ಯಾದಗಿರಿ | ಬರದ ಭೀತಿ ಇದ್ದರೂ ರೈತರ ಸಭೆ ಕರೆಯದ ಜಿಲ್ಲಾಡಳಿತ; ಉಮೇಶ ಮುದ್ನಾಳ ಆರೋಪ

Date:

ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿದೆ. ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ಆಧ್ಯತೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.

ನೀರಿನ ಸಮಸ್ಯೆಯ ಬಗ್ಗೆ ಮಾತನಾಡಿರುವ ಅವರು, “ಭೀಮಾ ನದಿಯಲ್ಲಿ ನೀರು ಬತ್ತಿಹೋಗಿದೆ. ಸನ್ನತಿ ಬ್ಯಾರೇಜ್‌ನಿಂದ ಎರಡು ದಿನಗಳ ಹಿಂದೆ 1,400 ಕ್ಯೂಸೆಕ್ ನೀರು ಹರಿಸಲಾಗಿದೆ. ಯಾದಗಿರಿ ನಗರ, ಗುರುಮಠಕಲ್ ಪಟ್ಟಣ ಸೇರಿದಂತೆ ಉಭಯ ತಾಲೂಕಿನ ನೂರಾರು ಹಳ್ಳಿಗಳ ಜನ ಜಾನುವಾರುಗಳಿಗೆ ಕುಡಿವ ನೀರು ಲಭಿಸುವಂತಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಈಗಾಗಲೇ ಮುಂಗಾರು ವೈಫಲ್ಯವಾಗಿ ಒಂದುವರೆ ತಿಂಗಳಾಗುತ್ತಿದ್ದರೂ ಜಿಲ್ಲಾಡಳಿತ ಭೀಮಾ ನದಿ ಪಾತ್ರದ ರೈತರನ್ನು ಕರೆದು ಸಭೆ ಮಾಡಿಲ್ಲ. ಕೃಷಿ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಬೇಜವಬ್ದಾರಿಯಿಂದ ವರ್ತಿಸಿರುವುದರಿಂದ ಇಡಿ ಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆ ತೆಲೆದೋರುವ ಸಾಧ್ಯತೆ ಇದೆ” ಎಂದು ಅವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...