ಯಾದಗಿರಿ | ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ಅಕ್ರಮ; ಕ್ರಮಕ್ಕೆ ಆಗ್ರಹ

Date:

ಯಾದಗಿರಿ ಜಿಲ್ಲೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಭೂ ಒಡೆತನ ಯೋಜನೆಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಅಕ್ರಮವೆಸಗಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಿಗೆ ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘ ಮನವಿ ಪತ್ರ ಸಲ್ಲಿಸಿದೆ.

ಮನವಿ ಪತ್ರದಲ್ಲಿ, ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಬಾಬು ಜಗಜೀವನರಾಮ್ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ಭೂ ಒಡೆತನ ಯೋಜನೆಯಡಿಯಲ್ಲಿ ಭೂಮಿಯನ್ನು ಒದಗಿಸಿ, ಫಲಾನುಭವಿಗಳನ್ನು ಆರ್ಥಿಕವಾಗಿ ಸದೃಢ ಮಾಡುವುದು ನಿಯಮವಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಭೂಒಡೆತನ ಯೋಜನೆಯಗೆ ಫಲಾನುಭವಿಗಳನ್ನು ಆಯ್ಕೆ ಮಾಡಲು ದೊಡ್ಡ ಪ್ರಮಾಣದಲ್ಲಿ ರಾಜಕೀಯ ಹಿನ್ನಲೆಯುಳ್ಳ ದಲ್ಲಾಳಿಗಳು ಈ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ದಲ್ಲಾಳಿಗಳು ಹೇಳಿದ ಹಾಗೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ದಲ್ಲಾಳಿಗಳು ಆಯ್ಕೆ ಮಾಡಿದ ಭೂಮಿಗಳನ್ನು ಅಧಿಕಾರಿಗಳು ಅನುಮೋದನೆ ನೀಡಿ, ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಭೂಮಿಯನ್ನು ನೀಡಿರುತ್ತಾರೆ. ವಾಸ್ತವದ ಸಂಗತಿ ಏನೆಂದರೆ, ಭೂಮಿ ಪಡೆದ ಫಲಾನುಭವಿಗಳು ಸರ್ವೆ ನಂಬರ್‌ಗಳಲ್ಲಿ ಹೋದಾಗ, ಹಳ್ಳ, ಸರ್ಕಾರಿ ಗೈರಾಣ, ಮಡ್ಡಿ, ಕೃಷಿಗೆ ಯೋಗ್ಯವಲ್ಲದ ಭೂಮಿ ತೋರಿಸಿ ಲಕ್ಷಾಂತರ ರೂಪಾಯಿ ಮೇಲೆ ತಿಳಿಸಿದ ನಿಗಮಗಳಿಗೆ ದಲ್ಲಾಳಿಗಳು ಮತ್ತು ಅಧಿಕಾರಿಗಳು ಸೇರಿ ನಷ್ಟ ಉಂಟು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಲಾನುಭವಿಗಳು ಆರ್ಥಿಕವಾಗಿ ಹಿಂದುಳಿಯಲು ದಲ್ಲಾಳಿಗಳು ಮತ್ತು ಅಧಿಕಾರಿಗಳು ಕಾರಣರಾಗಿದ್ದಾರೆ. ಆದ್ದರಿಂದ 2009ರಿಂದ 2024ರವರೆಗೆ ಸಂಪೂರ್ಣ ಭೂಒಡೆತನ ಯೋಜನೆಯ ದಾಖಲೆಗಳನ್ನು ಸ್ಥಳಗಳೊಂದಿಗೆ ಪರಿಶೀಲನೆ ಮಾಡಿ ಮತ್ತು ಫಲಾನುಭವಿಗಳು ಒಂದೇ ಮನೆಯ ಗಂಡ ಹೆಂಡತಿ, ಅಣ್ಣ ತಮ್ಮ ಇನ್ನೀತರ ಒಂದೇ ಕುಟುಂಬದ ವ್ಯಕ್ತಿಗಳನ್ನು ಆಯ್ಕೆ ಮಾಡುತ್ತಾ ಮೂಲ ಫಲಾನುಭವಿಗಳಿಗೆ ಅನ್ಯಾಯ ಮಾಡಿದ್ದಾರೆ. ಆದ್ದರಿಂದ ಒಂದು ತನಿಖಾ ತಂಡವನ್ನು ನೇಮಿಸಿ, ವರದಿಯ ಮೇಲೆ ಅಧಿಕಾರಿಗಳು ಹಾಗೂ ದಲ್ಲಾಳಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರದೀಪ ಅಣಬಿ, ಅಂಬರೀಶ್ ಶಿರವಾಳ, ಮಾಳಪ್ಪ ಪೂಜಾರಿ, ದೇವಪ್ಪ, ಭೋಜಪ್ಪ, ಬಸು ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...