ಯಾದಗಿರಿ | ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ : ಸಂಯುಕ್ತ ಹೋರಾಟ ಸಮಿತಿಯಿಂದ ಪ್ರತಿಭಟನೆ

Date:

ಆಗಸ್ಟ್ 9, 1942 ರ ‘ಭಾರತ ಬಿಟ್ಟು ತೊಲಗಿ’ ಚಳವಳಿಯ 83 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಸ್‌ಕೆಎಂ
ಹಾಗೂ ಕೇಂದ್ರೀಯ ಕಾರ್ಮಿಕ ಸಂಘಗಳು ಜಂಟಿ ಕರೆಯ ಮೇರೆಗೆ ನೀಡಿರುವ ಪ್ರಯುಕ್ತ ಸಂಯುಕ್ತ ಹೋರಾಟ ಕರ್ನಾಟಕ ಯಾದಗಿರಿ ಸಮಿತಿ ನೇತೃತ್ವದಲ್ಲಿ ‘ಬಹುರಾಷ್ಟ್ರೀಯ ಕಂಪನಿಗಳೇ ದೇಶ ಬಿಟ್ಟು ತೊಲಗಿ”, “ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ” ಘೋಷಣೆಯಡಿಯಲ್ಲಿ ಯಾದಗಿರಿ ಜಿಲ್ಲಾಧಿಕಾರಿಯವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಚನ್ನಪ್ಪ ಆನೇಗುಂದಿ ಮಾತನಾಡಿ, “ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕಾರ್ಪೊರೇಟ್-ಕೋಮುವಾದಿ ಧೋರಣೆಗಳಿಂದಾಗಿ ದೇಶದ ದುಡಿಯುವ ಜನತೆ ಆಪಾರ ಪ್ರಮಾಣದ ಸಂಕಟವನ್ನು ಅನುಭವಿಸುವಂತಾಗಿದೆ. ನಮ್ಮ ಬದುಕಿನ ಪ್ರತಿಯೊಂದು ವಲಯದಲ್ಲೂ ದೇಶ ಹಾಗೂ ವಿದೇಶದ ಬಹುರಾಷ್ಟ್ರೀಯ ಹಾಗೂ ಗುತ್ತೇದಾರಿ ಕಂಪನಿಗಳ ಹಿಡಿತ ಬಲಗೊಳ್ಳುತ್ತಿದೆ ಎಂದರು.

“ಸಂವಿಧಾನ ಖಾತರಿ ಪಡಿಸಿರುವ ಪ್ರತಿಯೊಂದು ಹಕ್ಕಿಗೂ ಗಂಭೀರ ತೊಂದರೆ ಉಂಟು ಮಾಡುತ್ತಿದೆ. ದಿವಾಳಿಕೋರ ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣ ನೀತಿಗಳು ರೈತರ, ಕಾರ್ಮಿಕರ, ದಲಿತರ, ಮಹಿಳೆಯರ, ವಿದ್ಯಾರ್ಥಿ ಯುವಜನರ ಬದುಕಿಗೆ ಎಷ್ಟೊಂದು ವಿನಾಶಕಾರಿಯಾಗಿವೆ ಎಂಬುದು ಈ ನೀತಿಗಳ ಮೂವತ್ತು ವರ್ಷಗಳ ಆಳ್ವಿಕೆಯಲ್ಲಿ ಯಾವುದೇ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಸ್ಥಿತಿ ಹೀಗಿದ್ದರೂ ದೇಶದ ಕೃಷಿ ವಲಯವನ್ನು ಹಾಗೂ ಕೃಷಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿದೇಶಿ ದೈತ್ಯ ಬಹುರಾಷ್ಟ್ರೀಯ ಕಂಪನಿಗಳಿಗೆ ಸುಂಕ ರಹಿತವಾಗಿ ತೆರೆಯಲಾಗುತ್ತಿದೆ. ಸಂಸತ್ತಿನಲ್ಲಾಗಲಿ ಹಾಗೂ ರೈತರ, ಕಾರ್ಮಿಕರ ಜೊತೆಯಲ್ಲಾಗಲಿ ಯಾವುದೇ ರೀತಿ ಚರ್ಚೆ ನಡೆಸದೇ ದೇಶದ ಸ್ವಾವಲಂಬಿ ಹಾಗೂ ಸಾರ್ವಭೌಮಕ್ಕೆ ತೊಂದರೆ ಉಂಟು ಮಾಡುವ ಅಸಮಾನ ಸಮಗ್ರ ಆರ್ಥಿಕ ಹಾಗೂ ವಾಣಿಜ್ಯ ಒಪ್ಪಂದಕ್ಕೆ ಬ್ರಿಟನ್ ಜೊತೆ ಭಾರತ ಸಹಿ ಮಾಡಿದೆ. ಇದೇ ರೀತಿಯ ಒಪ್ಪಂದಕ್ಕೆ ಅಮೇರಿಕಾ ಸಹಿ ಹಾಕುವಂತೆ ಭಾರತ ಒಂದು ಸಾರ್ವಭೌಮ ಹಾಗೂ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಎಂಬುದನ್ನು ಮರೆತು ಬೆದರಿಕೆ ಹಾಗೂ ಒತ್ತಡ ಹಾಕುತ್ತಿದೆ’ ಎಂದು ಆರೋಪಿಸಿದರು.

“ಕೆಲವೇ ಕೆಲವು ದೊಡ್ಡ ದೊಡ್ಡ ಕಾರ್ಪೊರೇಟ್ ಕಂಪನಿಗಳ ಲಾಭದ ಹಿತರಕ್ಷಣೆಗಾಗಿ ಕೋಟ್ಯಂತರ ಭಾರತೀಯರ ಹಿತವನ್ನು ಬಲಿಗೊಡುವುದನ್ನು ಕೂಡಲೇ ಭಾರತ ಸರ್ಕಾರ ನಿಲ್ಲಿಸಬೇಕು. ಭಾರತದ ಒಟ್ಟಾರೆ ಹಿತಕ್ಕೆ ವಿರುದ್ಧವಾಗಿರುವ ಬ್ರಿಟನ್ ಜೊತೆಗಿನ ಒಪ್ಪಂದವನ್ನು ಅಮಾನುತು ಮಾಡಬೇಕು ಹಾಗೂ ಸಾಮ್ರಾಜ್ಯಶಾಹಿ ಆಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ರವರ ಸುಂಕ ಹೇರಿಕೆ ಹಾಗೂ ದಂಡದ ಬೆದರಿಕೆಯನ್ನು ಸಮರ್ಥವಾಗಿ ಎದುರಿಸಿ ಭಾರತದ ಸಾರ್ವಭೌಮತ್ವವನ್ನು ಕಾಪಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು. ಪ್ರತಿಭಟನೆ ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಆಸರೆಯಾಗಿದ್ದ ಮನೆಯೂ ಮಳೆಗೆ ಕುಸಿತ: ನೆರವಿನ ನಿರೀಕ್ಷೆಯಲ್ಲಿ ದೋರನಹಳ್ಳಿ ನಿವಾಸಿ ಅಮಲವ್ವ

ಈ ಸಂದರ್ಭದಲ್ಲಿ ಎಐಕೆಕೆಎಂಎಸ್ ಜಿಲ್ಲಾಧ್ಯಕ್ಷ ಶರಣುಗೌಡ ಗೂಗಲ್, ಎಐಎಡ್ಬ್ಲೂ ಜಿಲ್ಲಾಧ್ಯಕ್ಷ ದೌವಲ್ ಸಾಬ್ ನಧಾಫ್, ಕೆಆರ್‌ಆರ್‌ಎಸ್ ತಾಲೂಕು ಕಾರ್ಯದರ್ಶಿ ಫಖೀರ್ ಅಹೆಮ್ಮದ್, ಕೆಆರ್‌ಆರ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಮಲ್ಕಣ ಚಿಂತೆ, ಕೆಪಿಆರ್‌ಎಸ್‌ ತಾಲೂಕು ಅಧ್ಯಕ್ಷ ಭೀಮಣ್ಣ ಪಟ್ಟೇದಾರ್, ಎಐಕೆಕೆಎಂಎಸ್‌ ಜಿಲ್ಲಾ ಕಾರ್ಯದರ್ಶಿ ಭೀಮರೆಡ್ಡಿ ಹೀರೆಭಾನರ್, ಕೆಪಿಆರ್‌ಎಸ್‌ ತಾಲೂಕು ಕಾರ್ಯದರ್ಶಿ ಭೀಮರಾಯ ಪೂಜಾರಿ, ಎಐಎಡ್ಬ್ಲೂ ಜಿಲ್ಲಾ ಕಾರ್ಯದರ್ಶಿ ಅಯ್ಯಣ್ಣ ಅನ್ಸೂರ್, ನವಕರ್ನಾಟಕ ರೈತ ಸಂಘ ರಾಜ್ಯ ಮುಖಂಡ ಚನ್ನರೆಡ್ಡಿ ಪಾಟೀಲ್, ಕೆಆರ್‌ಆರ್‌ಎಸ್ ಹಸಿರು ಸೇನೆ ಅಶೋಕ, ಕೆಆರ್‌ಆರ್‌ಎಸ್ ಹಸಿರು ಸೇನೆ ದೇವಿಂದ್ರಗೌಡ ಪಾಟೀಲ್, ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...