ಯಾದಗಿರಿ | ಮನರೇಗಾ ಯೋಜನೆಯಲ್ಲಿ ಅವ್ಯವಹಾರ ಆರೋಪ; ಕ್ರಮಕ್ಕೆ ಆಗ್ರಹ

Date:

ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ.ಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಂದ ಕೆಲಸ ಮಾಡಿಸದೇ ಅವ್ಯವಹಾರ ಎಸಗಿದ್ದು, ತನಿಖೆ ಆಗುವವರೆಗೂ ಉದ್ಯೋಗ ಖಾತ್ರಿ ಬಿಲ್ ಪಾವತಿಸದೆ ತಡೆಹಿಡಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಯಾದಗಿರಿಯ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದೆ.

ಯಾದಗಿರಿ ತಾಲೂಕಿನ ಬಂದಳ್ಳಿ, ಹೊನಗೇರಾ, ಅರಕೇರಾ (ಬಿ), ವರ್ಕನಳ್ಳಿ ವ್ಯಾಪ್ತಿಯ ಗ್ರಾ.ಪಂ.ಗಳಲ್ಲಿ 2023-24ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು, ಊರಿನಲ್ಲಿ ಇರದೇ ಇರುವ ಕೂಲಿಕಾರರು ಬೆಂಗಳೂರಿನಲ್ಲಿ ದುಡಿಯುವ ಕೂಲಿಕಾರರ ಹೆಸರಿನ ಮೇಲೆ ಎನ್.ಎಂ.ಆ‌ರ್. ತೆಗೆದು, ಕಾಮಗಾರಿ ಮಾಡುತ್ತಿದ್ದಾರೆ ಹಾಗೂ ಕಾಮಗಾರಿಗಳನ್ನು ಜೆ.ಸಿ.ಬಿ. ಯಂತ್ರಗಳಿಂದ ಮಾಡಿಸಿ, ಕೂಲಿಕಾರರಿಗೆ ಕೆಲಸ ನೀಡಿರುವುದಿಲ್ಲ, ಮನರೇಗಾ ಮಾರ್ಗಸೂಚಿ ಪ್ರಕಾರ ಕಾಮಗಾರಿಗಳು ನಡೆಯುತ್ತಿಲ್ಲ. ಬೇಕಾಬಿಟ್ಟಿಯಾಗಿ ಮಾಡಿ, ಪಿಡಿಒ, ಅಧ್ಯಕ್ಷರು, ಜೆ.ಇ. ಕಂ ಆಪರೇಟರ್ ಗ್ರಾ.ಪಂ. ಸದಸ್ಯರು ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ಎನ್.ಎಂ.ಆರ್ ತೆಗೆಯಲು ಹಣ ಕೇಳುತ್ತಾರೆ ಮತ್ತು ಎನ್.ಎಂ.ಆರ್. ಹಾಕುವಾಗ ತನಗೆ ಬೇಕಾದ ಕೂಲಿಕಾರ ಹೆಸರನ್ನು ಸೇರಿಸಿರುತ್ತಾರೆ. ಫಾರಂ ನಂ.6 ತುಂಬಿದ ಕೂಲೀಕಾರರಿಗೆ ಕೆಲಸ ಕೊಡದೇ, ಗ್ರಾ.ಪಂ. ಸದಸ್ಯರಿಗೆ ಕೆಲಸ ನೀಡುತ್ತಾರೆ ಎನ್ನುತ್ತಿರುವ ಪ್ರತಿಭಟನಾಕಾರರು, ಆದ ಕಾರಣ ಮನರೇಗಾ ಯೋಜನೆಯಡಿ ಕಾಮಗಾರಿಗಳ ಸ್ಥಳ ಮತ್ತು ದಾಖಲೆಗಳು ಪರಿಶೀಲನೆ ಆಗುವವರೆಗೂ ಯಾವುದೇ ಎನ್.ಎಂ.ಆರ್ ಮಾಡಬಾರದು. ಕೂಲಿ ಮತ್ತು ಸಾಮಾಗ್ರಿ ಹಣ ತಡೆಹಿಡಿಯಲು ಮನವಿ ಸಲ್ಲಿಸಿದ್ದು, ಒಂದು ವೇಳೆ ಕ್ರಮ ಕೈಗೊಳ್ಳದೇ ಹೋದರೆ, ಕಛೇರಿ ಮುಂದೆ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಅನೀಲ್‌ ಕುಮಾರ ದೊಡ್ಡಮನಿ, ಹಂಪಯ್ಯ.ಎನ್.ಶೇಂಗಿನೋರ, ಹಣಮಂತ ಚಿಕ್ಕಮೇಟಿ, ದೇವರಾಜ್, ಗೌತಮ್ ಕ್ರಾಂತಿ ಗಂಗಾರಮ್, ಬಂದಪ್ಪ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...