ಯಾದಗಿರಿ | ನಾರಾಯಣಪುರ ಡ್ಯಾಂನಿಂದ ಕೃಷಿಗೆ ನೀರು ಹರಿಸುವಂತೆ ಒತ್ತಾಯ

Date:

ಯಾದಗಿರಿ ಜಿಲ್ಲೆಯಲ್ಲಿರುವ ನಾರಾಯಣಪುರ ಜಲಾಶಯದಿಂದ ಮಂಗಾರು ಬೆಳೆಗೆ ವಾರಬಂದಿ ಮಾಡದೇ ನಿರಂತರ ನೀರು ಹರಿಸಬೇಕೆಂದು ಜೆಡಿಎಸ್‌ ಮುಖಂಡರು ಒತ್ತಾಯಿಸಿದ್ದಾರೆ.

ಯಾದಗಿರಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಜೆಡಿಎಸ್‌ ಕಾರ್ಯಕರ್ತರು, “ಮುಂಗಾರು ಬೆಳೆಗೆ ಇಂದಿನಿಂದ ವಾರಬಂದಿ ಪದ್ಧತಿಯಲ್ಲಿ ಕಾಲುವೆಗಳಿಂದ ರೈತರ ಹೊಲ ಗದ್ದೆಗಳಿಗೆ ನೀರು ಹರಿಸಲಾಗುವುದು ಎಂಬ ಮಾಹಿತಿ ಬಂದಿದೆ. ಇದರಿಂದ ರೈತರು ಗಾಬರಿಯಾಗಿದ್ದಾರೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭತ್ತದ ಸಸಿ ನಾಟಿ ಮಾಡುವ ಹಂತದಲ್ಲಿದ್ದು, ವಾರಬಂದಿ ಪದ್ದತಿಯಲ್ಲಿ ನೀರು ಕೊಟ್ಟರೆ, ನಾಟಿ ಕಾರ್ಯ ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ವಾರಬಂದಿ ಪದ್ದತಿಯನ್ನು ಕೈಬಿಟ್ಟು, ನಿರಂತರವಾಗಿ ನೀರು ಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ದೇವಿಂದ್ರಪ್ಪ ಬಳಿಚಕ್ರ ದೊರೆ, ಹೊನ್ನಪ್ಪ ಪುಟ್ಟಿ ಗೌಡ ಹಿರಿಯ ರೈತ ಕಕ್ಕೇರಾ, ದೇವಿಂದ್ರಪ್ಪ ಕಾಮನಟ್ಟಗಿ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...