ಯಾದಗಿರಿ | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ಬಳಸದಂತೆ ಒತ್ತಾಯ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

“ಕಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ರಾಹುಲ್ ಕೊಲ್ಲೂರ್ಕರ್, ಜುಮ್ಮಾಣ್ಣ ಗುಡಿಮ, ಮೌನೇಶ್ ಯಡ್ಡಳ್ಳಿ, ಮಲ್ಲಿಕಾರ್ಜುನ್ ನಾಟೇಕಾರ್, ವೀರೂಪಾಕ್ಷ, ಭೀಮರಾಯ, ಭೀಮಾಶಂಕರ್, ಬಸ್ಸು ಬೀರನೂರ್, ಆಂಜನೇಯ, ರಮೇಶ್, ಮಲ್ಲು, ಆನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...