ಯಾದಗಿರಿ | ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮಗೆ ಅದ್ದೂರಿ ಸ್ವಾಗತ

Date:

ಕಲರ್ಸ್‌ ಕನ್ನಡ ಸಿನಿಮಾ ಚಾನಲ್‌ನ ಬಿಗ್‌ ಬಾಸ್ ಸೀಜ಼ನ್ 12ರ ಸ್ಪರ್ಧಿ ಮಲ್ಲಮ್ಮ ಬಾವಿ ಅವರನ್ನು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸ್ವಗ್ರಾಮವಾದ ಕನ್ನೆಳ್ಳಿ ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು.

ನಟ ಮನೋಜ್ ಕುಮಾರ್ ಹಾಗೂ ಸೆಲೆಬ್ರಿಟಿಸ್ ಪಲ್ಲವಿ ಲಕ್ಷ್ಮೀಕಾಂತಗೌಡ ಜತೆಗೆ ಮಲ್ಲಮ್ಮ ಬಾವಿಯವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳು ಲೇಜಿಮ್ ತಂಡ ಹಾಗೂ ಡೊಳ್ಳು ಕುಣಿತದ ತಂಡದೊಂದಿಗೆ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು.

ಕನ್ನೆಳ್ಳಿ ಗ್ರಾಮಸ್ಥರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆಕಾಶವಾಣಿ ಕಲಾವಿದರಾದ ವೀರೇಶ ಗವಾಯಿಗಳು ಹಾಗೂ ಮಹಾಂತೇಶ ಹೆಗ್ಗಣದೊಡ್ಡಿಯವರಿಂದ ಸಂಗೀತ ಕಾರ್ಯಕ್ರಮಕ್ಕೆ ಡೊಳ್ಳು ವಾದ್ಯ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ದೇವದುರ್ಗದ ಮಲದಕಲ್ ಪೂಜ್ಯರು, ನಗನೂರು ಸೂಗೂರೇಶ್ವರ ಮಠದ ಪೂಜ್ಯರು, ಹೆಗ್ಗಣದೊಡ್ಡಿ ಧರ್ಮ ಮಠದ ಪೂಜ್ಯರು, ಶಹಾಪುರ ಚನ್ನಬಸವೇಶ್ವರ ಗದ್ದುಗೆ ಸಂಸ್ಥಾನದ ಪೂಜ್ಯರಾದ ಶರಣು ಗದ್ದುಗೆ, ಬಂಡೆಪ್ಪನಹಳ್ಳಿ ಪೂಜ್ಯರು ಕನ್ನೆಳ್ಳಿ ಗ್ರಾಮದ ಮಲ್ಲಯ್ಯ ಮುತ್ಯಾ, ಪಂಚಯ್ಯ ಮುತ್ಯಾ, ಗೋವಿಂದ ರಾಜದೇವರು, ದೊಡ್ಡಪ್ಪಗೌಡ ಪೊಲೀಸ್ ಪಾಟೀಲ್, ಬಾಪುಗೌಡ ಮಾಲಿಪಾಟೀಲ್ ಸುರಪುರ ಪಿಎಸ್ಐ ಸಿದ್ದಣ್ಣ ಯಡ್ರಾಮಿ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಜಾರಿಯಲ್ಲಿರುವ ಕಾನೂನು ಕಟ್ಟುನಿಟ್ಟಾಗಿ ಪಾಲಿಸಿ : ಮನು ಪಟೇಲ್ ಬಿ.ವೈ

ಗ್ರಾಮದ ಪ್ರಮುಖರಾದ ನಿಂಗಣ್ಣ ಗೋಡಿಹಾಳ್ಕರ್, ಬಸವರಾಜ ನಾಯ್ಕೋಡಿ, ಮಡಿವಾಳಪ್ಪ ಕೊಂಡಗುಳಿ, ಚಂದಪ್ಪ ನಾಯ್ಕೋಡಿ, ನಾದಬ್ರಹ್ಮ ಹೆಬ್ಬಾಳ್ಕರ್, ಮಲ್ಲಣ್ಣ ಹಡಪದ, ಮಲ್ಲಿಕಾರ್ಜುನ ಕುಂಬಾರ ಸೇರಿದಂತೆ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಮತ್ತು ಮಕ್ಕಳು ಇದ್ದರು.

ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ಅಂಗಡಿ ನಿರೂಪಿಸಿದರು, ಮಲ್ಲು ಚಾನಕೋಟಿ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...