ಯಾದಗಿರಿ | ಬಹುಮತ ಇದ್ದರೂ ಬಿಜೆಪಿಗೆ ಸಿಗದ ಪುರಸಭೆ ಅಧಿಕಾರ; ಅಧ್ಯಕ್ಷ ಸ್ಥಾನ ಗೆದ್ದ ಕಾಂಗ್ರೆಸ್‌

Date:

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಪುರಸಭೆಯಲ್ಲಿ ಬಿಜೆಪಿ ಬಹುಮತವನ್ನೂ ಹೊಂದಿದ್ದರೂ, ಅಧ್ಯಕ್ಷ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿದೆ. ಬಿಜೆಪಿಗೆ ದೊರೆಯದ ಅಧ್ಯಕ್ಷ ಹುದ್ದೆಯನ್ನು ಕಾಂಗ್ರೆಸ್‌ ತನ್ನದಾಗಿಸಿಕೊಂಡಿದೆ.

ಕೆಂಭಾವಿ ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿದ್ದು, ಬಿಜೆಪಿ 13 ಮತ್ತು ಕಾಂಗ್ರೆಸ್‌ 8 ಸದಸ್ಯರನ್ನು ಹೊಂದಿವೆ. ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. 13 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡಿದೆ. ಕಡಿಮೆ ಸದಸ್ಯರಿದ್ದೂ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನವನ್ನು ಪಡೆದುಕೊಂಡಿದೆ.

ಪುರಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್‌ ರಹೀಮನ್ ಪಟೇಲ್ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷರನ್ನು ಆಯ್ಕೆ ಮಾಡಲು ಕನಿಷ್ಠ 12 ಮತಗಳ ಅಗತ್ಯವಿತ್ತು. ಕಾಂಗ್ರೆಸ್‌ ಪಕ್ಷೇತರ ಸದಸ್ಯರನ್ನು ತನ್ನ ವಿಶ್ವಾಸಕ್ಕೆ ತೆಗೆದುಕೊಂಡಿದೆ. ಬಿಜೆಪಿ ಇಬ್ಬರು ಸದಸ್ಯರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಧ್ಯಕ್ಷ ಸ್ಥಾನವನ್ನು ಗೆಲ್ಲುವಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಚಾಣಾಕ್ಷತೆ ಕೆಲಸ ಮಾಡಿದೆ ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...