೀಮಿತವಾಗದಿರಲಿ : ನ್ಯಾ.ಮೊಹಮ್ಮದ್ ರೋಷನ್ ಷಾ

Date:

ಮನುಷ್ಯನ ಸ್ವಾರ್ಥಸಾಧನೆಗೆ ಪ್ರಾಕೃತಿಕ ಸಂಪತ್ತು ನಶಿಸುತ್ತಿರುವ ಈ ಸಂದರ್ಭದಲ್ಲಿ ವಿಶ್ವ ಭೂಮಿ ದಿನವನ್ನು ಗಿಡ ನೆಡುವುದಕ್ಕೆ ಸೀಮಿತಗೊಳಿಸದೆ ನಮ್ಮ ಬದುಕಿನ ಪ್ರತಿ ದಿನವೂ ಪ್ರಕೃತಿಯ ಉಳಿವಿಗೆ ನಿರಂತರ ಪ್ರಯತ್ನ ನಡೆಸಬೇಕೆಂದು ತಾಲೂಕು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಕರೆ ನೀಡಿದರು.

ಶಿಡ್ಲಘಟ್ಟ ನಗರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನಾಚರಣೆಯಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್ ಬಳಕೆಯು ಹೆಚ್ಚುತ್ತಿದೆ. ಇದು ಪರಿಸರ ಹಾಗೂ ಮಾನವನ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಆಹಾರದ ಮೂಲಕ ನಮ್ಮ ದೇಹ ಪ್ರವೇಶಿಸುತ್ತಿದೆ. ಜನರು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿ ಪರ್ಯಾಯ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಸ್.ರಂಜಿತಾ ಮಾತನಾಡಿ, ಇಂದಿನ ಬಹುತೇಕ ಭೂಮಿ ಸಂಬಂಧಿತ ಸಮಸ್ಯೆಗಳಿಗೆ ಮಾನವನೇ ಕಾರಣ. ಪುರಾತನ ಕಾಲದಲ್ಲಿ ಸಾವಯವ ಗೊಬ್ಬರದ ಬಳಕೆಯಿಂದ ಭೂಮಿ ಫಲವತ್ತಾಗುತ್ತಿತ್ತು. ಆದರೆ ಈಗ ರಾಸಾಯನಿಕ ಗೊಬ್ಬರಗಳಿಂದ ಭೂಮಿಯ ಗುಣಮಟ್ಟ ಹದಗೆಡುತ್ತಿದೆ. ಸಾವಯವ ಕೃಷಿ ಮತ್ತು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕೆಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ ಮಾತನಾಡಿ, ಮರಗಳ ಬೆಳೆವಣಿಗೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಾಲು ಮರದ ತಿಮ್ಮಕ್ಕ ಅವರ ಪಾತ್ರ ಪ್ರೇರಣಾದಾಯಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ಶಿಡ್ಲಘಟ್ಟ | ಶ್ರದ್ಧಾಭಕ್ತಿಯಿಂದ ನೆರವೇರಿದ ತಿಪ್ಪೇನಹಳ್ಳಿ ಆಂಜನೇಯ ಸ್ವಾಮಿ ದೀಪೋತ್ಸವ

ಇದೇ ವೇಳೆ ನ್ಯಾಯಾಲಯದ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರು ಹಾಕಲಾಯಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಶಹಾಬುದ್ದೀನ್ ಸೇರಿದಂತೆ ಇತರೆ ವಕೀಲರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...