ಯಾದಗಿರಿ | ಅತಿಥಿ ಉಪನ್ಯಾಸಕರ ಗೊಂದಲ ನಿವಾರಣೆಗೆ ಆಗ್ರಹಿಸಿ ಎಐಡಿಎಸ್‌ಒ ಪ್ರತಿಭಟನೆ

Date:

ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಆಗಿರುವ ಗೊಂದಲ ನಿವಾರಣೆ ಹಾಗೂ ಪದವಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಐಡಿಎಸ್‌ಒ ನೇತ್ರತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಉನ್ನತ ಶಿಕ್ಷಣ ಸಚಿವ ಸುಧಾಕರ್‌ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಎಐಡಿಎಸ್‌ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಮಾತನಾಡಿ, ‘ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಇಲ್ಲಿಯವರೆಗೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ನಡೆದಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಹೀಗಾಗಿ ಅತಿಥಿ ಉಪನ್ಯಾಸಕರಿಲ್ಲದ ಕಾರಣ ತರಗತಿಗಳು ನಡೆಯದಿರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವನ್ನಾಗಿಸಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದೆ. ಯುಜಿಸಿಯ ಹೊಸ ನಿರ್ದೇಶನ ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರ ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕುʼ ಎಂದು ಆಗ್ರಹಿಸಿದರು.

WhatsApp Image 2025 09 08 at 2.19.37 PM

ʼಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.17ಕ್ಕೆ ಸಿಎಂ ಭೇಟಿ

ಪ್ರತಿಭಟನೆಯಲ್ಲಿ ಅನೀತಾ, ಮಹೇಶ್ವರಿ, ಅಶ್ವಿನಿ, ರೇಣುಕಾ, ಸೋನಿ, ಕಾವೇರಿ, ಕವಿತಾ, ಅನಿತಾ, ಸುನೀತಾ, ಮುತ್ತಮ್ಮ, ಪ್ರೀಯಾ, ಸುಷ್ಮಾ, ರಾಧಾ, ಶರಣು, ಶಂಕರ್, ಬಸವರಾಜ, ವಿಶ್ವರಾಜ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...