ಯಾದಗಿರಿ | ದೇವನಹಳ್ಳಿಯ ರೈತ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

Date:

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ ಪ್ರತಿಭಟನಾ ನಿರತ ರೈತರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ ಕ್ರಮ ಖಂಡಿಸಿ ಶಹಾಪುರನಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಚನ್ನಪ್ಪ ಆನೆಗುಂದಿ ಮಾತನಾಡಿ, ʼಪೊಲೀಸರು ಏಕಾಏಕಿ ಘಟನಾ ಸ್ಥಳಕ್ಕೆ ಆಗಮಿಸಿ, ಪ್ರತಿಭಟನೆಗೆ ಅವಕಾಶವಿಲ್ಲವೆಂದು ವೇದಿಕೆ ಮೇಲಿರುವ ಪ್ರತಿಭಟನಕಾರರನ್ನು ಎಳದಾಡಿ, ಬಂಧಿಸಿರುವುದು ಸರಿಯಲ್ಲ. ಕೂಡಲೇ ಬಂಧಿಸಿದವರನ್ನು ಬಿಡುಗಡೆ ಮಾಡಿ, ಅವರ ಮೇಲಿನ ಪ್ರಕರಣಗಳನ್ನು ಕೈ ಬಿಡಬೇಕು‌. ಅಲ್ಲದೆ, ಭೂಸ್ವಾಧೀನ ಪ್ರಕ್ರಿಯೆ ಹಿಂಪಡೆಯಬೇಕುʼ ಎಂದು ಒತ್ತಾಯಿಸಿದರು

ʼಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ತಮ್ಮ 1,177 ಎಕರೆ ಭೂಮಿ ಉಳಿಸಿಕೊಳ್ಳಲು 1,181 ದಿನಗಳಿಂದ ಪ್ರಜಾತಾಂತ್ರಿಕ ಹೋರಾಟ ಮಾಡುತ್ತಿದ್ದರು. ಸರಕಾರ ಅವರ ಇಷ್ಟುದಿನಗಳ ಹೋರಾಟಕ್ಕೆ ಒತ್ತಾಯಕ್ಕೆ ಕಿವಿಕೊಡದೇ ಭೂ ಸ್ವಾಧೀನ ಪ್ರಕ್ರಿಯೆಯ ಅಂತಿಮ ಘಟ್ಟಕ್ಕೆ ಕೈ ಹಾಕಿದ ಹಿನ್ನೆಲೆಯಲ್ಲಿ ಜೂ.25 ರಂದು ಈ ಹೋರಾಟ ಬೆಂಬಲಿಸಿ ರಾಜ್ಯದ ಮೂಲೆ ಮೂಲೆಗಳಿಂದ, ವಿವಿಧ ಪ್ರಗತಿಪರ ಸಂಘಟನೆಗಳು, ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯ ತೀರ್ಮಾನದೊಂದಿಗೆ ಶಾಂತಿಯುತ ಪ್ರತಿಭಟನೆ ನಡೆದಿತ್ತು. ಅನ್ನದಾತರ ಬದುಕಿಗೆ ಕೊಳ್ಳಿ ಇಟ್ಟು ಕಾರ್ಪೊರೇಟ್ ಬಂಡವಾಳಿಗರಿಗೆ ಮೃಷ್ಟಾನ್ನ ತಿನ್ನಿಸುವ ಯೋಜನೆಯ ಈ ಸಂಚು ಜನವಿರೋಧಿ ಎಂಬುದು ಎಲ್ಲರ ಒಕ್ಕೊರಲಿನ ಕೂಗಾಗಿತ್ತುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಂಚಾಲಕ ಮಲ್ಕಣ ಚಿಂತಿ, ಸಂಯುಕ್ತ ಹೋರಾಟ ಜಿಲ್ಲಾ ಸಮಿತಿ ಮುಖಂಡರು, ರೈತರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಭಾಲ್ಕಿ ರೈಲ್ವೆ ನಿಲ್ದಾಣದಲ್ಲಿ ತಿರುಪತಿ-ಔರಂಗಬಾದ್ ರೈಲು ನಿಲುಗಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...