ಯಾದಗಿರಿ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರಾತಿಗೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

Date:

ಯಾದಗಿರಿ ಜಿಲ್ಲೆಯ ಸುರಪುರನಲ್ಲಿ ಡಾ.ಅಂಬೇಡ್ಕರ್ ಹೆಸರಲ್ಲಿ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಎಚ್.ಸಿ ಮಹದೇವಪ್ಪ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.

ಸುಮಾರು 40ಕ್ಕೂ ಅಧಿಕ ವರ್ಷಗಳಿಂದ ಕಬ್ಜದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸುತ್ತ ಅಭಿವೃದ್ಧಿ ಪಡಿಸಲು ಮತ್ತು ದಲಿತ ಸಮಾಜದ ಉದ್ದಾರಕ್ಕಾಗಿ ಡಾ.ಅಂಬೇಡ್ಕರ್ ಅವರ ಹೆಸರಲ್ಲಿ ಗ್ರಂಥಾಲಯ ಉದ್ಯಾನವನ, ಮತ್ತು ಸಾಂಸ್ಕೃತಿಕ ಭವನ ನಿರ್ಮಾಣಕ್ಕಾಗಿ ಅವಶ್ಯಕತೆಯಿರುವ ಜಾಗ ಒತ್ತುವರಿಯಾದ 2 ಎಕರೆ 26 ಗುಂಟೆ ಭೂಮಿಯನ್ನು ಮಂಜೂರು ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಆಗ್ರಹಿಸಿದರು.

ಈ ಜಾಗಕ್ಕೆ ಯಾವುದೇ ಸಂಬಂಧವಿಲ್ಲದ ಮಹರ್ಷಿ ವಾಲ್ಮೀಕಿ ಧ್ವಜಗಳನ್ನು ಸಾಮ್ರಾಟ್ ಅಶೋಕ ಚಕ್ರದ ನೀಲಿ ಧ್ವಜಗಳ ಪಕ್ಕದಲ್ಲಿಯೇ ಹಾಕಿ ಕೆಲವರು ಉದ್ದೇಶ ಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಕೂಡಲೇ ಕ್ರಮ ವಹಿಸಬೇಕೆಂದು ಗೃಹ ಮಂತ್ರಿ ಡಾ.ಜಿ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 08 at 6.32.47 PM 2

ಕಳೆದ ಜುಲೈ 25ರಂದು ಈ ಸದರಿ ವಿಚಾರವಾಗಿ ಹೋರಾಟ ಮಾಡುವುದರ ಮುಖಾಂತರ ಸುರಪುರದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದು, ಆಗಸ್ಟ್ 11ರವರೆಗೂ ಗಡುವು ಕೊಟ್ಟಿದ್ದೇವೆ. ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದೆ ಇದ್ದಲ್ಲಿ ಆಗಸ್ಟ್ 11ರ ನಂತರ ನಮ್ಮ ಮುಂದಿನ ಹೋರಾಟದ ರೂಪರೇಷಗಳ ಬಗ್ಗೆ ದಲಿತ ಸಂಘಟನೆಗಳ ಒಕ್ಕೂಟ ನಿರ್ಧರಿಸಲಿದೆʼ ಎಂದು ತಿಳಿಸಿದ್ದಾರೆ.

ʼಯಾವುದೇ ಕಾರಣಕ್ಕೂ ಅನ್ಯಾಯ, ದೌರ್ಜನ್ಯ ನಾವು ಸಹಿಸುವುದಿಲ್ಲ. ಸ್ಪಷ್ಟವಾದಂತಹ ಸಂದೇಶವನ್ನು ದಲಿತ ಸಮಾಜದ ವತಿಯಿಂದ ನೀಡಲಾಗಿದ್ದು, ನಮ್ಮ ಹೋರಾಟ ಅಕ್ರಮ ಭೂಮಿ ಕಬಳಿಸಿದ ಸೊಸೈಟಿಯ ವಿರುದ್ಧವೇ ಹೊರತು ಯಾವುದೇ ಸಮುದಾಯದ ವಿರುದ್ಧವಲ್ಲ ಮತ್ತು ವ್ಯಕ್ತಿಗಳ ವಿರುದ್ಧವಲ್ಲ. ಕಾನೂನನ್ನು ಗೌರವಿಸಿ ಸಂವಿಧಾನದಡಿಯಲ್ಲಿ ನಮ್ಮ ಹಕ್ಕುಗಳನ್ನು ಪಡೆಯುತ್ತೇವೆʼ ಎಂದು ಹೇಳಿದರು.

WhatsApp Image 2025 08 08 at 6.32.48 PM 1

ʼಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಅವಕಾಶ ನೀಡಿ ಅಶಾಂತಿಗೆ ಕಾರಣವಾದ ಸುರಪುರ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ವಜಾ ಮಾಡಬೇಕೆಂದು ಒತ್ತಾಯಿಸಿದರು. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಲ್ಲಿ ಭೂಮಿ ಮಂಜೂರು ಮಾಡಲು ಹೋರಾಟವನ್ನು ತೀವ್ರಗೊಳಿಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೋಮುವಾದಿ ವ್ಯಕ್ತಿಗಳನ್ನು ಜಿಲ್ಲೆಯಿಂದ ಹೊರಹಾಕಿ: ಜಿಲ್ಲಾಡಳಿತಕ್ಕೆ ಡಾ. ನಂದಕುಮಾರ್ ಆಗ್ರಹ

ನಿಯೋಗದಲ್ಲಿ ದಸಂಸ ಮುಖಂಡರಾದ ಮಾವಳ್ಳಿ ಶಂಕರ್, ಅರ್ಜುನ್ ಭದ್ರೆ, ಮಲ್ಲಿಕಾರ್ಜುನ್ ಕ್ರಾಂತಿ, ಮಾನಪ್ಪ ಕಟ್ಟಿಮನಿ, ವೆಂಕಟೇಶ್ ಹೊಸಮನಿ, ರಾಹುಲ್ ಹುಲಿಮನಿ, ಹಣಮಂತ ಹೊಸಮನಿ, ಮಾಳಪ್ಪ ಕಿರದಳ್ಳಿ. ಶಿವಲಿಂಗ ಹಸನಾಪೂರ, ಶಿವಶಂಕರ ಹೊಸಮನಿ, ಹಣಮಂತ ಭದ್ರಾವತಿ, ವಿರಭದ್ರ ತಳವಾರಗೇರಾ, ತಿಪ್ಪಣ್ಣ ಶೆಳ್ಳಗಿ, ಶೆಖರ್ ಮಂಗಳೂರು, ಶರಣು ಹಸನಾಪುರ, ಮಲ್ಲಿಕಾರ್ಜುನ್ ತಳವಾರಗೇರಾ, ಸಂತೋಷ ಸಗರ, ಮಲ್ಲಿಕಾರ್ಜುನ್ ಜಾಲಬೆಂಚಿ, ಸಂಗಣ್ಣ ಎಮ್ಮಡಗಿ, ಸೋಮು ಕಟ್ಟಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...