ಯಾದಗಿರಿ | ಬಾವಿಯಿಂದ ಪೈಪ್ ಮೇಲೆತ್ತಲು ಮಕ್ಕಳ ಬಳಕೆ; ಖಾಸಗಿ ಶಾಲೆ ವಿರುದ್ಧ ಆಕ್ರೋಶ

Date:

ಖಾಸಗಿ ಶಾಲೆಯ ಆವರಣದಲ್ಲಿದ್ದ ಕೊಳವೆ ಬಾವಿ ಕೆಟ್ಟುಹೋಗಿದ್ದು, ರಿಪೇರಿಗಾಗಿ ಅದರಲ್ಲಿದ್ದ ಪೈಪ್‌ಅನ್ನು ಮೇಲೆತ್ತಲು ಸಿಬ್ಬಂದಿಗಳು ಶಾಲೆಯ ಮಕ್ಕಳನ್ನು ಬಳಸಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಶಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಶಿಕ್ಷಣ ಇಲಾಖೆಗೆ ಆಗ್ರಹಿಸಿದ್ದಾರೆ.

ಕೆಂಭಾವಿಯಲ್ಲಿರುವ ಖಾಸಗಿ ಜ್ಞಾನದೀಪ ಶಾಲೆಯಲ್ಲಿ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ನಡೆದು ಈಗಾಗಲೇ ಐದಾರು ದಿನಗಳಾಗಿವೆ. ಆದರೂ, ಇಲಾಖೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತವಾಗಿದೆ.

ಶಾಲೆಯ ಕಾಂಪೌಂಡ್ ಬಳಿ 300 ಅಡಿ ಆಳದ ಕೊಳವೆ ಬಾವಿ ಇದೆ. ಆ ಕೊಳವೆ ಬಾವಿಗೆ ಇಳಿಸಲಾಗಿದ್ದ ಮೋಟಾರ್‌ ಕೆಟ್ಟಿದ್ದರಿಂದ, ದುರಸ್ತಿಗಾಗಿ ಮೋಟಾರ್ ಮತ್ತು ಪೈಪ್‌ಅನ್ನು ಮೇಲೆತ್ತಬೇಕಿತ್ತು. ಪೈಪ್‌ಅನ್ನು ಮೇಲೆತ್ತಲು ಶಾಲಾ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಮಕ್ಕಳನ್ನು ಬಳಿಸಿಕೊಂಡಿದ್ದಾರೆ. ಮಕ್ಕಳು ಪೈಪ್‌ಅನ್ನು ಎಳೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ವೈರಲ್ ಆದ ಬಳಿಕ ಶಾಲೆಗೆ ಮಕ್ಕಳ ಹಿತರಕ್ಷಣಾ ಸಮಿತಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೂ, ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ.

ಶಾಲೆ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗವು ಡಿಡಿಪಿಐಗೆ ಸೂಚನೆ ನೀಡಿದೆ. ಆದರೆ, ಡಿಡಿಪಿಐ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆಯಿಂದ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಶಾಲೆ ವಿರುದ್ಧ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಡಿಪಿಐ ಚನ್ನಬಸಪ್ಪ, “ಘಟನೆ ನಡೆದ ದಿನದಂದೇ ಪ್ರಕರಣ ದಾಖಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆ ಬಳಿಕ, ಮಕ್ಕಳ ಹಕ್ಕುಗಳ ಆಯೋಗವೂ ಸೂಚನೆ ನೀಡಿದೆ. ಇಂದೇ ಪ್ರಕರಣ ದಾಖಲಿಸಲು ಸೂಚಿಸುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...