ಯಾದಗಿರಿ | ಸಾರ್ವಜನಿಕ ಶೌಚಾಲಯ ದುರಸ್ತಿಗೆ ಆಗ್ರಹಿಸಿ ಕಾರ್ಮಿಕರ ಸಂಘದ ಮನವಿ

Date:

ಶಾಹಪುರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.28ರ ಹಣಮಂತನಗರದಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ತಕ್ಷಣ ದುರಸ್ಥಿಗೊಳಿಸಿ, ನೀರಿನ ಟ್ಯಾಂಕ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ ಶುಕ್ರವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ.

ಮನವಿ ಸಲ್ಲಿಸಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಪ್ರದೀಪ್ ಅಣಬಿ ಮಾತನಾಡಿ, ‘ಹಣಮಂತ ನಗರದ ಸಾರ್ವಜನಿಕ ಶೌಚಾಲಯ ಸಂಪೂರ್ಣ ಹಾಳಾಗಿದೆ. ಬಾಗಿಲುಗಳು ಮುರಿದು ಹೋಗಿವೆ, ಗೋಡೆಗಳು ಹಾಗೂ ಟೈಲ್ಸ್ ಉದುರಿಹೋಗಿವೆ. ನಳಗಳು ಕಿತ್ತಿಹೋಗಿದ್ದು, ನೀರಿನ ಟ್ಯಾಂಕ್ ಒಡೆದುಹೋಗಿದೆ. ಜೊತೆಗೆ ವಿದ್ಯುತ್ ಸಂಪರ್ಕವೂ ಇಲ್ಲದ ಕಾರಣ ರಾತ್ರಿ ವೇಳೆ ಶೌಚಾಲಯ ಬಳಕೆ ಸಂಪೂರ್ಣ ಅಸಾಧ್ಯವಾಗಿದೆ,’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಆರೆಸ್ಸೆಸ್ ವಿರುದ್ಧ ಕ್ರಮಕ್ಕೆ‌ ದಲಿತ ಸೇನೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರು ಮುಂದುವರಿದು, ‘ಶೌಚಾಲಯದ ಸುತ್ತಮುತ್ತ ಮುಳ್ಳಿನ ಕಂಟಿಗಳು ಬೆಳೆದು ಪ್ರದೇಶ ಅಸೌಕರ್ಯಕರ ಸ್ಥಿತಿಯಲ್ಲಿದೆ. ಸಾರ್ವಜನಿಕರ ಆರೋಗ್ಯ ಮತ್ತು ಸೌಕರ್ಯವನ್ನು ಪರಿಗಣಿಸಿ, ಮುಳ್ಳಿನ ಕಂಟಿಗಳನ್ನು ತೆಗೆದು ಶೌಚಾಲಯವನ್ನು ಸಂಪೂರ್ಣ ದುರಸ್ಥಿಗೊಳಿಸಬೇಕು. ನಳಗಳು ಹಾಗೂ ನೀರಿನ ಟ್ಯಾಂಕ್ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ಸಾರ್ವಜನಿಕರಿಗೆ ಸುಲಭವಾಗಿ ಬಳಸುವಂತಾಗುವಂತೆ ಕ್ರಮ ಕೈಗೊಳ್ಳಬೇಕು,’ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...