ಯಾದಗಿರಿ | ರಾಜ್ಯಪಾಲರ ನಡೆ ಖಂಡಿಸಿ ಸೆ.3ರಂದು ಪ್ರತಿಭಟನೆ: ದಸಂಸ ಮುಖಂಡ ಮರೆಪ್ಪ ಚೆಟ್ಟೇರಕರ್

Date:

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸೆಪ್ಟೆಂಬರ್‌ 3ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚೆಟ್ಟೇರಕರ್ ತಿಳಿಸಿದರು.

ಯಾದಗಿರಿ ಪತ್ರಿಕಾ ಭವನದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ವಿರೋಧ ಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡಲಾಗದ ಬಿಜೆಪಿಯು ಜೆಡಿಎಸ್‌ ಜೊತೆಗೂಡಿ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ” ಎಂದು ಆರೋಪಿಸಿದರು.

“ಸಂವಿಧಾನದ ಆಶಯಗಳ ಅಡಿಯಲ್ಲಿ, ರಾಷ್ಟ್ರಪತಿಗಳ ನೇರ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ಪ್ರಧಾನಿ ಹಾಗೂ ಗೃಹಸಚಿವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಸಂವಿಧಾನ-ಪ್ರಜಾಪ್ರಭುತ್ವ-ಒಕ್ಕೂಟ ವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿರುವುದು ವಿಷಾದಕರ ಸಂಗತಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್‌ನ ಎಚ್‌ ಡಿ ಕುಮಾರಸ್ವಾಮಿ, ಬಿಜೆಪಿಯ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆಯ ವಿರುದ್ಧ ಲೋಕಾಯುಕ್ತ ಮತ್ತು ಎಸ್‌ಐಟಿಯಂಥ ತನಿಖಾ ಸಂಸ್ಥೆಗಳು ಪ್ರಾಸಿಕ್ಯೂಷನ್ ನಡೆಸಲು ಅನುಮತಿ ಕೋರಿ ವರ್ಷವಾಗುತ್ತ ಬಂದಿದೆ. ಆದರೂ ಅನುಮತಿ ನೀಡದ ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರನ್ನು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒಂದೇ ದಿನದಲ್ಲಿ ಶೋಕಾಸ್‌ ನೋಟೀಸ್ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಅನುಮತಿ ನೀಡಿರುವುದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿಯಾಗಿದೆ” ಎಂದು ದೂರಿದರು.

“ಸಿದ್ದರಾಮಯ್ಯರನ್ನು ಮಣಿಸಲು ಬಿಜೆಪಿ-ಜೆಡಿಎಸ್‌ ಮಸಲತ್ತು ನಡೆಸುತ್ತಿವೆ. ತಳ ಸಮುದಾಯಗಳ ಪ್ರತಿನಿಧಿಯಾಗಿ ಬೆಳೆದುಬಂದಿರುವ ಸಿದ್ಧರಾಮಯ್ಯ ಅವರನ್ನು ಸೈದ್ಧಾಂತಿಕವಾಗಿ ಸೋಲಿಸುವುದು ಕಷ್ಟ. ಸಿದ್ದರಾಮಯ್ಯನವರಿಗೆ ಭ್ರಷ್ಟಾಚಾರದ ಖಯಾಲಿ ಇಲ್ಲದಿರುವುದು ಬಿಜೆಪಿ- ಜೆಡಿಎಸ್‌ನವರಿಗೆ ದೊಡ್ಡ ತಲೆನೋವಾಗಿದೆ. ಯಾವುದೂ ಸಿಗದೇ ಇದ್ದಾಗ ತಾವೇ ಮಂಜೂರು ಮಾಡಿದ್ದ ಸೈಟನ್ನು ವಿವಾದಮಯಗೊಳಿಸಿ, ಅದನ್ನು ಸಿದ್ದರಾಮಯ್ಯನವರು ತಮ್ಮ ಅಧಿಕಾರಾವಧಿಯಲ್ಲಿ ನಡೆಸಿರುವ ಅಕ್ರಮ ಎಂಬಂತೆ ಬಿಂಬಿಸಿ ಇಲ್ಲದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

“ಕಾಂಗ್ರೆಸ್‌ ಸೇರಿದಂತೆ ಯಾವುದೇ ಪಕ್ಷ ಅಥವಾ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ದಸಂಸ ಹೋರಾಟ ಮಾಡುತ್ತಲೇ ಇದೆ. ಮುಡಾ ಪ್ರಕರಣವು ಕುತಂತ್ರ ರಾಜಕಾರಣದ ಭಾಗ. ಹಾಗಾಗಿ, ಇದನ್ನು ದಸಂಸ ಖಂಡಿಸುತ್ತದೆ. ತಳಸಮುದಾಯದ ನಾಯಕನನ್ನು ಮಣಿಸುವ ದುಷ್ಟಕಾರಣಗಳಿಗಾಗಿ ರಾಜ್ಯಪಾಲರನ್ನು ಬಳಸಿಕೊಂಡು ಬಲಿಪಶು ಮಾಡಲು ನಡೆಸುವ ಕುಚೋದ್ಯಗಳನ್ನು ಸಹಿಸಿಕೊಳ್ಳಲು ಸಾಧವಿಲ್ಲ” ಎಂದು ಮರೆಪ್ಪ ಚೆಟ್ಟೇರಕರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸುವಂತೆ ಎಐಡಿಎಸ್‌ಒ ಆಗ್ರಹ

“ಈ ಹಿನ್ನೆಲೆಯಲ್ಲಿ ಬಿಜೆಪಿ ಜೆಡಿಎಸ್‌ನ ದುಷ್ಟತನದ ವಿರುದ್ಧ ಹೋರಾಟ ನಡೆಸಲೇಬೇಕಿದೆ. ಅದಕ್ಕಾಗಿ ಸೆಪ್ಟೆಂಬರ್ 3ರಂದು ದಲಿತ ಸಂಘರ್ಷ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದೆ. ಈ ಸಭೆಗೆ ದಲಿತರು, ವಿದ್ಯಾರ್ಥಿ-ಯುವಜನರು, ಮಹಿಳೆಯರು, ಹಿಂದುಳಿದ ವರ್ಗದವರು, ಪ್ರಗತಿಪರರು ಹಾಗೂ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಗೋಪಾಲ ತೆಳಿಗೇರಿ, ಬಸವರಾಜ ಗುಡಿಮನಿ, ಮಲ್ಲಿನಾಥ ಸುಂಗುಲ್ಕರ್, ಸೈದಪ್ಪ ಕುಲೂರ್, ಮರೆಪ್ಪ ಜಾಲಿಮಂಚಿ, ಲಾಲಪ್ಪ ತಲಾರಿ, ಬಸ್ಸು ಬೋಳಾರಿ, ದ ವಿ ಸಂಪತ್ ಚಿನ್ನಾಕರ್, ಶ್ರೀಕಾಂತ್ ತಲಾರಿ, ಭೀಮಣ್ಣ ರಾಕಮಗೇರಿ, ವಸಂತ್ ಸುಂಗುಲ್ಕರ್, ಭೀಮಣ್ಣ ಸುಂಗುಲ್ಕರ್, ಮರಿಲಿಂಗ ಕುರುಕುಂಬಳ, ಸತೀಶ್ ಬಡಿಗೇರ್, ಜೈಭೀಮ್ ಕೊಲ್ಲೂರ್ಕರ್, ರಾಕೇಶ್ ಬನ್ನೇಟ್ಟಿ, ಬಸವರಾಜ್ ಕೂಡ್ಲಿಗಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...