ಯಾದಗಿರಿ | ಬಿಸಿಯೂಟ ಕಾರ್ಮಿಕರಿಗೆ ಕಾಂಟಿಜೆನ್ಸಿ ಹಣ ನೀಡುವಂತೆ ಮನವಿ

Date:

  • ಬಿಸಿಯೂಟ ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಮನವಿ
  • ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ

ಚುನಾವಣೆ ಸಮಯದಲ್ಲಿ ಚುನಾವಣಾ ಕೆಲಸಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಬಿಸಿಯೂಟ ತಯಾರಿಸುವ ಕಾರ್ಮಿಕರಿಗೆ ಕಾಂಟಿಜೆನ್ಸಿ ಹಣ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತರು ಅಕ್ಷರ ದಾಸೋಹ ಇಲಾಖೆಯ ಯಾದಗಿರಿ ಸಹಾಯಕ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆ ನಿಮಿತ್ತ ಮೇ.10 ರಂದು ಮತದಾನದ ಬೂತ್‌ಗಳಿಗೆ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಬರುತ್ತಾರೆ. ಆ ಅಧಿಕಾರಿಗಳಿಗೆ ಬಿಸಿಯೂಟ ಕಾರ್ಮಿಕರು ಅಡುಗೆ ಮಾಡಿಕೊಡಬೇಕಾಗುತ್ತದೆ. ಈ ಕೆಲಸ ಮಾಡುವದಕ್ಕೆ ನಮಗೆ ಯಾವುದೇ ರೀತಿ ಹಣ ನೀಡುವುದಿಲ್ಲ. ಆದ್ದರಿಂದ, ಇಲಾಖೆಯು 2 ದಿನದ ಕಾಂಟಿಜೆನ್ಸಿ ಹಣ ನೀಡಬೇಕು” ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? : ತುಮಕೂರು | ಮಾಜಿ ಡಿಸಿಎಂ ಪರಮೇಶ್ವರ್‌ ಸ್ವಕ್ಷೇತ್ರದ 13 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿವೆ. ಆ ಹಣದಲ್ಲಿ ಬಿಸಿಯೂಟದ ಕಾರ್ಮಿಕರಿಗಾಗಿ 2 ದಿನದ ಕೂಲಿ ಹಣ ನೀಡಬೇಕು. ಒಂದು ವೇಳೆ ನೀಡದಿದ್ದರೆ ಚುನಾವಣಾ ಅಧಿಕಾರಿಗಳಿಗೆ ಅಡುಗೆ ಮಾಡುವುದನ್ನು ಬಹಿಷ್ಕರಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಸೌಭಾಗ್ಯ ಮಾಲಗತ್ತಿ, ಶಹಾಜೀದಿಬೇಗಂ, ಪ್ರಕಾಶ ಆಲ್ದಾಳ, ಯಲ್ಲಪ್ಪ ಚಿನ್ನಾಕಾರ, ಸುರೇಖಾ ಕುಲಕರ್ಣಿ ಸೇರಿದಂತೆ ಹಲವು ಬಿಸಿಯೂಟ ಕಾರ್ಮಿಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...