ಯಾದಗಿರಿ | ಸಬ್ಸಿಡಿ ಹಣ ಮಂಜೂರಾತಿಗೆ ₹5 ಸಾವಿರ ಲಂಚ : ತೋಟಗಾರಿಕೆ ಇಲಾಖೆ ಎಡಿ ಲೋಕಾಯುಕ್ತ ಬಲೆಗೆ

Date:

ಈರುಳ್ಳಿ ಶೆಡ್‌ ನಿರ್ಮಾಣದ ಸಬ್ಸಿಡಿ ಹಣದಲ್ಲಿ ರೈತನಿಂದ ಫೋನ್ ಪೇ ಮೂಲಕ ₹5 ಸಾವಿರ ಲಂಚ ಪಡೆದ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಈರುಳ್ಳಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದರು. ಅವರಿಗೆ ಸರ್ಕಾರದಿಂದ ₹80 ಸಾವಿರ ಸಬ್ಸಿಡಿ ಹಣ ಮಂಜೂರಾಗಿತ್ತು. ಆ ಹಣ ಮಂಜೂರು ಮಾಡಲು ಸಬ್ಸಿಡಿ ಹಣದಲ್ಲಿ ಸುಮಾರು ₹20 ಸಾವಿರ ನೀಡುವಂತೆ ಶಿವದತ್ತ ಬೇಡಿಕೆ ಇಟ್ಟಿದ್ದರು. ಗುರುವಾರ ರೈತ ಶಂಕರಪ್ಪ ಅವರು ಲಂಚದ ಹಣ ಅಧಿಕಾರಿಗೆ ಫೋನ್ ಪೇ ಮೂಲಕ ಐದು ಸಾವಿರ ಜಮಾ ಮಾಡಿದ್ದಾರೆ.

ರೈತ ಶಂಕರಪ್ಪ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆ, ಅಧಿಕಾರಿಗಳು ಯಾದಗಿರಿಯ ಅಂಬೇಡ್ಕರ್‌ ನಗರದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್ಪಿ ಜೆ.ಎಚ್.ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ಸಿದ್ದರಾಯ, ಸಂಗಮೇಶ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದರು.

ಅಧಿಕಾರಿ ಶಿವದತ್ತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ಸತೀಶ್, ಅಮರನಾಥ, ರಾಮುನಾಯಕ, ಮಲ್ಲಮ್ಮ, ನವೀನ್, ಗಂಗಾಧರ, ಸುಮತಿ , ಮಲ್ಲಪ್ಪ, ಖಾಸೀಂ, ಮಲ್ಲಿನಾಥ, ಮಲ್ಲಿಕಾರ್ಜುನ ಮಡಿವಾಳ ಇದ್ದರು.

ಇದನ್ನೂ ಓದಿ : ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್‌ ವಿರುದ್ಧ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...