ಯಾದಗಿರಿ | ಬಾಗಪ್ಪನ ಸಾವು ಸಹಜ ಸಾವಲ್ಲ, ಕೊಲೆ; ದಸಂಸ ಆರೋಪ

Date:

ಬಾಗಪ್ಪನ ಸಾವು ಸಹಜ ಸಾವಲ್ಲ, ಆತನ್ನು ಕೊಲೆ ಮಾಡಿದ್ದಾರೆ ಎನ್ನುವ ಸಂಶಯ ವ್ಯಕ್ಯವಾಗಿದ್ದು,  ಕೂಡಲೇ ಈ ಪ್ರಕರಣದಲ್ಲಿನ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಲು ಮುಂದಾಗಬೇಕು ಎಂದು ದಸಂಸ ಶಿವಲಿಂಗ ಎಂ ಹಾಸನಪುರ ಒತ್ತಾಯಿಸಿದರು.

ಯಾದಗಿರಿ ಜಿಲ್ಲೆಯ ಸುರಪುರ ನಗರದ ಪೊಲೀಸ್‌ ಠಾಣೆಯಲ್ಲಿನ ಡಿವೈಎಸ್‌ಪಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

“ತಿಪ್ಪನಹಳ್ಳಿ ಗ್ರಾಮದಲ್ಲಿ ಏಪ್ರಿಲ್ 16ರ ರಾತ್ರಿ ನಡೆದ ಬಾಗಪ್ಪ ಲಕ್ಷ್ಮೀಪುರ ಎಂಬಾತನ ಸಾವು ಸಹಜ ಸಾವಲ್ಲ, ಆತನನ್ನು ಕೊಲೆ ಮಾಡಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಮಾತನಾಡಿ, “ಭಾಗಪ್ಪನ ಸಾವು ಕೊಲೆಯಾಗಿದೆಯೆಂದು ಕುಟುಂಬಸ್ಥರೇ ಆರೋಪಿಸುತ್ತಿದ್ದಾರೆ. ಅಲ್ಲದೆ ಕೊಲೆ ನಡೆದು ಮೂರು ತಿಂಗಳಾಗುತ್ತಿದ್ದರೂ ಸರಿಯಾದ ತನಿಖೆ ನಡೆಯುತ್ತಿಲ್ಲ. ಕೂಡಲೇ ಪ್ರಕರಣದಲ್ಲಿನ ಆರೋಪಿಗಳನ್ನು ಬಂಧಿಸಬೇಕು ಮತ್ತು ಎಫ್‌ಐಆರ್‌ನಲ್ಲಿ ಕಲಂ 302ನ್ನು ಸೇರಿಸಬೇಕು” ಎಂದು ಆಗ್ರಹಿಸಿದರು.

ಮುಖಂಡ ಆನಂದ ಲಕ್ಷ್ಮೀಪುರ ಮಾತನಾಡಿ, “ಭಾಗಪ್ಪ ನಮ್ಮೂರಿನ ಯುವಕ, ತಿಪ್ಪನಹಳ್ಳಿಯಲ್ಲಿ ಅವರ ಕುಟುಂಬ ವಾಸಿಸುತ್ತಿದೆ. ಅವರ ಸಂಬಂಧಿಕರ ಕೊಲೆ ಮಾಡಿದ್ದಾರೆ ಎಂದು ಸ್ವತಃ ಕುಟುಂಬಸ್ಥರೆ ಆರೋಪ ಮಾಡುತ್ತಿದ್ದು ಪೊಲೀಸರು ತನಿಖೆ ಮಾಡಲು ಮೀನಾಮೇಷ ಎಣಿಸುತ್ತಿದ್ದು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಡಿವೈಎಸ್ಪಿ ಜಾವಿದ್ ಇನಾಂದಾರ್ ಮಾತನಾಡಿ, “ತಾವು ಅನುಮಾನಿಸುವಂತೆ ಈಗಾಗಲೇ ಕೆಲವರನ್ನು ಠಾಣೆಗೆ ಕರೆಯಿಸಿ ವಿಚಾರಿಸಲಾಗಿದೆ. ಆದರೆ ಸರಿಯಾದ ಸಾಕ್ಷಿಗಳು ದೊರೆಯುತ್ತಿಲ್ಲ. ಆದ್ದರಿಂದ ಈಗ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬರಬೇಕಿದ್ದು, ಇನ್ನು ಮೂರು ದಿನಗಳಲ್ಲಿ ಅಂತಿಮ ವರದಿ ಬಂದ ಬಳಿಕ ಸಾವಿನ ನಿಖರತೆ ಗೊತ್ತಾಗಲಿದ್ದು, ಕೊಲೆಯೆಂದು ವರದಿ ಬಂದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಮತ್ತು ಸೆಕ್ಷನ್ 302ನ್ನು ಸೇರಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಹಸಿರು ಕ್ರಾಂತಿಗೆ ಮುಂದಾದ ವೀಕಲಚೇತನ ತಂಡ; ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಶಿವಲಿಂಗ ಎಮ್ ಹಾಸನಪುರ, ಆನಂದ ಬಿ. ಬಡಿಗೇರ್, ಚಂದಪ್ಪ ಮುನಿಯಪ್ಪನವರ, ತಿಪಣ್ಣ ಬಿ ಶೆಳ್ಳಗಿ, ಭೀಮಣ್ಣ ನಾಟೇಕರ್, ಮರೆಪ್ಪ ಕ್ರಾಂತಿ, ಎಂ ಪಟೇಲ್, ವೆಂಕಟೇಶ್ ದೇವಪುರ, ಬಾಲರಾಜ ಖಾನಾಪುರ, ಚಂದ್ರಶೇಖರ ಹಳ್ಳೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...