ವಡಗೇರಾ ತಾಲೂಕಿನ ಐಯ್ಯಾಳ ಗ್ರಾಮ ಪಂಚಾಯತ ವ್ಯಾಪ್ತಿಯ ಮದರಕಲ್ ರಸ್ತೆ ಬಳಿ ಮದ್ಯದಿಂದ ತುಂಬಿದ್ದ ಲಾರಿ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯವಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ತಕ್ಷಣ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ.
ಬೀರನೂರ ಕ್ರಾಸ್‌ನಿಂದ ಮದರಕಲ್, ಯಕ್ಷಿಂತಿ ಮತ್ತು ಹಯ್ಯಾಳ ಬಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ರಸ್ತೆಯ ಅಸಮತೋಲನವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಸಾಹಿತ್ಯ ಜನರ ನೋವಿಗೆ ಮಿಡಿಯಬೇಕು ; ವಿಶ್ವನಾಥ ರೆಡ್ಡಿ ಗೊಂದೆಡಗಿ
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹದಗೆಟ್ಟ ರಸ್ತೆ ಸ್ಥಿತಿಯಿಂದ ಆಗಾಗ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯರು ತಕ್ಷಣದ ರಸ್ತೆ ದುರಸ್ತಿಗಾಗಿ ಆಗ್ರಹ ವ್ಯಕ್ತಪಡಿಸಿದ್ದಾರೆ.





