ಯಾದಗಿರಿ | ಬಿಸಿಎಂ ಹಾಸ್ಟೆಲ್‌ ವಾರ್ಡನ್ ಪಾರ್ವತಿ ಕರ್ತವ್ಯ ಲೋಪ; ಕಚೇರಿಗೆ ಚಕ್ಕರ್

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿಪೇಠ ಗ್ರಾಮದಲ್ಲಿರುವ ಬಿಸಿಎಂ ಹಾಸ್ಟೆಲ್ ವಾರ್ಡನ್‌ ಸರಿಯಾಗಿ ಕಚೇರಿಗೆ ಹಾಜರಾಗದೆ ಕರ್ತವ್ಯಲೋಪ ಎಸಗುತ್ತಿದ್ದಾರೆ. ಇತರೆ ಸಿಬ್ಬಂದಿಗಳು ಶುಚಿ, ರುಚಿಯಾದ ಅಡುಗೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ.

ಗೋಗಿಪೇಠ ವಸತಿ ನಿಲಯದಲ್ಲಿ ಸುಮಾರು ಐವತ್ತು ವಿದ್ಯಾರ್ಥಿಗಳಿದ್ದು, ಹಲವಾರು ಸಮಸ್ಯೆಗಳು ಎದುರಿಸುತ್ತಿದ್ದಾರೆ. ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಕೊಳೆತ ತರಕಾರಿಗಳಿಂದ ಅಡುಗೆ ಮಾಡಿ ಮಕ್ಕಳಿಗೆ ಉಣಬಡಿಸುತ್ತಿದ್ದಾರೆ. ಮಕ್ಕಳಿಗೆ ಆರೋಗ್ಯದ ಸಮಸ್ಯೆಯಾದರೆ ಹೊಣೆ ಯಾರು?

ವಿದ್ಯಾರ್ಥಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಾರ್ಡನ್‌ ಪ್ರತಿದಿನ ವಸತಿ ನಿಲಯಕ್ಕೆ ಸರಿಯಾಗಿ ಬರುವುದಿಲ್ಲ. ಮುಖ್ಯ ಅಡುಗೆ ಸಿಬ್ಬಂದಿಯಾದ ಜಗದೀಶ್ ವಾರಕ್ಕೊಮ್ಮೆ ಬರುತ್ತಾರೆ. ಆದರೂ ವಿದ್ಯಾರ್ಥಿಗಳ ಮೇಲೆಯೇ ಜೊರು ಮಾಡುತ್ತಾರೆ. ನಾವು ಹಾಕಿದನ್ನೇ ತಿನ್ನಬೇಕು, ಯಾರೂ ಎದುರುತ್ತರ ಕೊಡುವಂತಿಲ್ಲವೆಂದು ದಬ್ಬಾಳಿಕೆ ಮಾಡುತ್ತಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಡುಗೆಗೆ ಕೊಳೆತಿರುವ ಸೊಪ್ಪು ತರಕಾರಿಗಳನ್ನು ಹಾಕುತ್ತಾರೆ. ಊಟ ಸರಿಯಾಗಿ ಕೊಡುವುದಿಲ್ಲವೆಂದು ಸಮಸ್ಯೆ ತಿಳಿಸಿದರೆ, ಅಡುಗೆ ಸಿಬ್ಬಂದಿ ನಮ್ಮ ಪಾಲಕರಿಗೆ ಫೋನ್ ಮಾಡಿ ನಿಮ್ಮ ಮಗ ಸರಿಯಾಗಿಲ್ಲ ಓದಿಕೊಳ್ಳುತ್ತಿಲ್ಲ. ಹಾಸ್ಟೆಲ್‌ನಲ್ಲಿ ಜಗಳ ಮಾಡುತ್ತಾನೆಂದು ನಮ್ಮ ವಿರುದ್ದ ಇಲ್ಲಸಲ್ಲದ ದೂರು ಹೇಳುತ್ತಾರೆ” ಎಂದರು.

“ವಾರ್ಡನ್ ಪಾರ್ವತಿ ಮೇಡಂ ವಾರಗಟ್ಟಲೆ ಹಾಸ್ಟೆಲ್‌ಗೆ ಬರುವುದಿಲ್ಲ. ಅವರಿಗೆ ಇಲ್ಲಿಯ ಸಮಸ್ಯೆಗಳನ್ನು ಹೇಳಿಕೊಂಡರೆ ಅವರೂ ಕೂಡ ನಮ್ಮ ಮೇಲೆ ಕೂಗಾಡುತ್ತಾರೆ. ಜಾಸ್ತಿ ಮಾತನಾಡಿದರೆ ಹಾಸ್ಟೆಲ್‌ನಿಂದ ಆಚೆ ಹಾಕ್ತೀನಿ, ಊಟ ಕೊಡುವುದಿಲ್ಲವೆಂದು ಬೆದರಿಕೆ ಒಡ್ಡುತ್ತಾರೆ. ನಮಗೆ ಇಲ್ಲಿದ್ದುಕೊಂಡು ವ್ಯಾಸಂಗ ಮಾಡಲು ತುಂಬಾ ತೊಂದರೆಯಾಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಅನುಕೂಲವಾಗುತ್ತಿಲ್ಲ. ದಯವಿಟ್ಟು ನಮ್ಮ ಸಮಸ್ಯೆ ಬಗೆಹರಿಸಿಕೊಡಿ” ಎಂದು ಕಣ್ಣೀರಿಟ್ಟಿದ್ದಾರೆ.

“ನಾವು ಬಡವರ ಮಕ್ಕಳು, ಮನೆಯಲ್ಲಿದ್ದುಕೊಂಡು ಓದಲು ಸರಿಯಾದ ಅನುಕೂಲವಿಲ್ಲವೆಂದು ವಸತಿನಿಲಯಕ್ಕೆ ಸೇರಿಕೊಂಡರೆ, ಇಲ್ಲಿ ನಮ್ಮನ್ನು ಅಪರಾಧಿಗಳಂತೆ ನೋಡುತ್ತಿದ್ದಾರೆ. ನಮ್ಮ ಓದಿಗೆ ಯಾವುದೇ ರೀತಿಯ ಅನುಕೂಲ ಮಾಡಿಕೊಡುತ್ತಿಲ್ಲ. ಸರಿಯಾದ ಊಟವನ್ನೂ ನೀಡುವುದಿಲ್ಲ” ಎಂದು ಅವಲತ್ತುಕೊಂಡಿದ್ದಾರೆ.

ಈ ಕುರಿತು ಈ ದಿನ.ಕಾಮ್ ವಾರ್ಡನ್ ಪಾರ್ವತಿಯವರನ್ನು ಸಂರ್ಪಕಿಸಿದ್ದಾಗ, “ನಾನು ತಾಲೂಕು ಅಧಿಕಾರಿಯವರ ಅನುಮತಿಯ ಮೇರೆಗೆ ರಜೆ ತೆಗೆದುಕೊಂಡು ಮದುವೆಗೆ ಹೋಗಿದ್ದೆ. ಇನ್ನೊಂದು ದಿನ ನನಗೆ ಆರೋಗ್ಯದ ಸಮಸ್ಯೆಯಿಂದಾಗಿ ಹಾಸ್ಷೆಲ್‌ಗೆ ಹೋಗಲು ಸಾಧ್ಯವಾಗಿಲ್ಲ. ಹಾಸ್ಟೆಲ್ ವಿಷಯ ಹೇಳುವುದಾದರೆ ಸ್ವಂತ ಕಟ್ಟಡವಿಲ್ಲ. ಇದೊಂದು ಕೊರತೆಯನ್ನು ಬಿಟ್ಟರೆ ಹಾಸ್ಟೆಲ್‌ನಲ್ಲಿ ಯಾವುದೇ ಕೊರತೆ ಇಲ್ಲ” ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಮರೀಚಿಕೆ: ಶಿವಕುಮಾರ ಗೋಲಾ

ತಾಲೂಕು ಅಧಿಕಾರಿ ಚೌದ್ರಿಯವರು ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ್ದು, “ಸಮಸ್ಯೆ ತಿಳಿದ ಬಳಿಕ ನಾನು ವಸತಿ ನಿಯಕ್ಕೆ ಭೇಟಿ ಮಾಡಿದ್ದೇನೆ. ವಾರ್ಡನ್ ಪ್ರತಿದಿನ ಹಾಸ್ಷೆಲ್‌ಗೆ ಹೊಗುತ್ತಾರೆ. ಎರಡ್ಮೂರು ದಿನಗಳ ಹಿಂದೆ ಅವರು ನನಗೆ ತಿಳಿಸಿಯೇ ರಜೆ ತೆಗೆದುಕೊಂಡಿದ್ದಾರೆ” ಎಂದರು.

“ಸ್ವಂತ ಕಟ್ಟಡದ ಕೊರತೆ ಬಿಟ್ಟರೆ ಹಾಸ್ಟೆಲ್‌ನಲ್ಲಿ ಯಾವ ಸಮಸ್ಯೆಯೂ ಇಲ್ಲ. ಸ್ವಂತ ಕಟ್ಟಡ ಬೇಕೆಂದು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಇನ್ನು ಈ ವಿಚಾರದ ಕುರಿತು ಪ್ರತಿಕ್ರಿಯೆ ಬಂದಿಲ್ಲ” ಎಂದು ತಿಳಿಸಿದರು.

ವರದಿ : ಈ ದಿನ.ಕಾಮ್ ಸಿಟಿಜನ್ ಜರ್ನಲಿಸ್ಟ್‌ : ಸುನೀಲ ಹೊಸಮನಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...