ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಆಗ್ರಹ

Date:

ಕಲಬುರಗಿಯಿಂದ ಬೆಂಗಳೂರಿಗೆ ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿರುವ ನ್ಯೂ ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಯಾದಗಿರಿ ಜಿಲ್ಲೆಯಲ್ಲಿ ನಿಲ್ಲಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.

ಪತ್ರಕರ್ತರೊಂದಿಗೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಬಿ. ಎನ್ ವಿಶ್ವನಾಥ್ ನಾಯಕ, ಕರ್ನಾಟಕದಲ್ಲಿ ಯಾದಗಿರಿ ಜಿಲ್ಲೆಯಿಂದ ಅತಿ ಹೆಚ್ಚು ಮಂದಿ, ಬೆಂಗಳೂರು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಕಾರ್ಮಿಕರು ವಲಸೆ ಹೋಗುತ್ತಾರೆ. ಅಲ್ಲದೆ, ಇಲ್ಲಿಂದ ಸಾಕಷ್ಟು ಜನ ಬೆಂಗಳೂರಿಗೆ ದಿನನಿತ್ಯ ತೆರಳುವುದರಿಂದ ಕೆಲವೊಂದು ರೈಲು ಇಲ್ಲಿ ನಿಲ್ಲುತ್ತಿಲ್ಲ. ಎಲ್ಲ ರೈಲುಗಳನ್ನು ಸಹ ಇಲ್ಲಿ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಇಲ್ಲಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ತೇರಳುವುದರಿಂದ, ಅತಿಹೆಚ್ಚು ಆದಾಯ ನೀಡುವ ನಮ್ಮ ಯಾದಗಿರಿ ರೈಲ್ವೇ ಸ್ಟೇಷನ್ ಇದಾಗಿದೆ. ಇಲ್ಲಿಂದ ತೆರಳುವ ಕೂಲಿ ಕಾರ್ಮಿಕರಿಗೆ ಬಡ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ,  ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಕಡ್ಡಾಯವಾಗಿ ಯಾದಗಿರಿಯಲ್ಲಿ ನಿಲ್ಲಿಸಲು ಅಗತ್ಯ ಕ್ರಮ  ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲವಾದಲ್ಲಿ ಬರುವ ಸಂಸದರ ಚುಣಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಅದ ಕಾರಣ ಇಲ್ಲಿನ ಜನತೆಗೆ ವಂದೇ ಭಾರತ ರೈಲನ್ನು ನಿಲ್ಲಿಸಬೇಕು ಇಲ್ಲವಾದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ರೈಲ್ವೇ ಸ್ಟೇಷನ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...