ಯಾದಗಿರಿ | ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರು; ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ

Date:

ಯಾದಗಿರಿ ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರು ನಿಂತಿದ್ದು, ಚರಂಡಿಗಳು ಗಬ್ಬು ನಾರುತ್ತಿವೆ. ಚರಂಡಿಯಲ್ಲಿ ಬಿದ್ದಿರುವ ಮದ್ಯ ಬಾಟಲಿ, ಕಸಕಡ್ಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕು ಎಂದು ಸಾಮಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಆಗ್ರಹಿಸಿದ್ದಾರೆ.

“ಬೇಸಿಗೆ ಸಮಯದಲ್ಲಿ ಶೇ.45ರಷ್ಟು ತಾಪಮಾನ ಇದ್ದರೂ ಕೂಡಾ ಜಿಲ್ಲಾಡಳಿತ ಭವನದ ಎದುರು ಕಲುಷಿತ ನೀರಿನಿಂದ ತುಂಬಿದ್ದು, ಗಬ್ಬೆದ್ದು ನಾರುತ್ತಿದೆ. ಅಲ್ಲಿ ವಿಷ ಜಂತುಗಳು, ಮದ್ಯದ ಬಾಟಲಿಗಳು ರಾರಾಜಿಸುತ್ತಿವೆ. ಜಿಲ್ಲಾಡಳಿತ ಭವನದ ಆವರಣದ ಕಸ ಕಡ್ಡಿಗಳನ್ನು ಪ್ರತಿಭಟನಾ ಸ್ಥಳದಲ್ಲಿ ಹಾಕಿ ಬೆಂಕಿ ಹಚ್ಚಿದ್ದರಿಂದ ಅಲ್ಲಿ ಗಿಡ-ಗಂಟಿಗಳು, ಸರ್ಕಾರದ ನಾಮಫಲಕಗಳಿಗೆ ಹಾನಿಯಾಗಿದ್ದು, ಜಾಲಿ ಗಿಡ-ಗಂಟಿಗಳು ಬೆಳೆದು ನಿಂತಿವೆ” ಎಂದರು.

“ಒಂದು ದಿನದ ಒಳಗಾಗಿ ಪ್ರತಿಭಟನಾ ಸ್ಥಳವನ್ನು ಸ್ವಚ್ಛಗೊಳಿಸಿ, ಪ್ರತಿಭಟನಾಕಾರರಿಗೆ ವಿದ್ಯುತ್‌ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್‌ ಸಿಇಒ ಕಲುಷಿತ ಪ್ರದೇಶದ ಮುಂದೇಯೇ ಓಡಾಡುತ್ತಾರೆ. ಆದರೂ ಗಮನ ಹರಿಸದೆ ಜಾಣ ಕುರುಡು ಪ್ರದರ್ಶಿಸಿದ್ದು, ನಿರ್ಲಕ್ಷ್ಯ ವಹಿಸಿದ್ದಾರೆ. ಇದೇ ಪ್ರದೇಶದಲ್ಲಿ ಖಾನಾವಳಿ, ಚಹಾದ ಅಂಗಡಿ, ಪಾನಿಪುರಿ ಅಂಗಡಿ ಮತ್ತು ಹಣ್ಣಿನ ಅಂಗಡಿಗಳು ಇವೆ. ಇಂತಹ ಕಲುಷಿತ ವಾತಾವರಣದಲ್ಲಿ ಜನಸಾಮಾನ್ಯರು ಆಹಾರ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇವೆಲ್ಲ ಗೊತ್ತಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಸ ವಿಲೇವಾರಿ ಕ್ರಮ ಕೈಗೊಳ್ಳದ ಪಿಡಿಒ; ಪಂಚಾಯತಿ ಎದರು ಕಸದ ರಾಶಿ

“ಜಿಲ್ಲಾಡಳಿತ ಭವನದ ಮುಂದೆಯೇ ಕಲುಷಿತ ಪರಿಸ್ಥಿತಿ ಇರುವಾಗ ಗ್ರಾಮೀಣ, ನಗರ ಪ್ರದೇಶದಲ್ಲಿ ಹೇಗೆ ಇರಬಹುದು. ಜನರು ಸಾಂಕ್ರಾಮಿಕ ರೋಗದಿಂದ ಬಳಲಿ ಆಸ್ಪತ್ರೆ ಸೇರುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಜಿಲ್ಲಾಡಳಿತ ಭವನ ಕೂಡಲೇ ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತೆ, ವಿದ್ಯುತ್, ನೀರಿನ ವ್ಯವಸ್ಥೆ ಮಾಡಿಕೊಡಬೇಕು” ಎಂದು ಸ್ಥಳೀಯ ನಿವಾಸಿ ಪ್ರಭು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...