ಯಾದಗಿರಿ | ಮಳೆ ವಿಳಂಬದಿಂದ ಬೆಳೆ ವಿಫಲ; ಪರಿಹಾರಕ್ಕೆ ರೈತರ ಆಗ್ರಹ

Date:

ಪ್ರಸ್ತುತ ವರ್ಷ ಮುಂಗಾರು ಮಳೆ ವಿಳಂಬದಿಂದ ರೈತರ ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟ ಪರಿಹಾರ ಹಾಗೂ ಕಾಮಗಾರಿ ಉದ್ಯೋಗ ನೀಡಬೇಕು ಎಂದು ಆಲ್ ಇಂಡಿಯಾ ರೈತ ಕೃಷಿ ಕಾರ್ಮಿಕ ಸಂಘಟನೆ ಯಾದಗಿರಿ ಜಿಲ್ಲಾ ಸಮಿತಿ ಮನವಿ ಮಾಡಿದೆ.

ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ಮುಂಗಾರು ಅಭಾವದ ಹಿನ್ನೆಲೆಯಲ್ಲಿ ಬೆಳಹಾನಿ ಆಗಿರುವುದರಿಂದ ರೈತರಿಗೆ ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಬೇಕು. ರೈತರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು. ಮನರೇಗಾ ಯೋಜನೆಯಡಿ ವರ್ಷಪೂರ್ತಿ ಉದ್ಯೋಗ ನೀಡಬೇಕು. ಬಾಕಿ ಉಳಿದಿರುವ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಸಿಎಂ ಸಿದ್ದರಾಮಯ್ಯ

“ಸರ್ಕಾರದ ದುಂದು ವೆಚ್ಚಗಳನ್ನು ಕಡಿತಗೊಳಿಸಿ, ರೈತರಿಗೆ ಬಿತ್ತನೆಗೆ ಬೀಜ, ರಸಗೊಬ್ಬರ ಇತ್ಯಾದಿಗಳನ್ನು ಉಚಿತವಾಗಿ ವಿತರಿಸಬೇಕು. ನಿಗದಿತ ಪೂರ್ಣ ಪ್ರಮಾಣದ ಮಳೆಯಾಗದೇ  ಬರ ಪರಿಸ್ಥಿತಿ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸಲು ಪೂರ್ವ ಯೋಜನೆ ಮಾಡಿಕೊಂಡು, ಆಡಳಿತವನ್ನು ಸನ್ನದ್ದ ರೀತಿಯಲ್ಲಿ ಇಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಭೀಮರಡ್ಡಿ, ಜಿಲ್ಲಾ ಉಪಾಧ್ಯಕ್ಷ ಜಮಾಲ್ ಸಾಬ್, ತಾಲೂಕು ಕಾರ್ಯದರ್ಶಿ ಸುಭಾಷ್ ಚಂದ್ರ ಬಾವನೋರ ಹಾಗೂ ರೈತ ಮಹಿಳೆಯರು ಮತ್ತು ನೂರಾರು ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...