ಯಾದಗಿರಿ | ರೈತರ ಪರ ಎಐಕೆಕೆಎಂಎಸ್,ಎಸ್‌ಯುಸಿಐ(ಸಿ) ಬೃಹತ್ ಪ್ರತಿಭಟನೆ

Date:

ಜಿಲ್ಲೆಯಾದ್ಯಂತ ಬಂದ ನಿರಂತರ ಮಳೆ ಮತ್ತು ಪ್ರವಾಹದಿಂದ ಅಪಾರ ಬೆಳೆ ನಷ್ಟ, ರೈತರ ಆರ್ಥಿಕ ಸಂಕಷ್ಟ ಹಾಗೂ ಸರ್ಕಾರದ ನಿರ್ಲಕ್ಷ್ಯ ವಿರುದ್ಧವಾಗಿ ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಎಐಕೆಕೆಎಂಎಸ್ ಹಾಗೂ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್), ಎಸ್‌ಯುಸಿಐ (ಸಿ) ಸಂಘಟನೆಗಳು ಜಂಟಿಯಾಗಿ ಶನಿವಾರ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ವಿಸ್ತೃತ ಸಮಿತಿ ಸದಸ್ಯ ಕೆ. ಸೋಮಶೇಖರ್ ಮಾತನಾಡಿ, ಕಳೆದ ಮೂರು ತಿಂಗಳಿಂದ ಸುರಿದ ನಿರಂತರ ಮಳೆ ಮತ್ತು ಭೀಮನದಿ ಪ್ರವಾಹದಿಂದ ಜಿಲ್ಲೆಯಾದ್ಯಂತ ರೈತರ ಬೆಳೆಗಳು ನಾಶವಾಗಿವೆ. ರೈತರ ದುಸ್ಥಿತಿಗೆ ಸರ್ಕಾರಗಳು ಕಣ್ಣಮುಚ್ಚಿಕೊಂಡಿರುವುದು ಖಂಡನೀಯವಾಗಿದೆ. ರೈತರು ಬೆಳೆಗಾಗಿ ಖರ್ಚು ಮಾಡಿರುವ ಅನುಗುಣವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಯಾದಗಿರಿ: ಲಂಚಕ್ಕೆ ಬೇಡಿಕೆ; ಲೋಕಾ ಬಲೆಗೆ ಬಿದ್ದ ಬಿಲ್‌ ಕಲೆಕ್ಟರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಪ್ರತಿನಿಧಿಗಳು ಪ್ರವಾಹ ಸಂತ್ರಸ್ತರ ನೆರವಿಗೆ ಬರುವ ಬದಲು ರಾಜಕೀಯ ಲಾಭಕ್ಕಾಗಿ ಪ್ರವಾಹದ ಸಂದರ್ಭವನ್ನೇ ಉಪಯೋಗಿಸುತ್ತಿರುವುದು ದುಃಖಕರವಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಕ್ಷಣ ಕ್ರಮ ಕೈಗೊಂಡು ಯಾದಗಿರಿಯನ್ನು ಹಸಿಬರ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

2 41

ಇದೇ ವೇಳೆ ಮುಖಂಡ ಶರಣಗೌಡ ಗೂಗಲ್ ಅವರು ಮಾತನಾಡಿ, ಸರ್ಕಾರಗಳು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡದೆ, ಖರೀದಿ ಕೇಂದ್ರಗಳನ್ನು ತಡವಾಗಿ ತೆರೆಯುತ್ತಿರುವುದು ರೈತ ವಿರೋಧಿ ಕ್ರಮವಾಗಿದೆ. ಸರ್ಕಾರವು ರೈತರ ಹಿತವನ್ನು ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪ್ರತಿಭಟನಾ ಸ್ಥಳದಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಶೇಕಡಾ 70 ರಷ್ಟು ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಪೂರ್ಣ ಸಮೀಕ್ಷೆಯ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಿ, ಸಂತ್ರಸ್ತರಿಗೆ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಡಿ. ಉಮಾದೇವಿ, ಜಮಾಲ್ ಸಾಬ್, ರಾಮಲಿಂಗಪ್ಪ ಬಿ.ಎನ್, ಭೀಮರೆಡ್ಡಿ ಹಿರೇಬಾನರ್, ಶಿಲ್ಪಾ ಬಿ.ಕೆ, ಸುಭಾಷ್ ಚಂದ್ರ ಬಾವನೋರ, ಸಿದ್ದಣ್ಣ ಗೂಗಲ್, ಮರೆಪ್ಪ, ರಾಜು, ರಮೇಶ್, ಅಮರೇಶ್ ದಣಿ, ರಾಮರೆಡ್ಡಿ, ಭೀಮರಾಯ, ಮಲ್ಲಮ್ಮ, ಶಿವಬಸಮ್ಮ, ಸುಮಂಗಲ ಸೇರಿದಂತೆ ಹಲವಾರು ರೈತರು ಭಾಗವಹಿಸಿದರು.

ಮುಖ್ಯ ಬೇಡಿಕೆಗಳು: ಜಿಲ್ಲೆಯನ್ನು ಹಸಿಬರ ಪೀಡಿತ ಜಿಲ್ಲೆ ಎಂದು ಘೋಷಿಸುವುದು. ಪ್ರತಿ ಎಕರೆಗೆ ಕನಿಷ್ಠ ರೂ.25 ಸಾವಿರ ಪರಿಹಾರ ನೀಡಬೇಕು, ರೈತರ ಸಾಲಮನ್ನಾ ಹಾಗೂ ಉಚಿತ ಬೀಜ, ರಸಗೊಬ್ಬರ ಪೂರೈಸುವುದು, ಪ್ರವಾಹ ಪೀಡಿತರಿಗೆ ತಕ್ಷಣ ಪರಿಹಾರ, ಆರೋಗ್ಯ ಶಿಬಿರ ಹಾಗೂ ಆಹಾರ ಕಿಟ್ ವಿತರಿಸುವುದು, ಹಾನಿಗೊಳಗಾದ ಮನೆಗಳು, ಶಾಲೆಗಳು, ರಸ್ತೆ, ಸೇತುವೆಗಳನ್ನು ಪುನರ್‌ ನಿರ್ಮಿಸುವುದು ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...