ಯಾದಗಿರಿ | ಸಮೃದ್ಧ ದೇಶ ನಿರ್ಮಾಣದಲ್ಲಿ ಮಕ್ಕಳ ಆರೋಗ್ಯದ ಪಾತ್ರ ಮುಖ್ಯ: ಬಸವರಾಜ ಶರಾಬಿ

Date:

ಸಮೃದ್ಧವಾದ ದೇಶವೊಂದನ್ನು ನಿರ್ಮಾಣ ಮಾಡುವಲ್ಲಿ ಆರೋಗ್ಯವಂತ ಮಕ್ಕಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಾಬಿ ಅಭಿಪ್ರಾಯಪಟ್ಟರು.

ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಕನ್ಯಾಕೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಲ್ಡ್ ವಿಷನ್ ಇಂಡಿಯಾ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಅಭಿವೃದ್ಧಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, “ಪೌಷ್ಟಿಕ ಆಹಾರ ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದಲು ಸಹಾಯವಾಗುತ್ತದೆ. ಅದೇ ರೀತಿ ಉತ್ತಮ ಆರೋಗ್ಯ ಹೊಂದಿರುವ ಮಕ್ಕಳು ದೇಶದ ಮುಂದಿನ ಸಂಪತ್ತಾಗಲು ಸಹಾಯವಾಗುತ್ತದೆ. ಹಾಗಾಗಿ ವರ್ಲ್ಡ್ ವಿಷನ್ ಇಂಡಿಯಾ ಸ್ವಯಂ ಸೇವಾ ಸಂಸ್ಥೆ ವಿತರಿಸುತ್ತಿರುವ ಪೌಷ್ಟಿಕ ಆಹಾರ ಧಾನ್ಯಗಳ ಕಿಟ್‌ನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು ಮಕ್ಕಳ ಆರೋಗ್ಯ ವೃದ್ಧಿಸಲು ಅಡಿಪಾಯ ಹಾಕುವುದರ ಜತೆಗೆ ಸದೃಢ ದೇಶ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು” ಎಂದು ಮನವಿ ಮಾಡಿದರು.

ಸಂಸ್ಥೆ ವತಿಯಿಂದ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಅಪೌಷ್ಟಿಕ ಮಕ್ಕಳಿಗೆ ಆಹಾರ ಧಾನ್ಯಗಳ ಕಿಟ್‌, ಹೆಣ್ಣು ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಲಾಯಿತು. ನಾಲ್ಕು ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ತಲಾ ₹30,000 ಸಹಾಯಧನ ನೀಡಲಾಯಿತು ಹಾಗೂ ಉನ್ನತ ಶಿಕ್ಷಣಕ್ಕಾಗಿ ₹80,000, ಕಿರಾಣಿ ಅಂಗಡಿ ಇಟ್ಟುಕೊಳ್ಳಲು ₹30,000 ಸಹಾಯಧನ ನೀಡಲಾಯಿತು. ಒಬ್ಬ ಫಲಾನುಭವಿಗೆ ಕುರಿ ಸಾಕಣೆ ಮಾಡಲು ₹30,000 ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಯಾದಗಿರಿ | ಅಂಬಿಗರ ಚೌಡಯ್ಯ ನಿಷ್ಠುರ ವಚನಕಾರ: ವಿಶ್ವನಾಥ ನಾಯಕ

ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿದ್ದಣ್ಣ ಗೌಡ ಬಿರಾದಾರ, ಆರೋಗ್ಯ ಅಧಿಕಾರಿ ಸಂಗಣ್ಣ ನುಚ್ಚಿನ್, ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ಹಿರೇಮಠ, ಕರದಹಳ್ಳಿ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜಣ್ಣ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸಾಬಣ್ಣ ಪೂಜಾರಿ, ಅಂಗನವಾಡಿಯ ಮೇಲ್ವಿಚಾರಕಿ ಮೇಲಕಮ್ಮ, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕಿಯರು, ಮಕ್ಕಳು, ಪೋಷಕರು, ಸ್ವಯಂ ಸೇವಕರು ಹಾಗೂ ಗ್ರಾಮದ ಹಿರಿಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...